ಏಪ್ರಿಲ್ 7ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಇತರ ಅಧಿಕಾರಿಗಳ ಜೊತೆ ಸಭೆ ಬಳಿಕ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗುವುದು
ಮೈಸೂರು:
ಮೈಸೂರು ಜಿಲ್ಲೆಯಲ್ಲಿ ಚಿತ್ರನಗರಿಯನ್ನು ನಿರ್ಮಿಸುವುದಕ್ಕೆ ಇದೇ ತಿಂಗಳು ಗುದ್ದಲಿ ಪೂಜೆ ಮಾಡುವ ಉದ್ದೇಶದಿಂದ ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್. ಹರ್ಷ ಅವರು ಸ್ಥಳ ಪರಿಶೀಲನೆ ಮಾಡಿದ್ದಾರೆ.
ಹರ್ಷ ಸ್ಥಳಕ್ಕೆ ಆಗಮಿಸಿ ಹಿಮ್ಮಾವು ಸಮೀಪದಲ್ಲಿನ ಸ್ಥಳ ಪರಿಶೀಲನೆ ಮಾಡಿದ್ದಾರೆ. 2021-22ರ ಬಜೆಟ್ನಲ್ಲಿ ಮುಖ್ಯಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿರುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ಕಾರ್ಯ ಚುರುಕಾಗಿ ನಡೆಯುತ್ತಿದೆ.
ಏಪ್ರಿಲ್ 7ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಇತರ ಅಧಿಕಾರಿಗಳ ಜೊತೆ ಸಭೆ ಬಳಿಕ ಅಂತಿಮ ರೂಪುರೇಷೆ ಕೈಗೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.