Home ಸಿನಿಮಾ ವಾರ್ತಾ ಇಲಾಖೆ ಆಯುಕ್ತರಿಂದ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಿಸುವ ಸ್ಥಳ ಪರಿಶೀಲನೆ

ವಾರ್ತಾ ಇಲಾಖೆ ಆಯುಕ್ತರಿಂದ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಿಸುವ ಸ್ಥಳ ಪರಿಶೀಲನೆ

105
0

ಏಪ್ರಿಲ್​ 7ರಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಹಾಗೂ ಇತರ ಅಧಿಕಾರಿಗಳ ಜೊತೆ ಸಭೆ ಬಳಿಕ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗುವುದು

ಮೈಸೂರು:

ಮೈಸೂರು ಜಿಲ್ಲೆಯಲ್ಲಿ ಚಿತ್ರನಗರಿಯನ್ನು ನಿರ್ಮಿಸುವುದಕ್ಕೆ ಇದೇ ತಿಂಗಳು ಗುದ್ದಲಿ ಪೂಜೆ ಮಾಡುವ ಉದ್ದೇಶದಿಂದ ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್. ಹರ್ಷ ಅವರು ಸ್ಥಳ ಪರಿಶೀಲನೆ ಮಾಡಿದ್ದಾರೆ.

ಹರ್ಷ ಸ್ಥಳಕ್ಕೆ ಆಗಮಿಸಿ ಹಿಮ್ಮಾವು ಸಮೀಪದಲ್ಲಿನ ಸ್ಥಳ ಪರಿಶೀಲನೆ ಮಾಡಿದ್ದಾರೆ. 2021-22ರ ಬಜೆಟ್​ನಲ್ಲಿ ಮುಖ್ಯಂತ್ರಿ ಬಿ.ಎಸ್​ ಯಡಿಯೂರಪ್ಪ ಘೋಷಿಸಿರುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ಕಾರ್ಯ ಚುರುಕಾಗಿ ನಡೆಯುತ್ತಿದೆ.

ಏಪ್ರಿಲ್​ 7ರಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಹಾಗೂ ಇತರ ಅಧಿಕಾರಿಗಳ ಜೊತೆ ಸಭೆ ಬಳಿಕ ಅಂತಿಮ ರೂಪುರೇಷೆ ಕೈಗೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here