Home ಬೆಳಗಾವಿ ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲಿ ಪ್ರಾರಂಭ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

45
0
Karnataka Chief Minister Basavaraj Bommai on Sunday said work on the Dharwad-Belagavi railway project would be launched soon.

ಬೆಳಗಾವಿ :

ಧಾರವಾಡ ಮತ್ತು ಬೆಳಗಾವಿ ರೈಲು ಸಂಪರ್ಕ ಯೋಜನೆಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗಾವಿಯ ತಿಲಕವಾಡಿಯ ಮಿಲೇನಿಯಮ್ ಗಾರ್ಡನ್ ಬಳಿ ಆಯೋಜಿಸಿದ್ದ ಬಿ.ಎಸ್.ಚನ್ನಬಸಪ್ಪ ಟೆಕ್ಸ್ ಟೈಲ್ ಶೋರೂಂ ಉದ್ಘಾಟಿಸಿ ಮಾತನಾಡಿದರು.

Also Read: Work on Dharwad-Belagavi Railway project set to start soon: CM Bommai

ಬೆಳಗಾವಿ ಪ್ರಮುಖವಾದ ವಾಣಿಜ್ಯ ಕೇಂದ್ರ. ಇಲ್ಲಿ ಹಲವಾರು ಉದ್ದಿಮೆಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಧಾರವಾಡ ಮತ್ತು ಬೆಳಗಾವಿ ರೈಲು ಸಂಪರ್ಕ ಯೋಜನೆ ಅನುದಾನ ಬಿಡುಗಡೆಗೆ ಮಂಜೂರಾತಿ ನೀಡಿದ್ದು, ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಆದಷ್ಟು ಬೇಗನೆ ಕಾಮಗಾರಿಗೆ ಚಾಲನೆಯನ್ನು ನೀಡಲಾಗುವುದು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಅನುಮತಿಗಳನ್ನು ನೀಡಿದೆ. ಬೆಳಗಾವಿಯಲ್ಲಿ ಹಲವಾರು ಅಭಿವೃದ್ಧಿಯ ಕಾರ್ಯಕ್ರಮಗಳು ಕೈಗೊಳ್ಳಲಾಗುತ್ತಿವೆ ಎಂದು ತಿಳಿಸಿದರು.

ಬಿ.ಎಸ್.ಚನ್ನಬಸಪ್ಪ – ನೈಜ್ಯವಾಗಿ ಬೆಳೆದ ಬ್ರ್ಯಾಂಡ್ ನೇಮ್ :

ಬಿ.ಎಸ್.ಚನ್ನಬಸಪ್ಪ ಟೆಕ್ಸ್ ಟೈಲ್ ಶೋರೂಂ ನಲ್ಲಿ ಉತ್ತಮ ಗುಣಮಟ್ಟದ ವಸ್ತ್ರಗಳು ವಿವಿಧ ದರಗಳಲ್ಲಿ ಒಂದೇ ಸೂರಿನಡಿ ಲಭ್ಯವಿದ್ದು, ವಸ್ತ್ರಪ್ರಿಯರಿಗೆ ಸಂತೋಷವನ್ನು ನೀಡಲಿದೆ. ಉತ್ಕೃಷ್ಟ ಗುಣಮಟ್ಟ ಹಾಗೂ ಪ್ರಾಮಾಣಿಕ ಸೇವೆಯನ್ನು ಚನ್ನಬಸಪ್ಪ ಸಂಸ್ಥೆ ನೀಡುತ್ತಾ ಬಂದಿದ್ದು, ಜನರ ವಿಶ್ವಾಸವನ್ನು ಗಳಿಸಿದೆ. ಹಲವಾರು ಜವಳಿ ಸಂಸ್ಥೆಗಳು ಬ್ರ್ಯಾಂಡ್ ನೇಮ್ ಗಾಗಿ ಕೋಟ್ಯಾಂತರ ಹಣ ಖರ್ಚು ಮಾಡಿದರೆ, ಬಿಎಸ್ ಚನ್ನಬಸಪ್ಪ ತನ್ನ ಸೇವೆ, ಪರಿಶ್ರಮ ಹಾಗೂ ಪ್ರಾಮಾಣಿಕತೆಯಿಂದ ನೈಜ್ಯವಾಗಿ ಬ್ರ್ಯಾಂಡ್ ನೇಮ್ ಆಗಿ ಬೆಳೆದಿದೆ. ಬಿಎಸ್ ಚನ್ನಬಸ್ಪಪ್ಪ ಅವರ ದೂರದೃಷ್ಟಿ ಹಾಗೂ ಅವರ ಮುಂದಿನ ಪೀಳಿಗೆ ಕ್ರಿಯಾಶೀಲರಾಗಿದ್ದಾರೆ. ಹುಬ್ಬಳ್ಳಿ, ಬೆಳಗಾವಿ, ದಾವಣಗೆರೆ , ಹೀಗೆ ಬಿಎಸ್ ಸಿ ಮಳಿಗೆಗಳು ಬೆಂಗಳೂರಿನವರೆಗೂ ಬೆಳೆಯಬೇಕು. ಕರ್ನಾಟಕದವರೇ ಆದ ಬಿಎಸ್ ಸಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಕನ್ನಡದವಲ್ಲಿ ವ್ಯಾಪಾರ ಮಾಡುವ ಯುಕ್ತಿ , ಶಕ್ತಿ ಇದೆ, ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ ಎಂಬುದನ್ನು ಬಿಎಸ್ ಸಿ ಕುಟುಂಬದವರು ನಿರೂಪಿಸಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಉಮೇಶ್ ಕತ್ತಿ, ಬೈರತಿ ಬಸವರಾಜ್, ಕೆ ಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ್ ಕೋರೆ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here