Home ಚಿಕ್ಕಬಳ್ಳಾಪುರ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿದ ಡಿಎಚ್ಓ

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿದ ಡಿಎಚ್ಓ

934
0
Advertisement
bengaluru

ಚಿಕ್ಕಬಳ್ಳಾಪುರ:

ವರ್ಲಕೊಂಡ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದ ವ್ಯಕ್ತಿಯನ್ನು ತಮ್ಮ ವಾಹನದಲ್ಲಿ ಸಾಗಿಸಿ, ನಂತರ ಆಂಬುಲೆನ್ಸ್ ನಲ್ಲಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಮಾನವೀಯತೆ ಮೆರೆದಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಇಂದಿರಾ ಆರ್ ಕಬಾಡೆ ಅವರು ಬಾಗೇಪಲ್ಲಿ ತಾಲೂಕಿನ ಪಾರ್ವತಿಪುರ ತಾಂಡಾಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದರು. ಈ ವೇಳೆಯಲ್ಲಿ ವರ್ಲಕೊಂಡ ಬಳಿ ಅಪಘಾತದ ಸಂಭವಿಸಿ ಗಾಯಗೊಂಡು ನತಳುತ್ತಿದ್ದ ವ್ಯಕ್ತಿಯನ್ನು ಕಂಡು ತಕ್ಷಣ ವಾಹನವನ್ನು ನಿಲ್ಲಿಸಿ, ತಮ್ಮ ವಾಹನದಲ್ಲಿಯೇ ಸಮೀಪದ ಆಸ್ಪತ್ರೆಗೆ ಆ ವ್ಯಕ್ತಿಯನ್ನು ಸಾಗಿಸಿದ್ದಾರೆ.

ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಂಬುಲೆನ್ಸ್ ಬರುವವರೆಗೆ ಕಾಯದೆ ತಮ್ಮ ವಾಹನದಲ್ಲಿಯೇ ಗಾಯಗೊಂಡಿರುವ ವ್ಯಕ್ತಿಯನ್ನು ಪ್ರಥಮ ಚಿಕಿತ್ಸೆ ನೀಡುವ ಸಲುವಾಗಿ ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದರು. ಆ ಬಳಿಕ 108 ತುರ್ತು ವಾಹನದ ಮೂಲಕ ಗಾ ಯಗೊಂಡ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾ ಪುರ ಜಿಲ್ಲಾಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದಿದ್ದಾರೆ. ಡಿಎಚ್ಓ ಅವರ ಕಾರ್ಯವೈಖರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

bengaluru bengaluru

bengaluru

LEAVE A REPLY

Please enter your comment!
Please enter your name here