ಬೆಂಗಳೂರು:
ಶಾಲಾ ಮಕ್ಕಳಿಗೆ ಇನ್ನು ರಾಗಿ ಮಾಲ್ಟ್ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದರು.
ಶಾಲಾ ಮಕ್ಕಳಿಗಾಗಿ ಪೌಷ್ಟಿಕ ಆಹಾರ ನೀಡಲು ನಿರ್ಧರಿಸಲಾಗಿದೆ. ಈಗಾಗಲೇ ನಡೆಸುತ್ತಿರುವ ಮಾಧ್ಯಾಹ್ನದ ಊಟ ಯೋಜನೆ ಚೆನ್ನಾಗಿ ಸಾಗುತ್ತಿದೆ ಎಂದರು.
ಮಕ್ಕಳಿಗೆ ಪೌಷ್ಟಿಕಾಂಶ ನೀಡುವ ನಿಟ್ಟಿನಲ್ಲಿ ರಾಗಿ ಮಾಲ್ಟ್ ನೀಡುವ ನಿರ್ಧಾರ ಕೈಗೊಂಡಿದ್ದೇವೆ. ಮುಂದಿನ ತಿಂಗಳಿಂದ ರಾಗಿ ಮಾಲ್ಟ್ ಭಾಗ್ಯ ಯೋಜನೆಗೆ ಚಾಲನೆ ನೀಡಲಾಗುವುದು ತಿಳಿಸಿದರು.
ಈಗಾಗಲೇ ಒಂದು ಎನ್ಜಿಒ ಇದನ್ನು ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಿದ್ದು ಅದು ಯಶಸ್ವಿಯಾಗಿದೆ. ಹೀಗಾಗಿ ಇದನ್ನು ಎಲ್ಲ ಶಾಲೆಗಳಲ್ಲಿ ಜಾರಿ ಮಾಡಲು ನಿರ್ಧಾರ ಮಾಡಲಾಗಿದೆ. ಕ್ಷೀರಭಾಗ್ಯದ ಹಾಲಿನ ಜೊತೆಗೆ ಬೆಳಗ್ಗೆ ರಾಗಿಗಂಜಿ ಕೊಡುವ ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.