ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನವೆಂಬರ್ 7ರಂದು ಪೀಣ್ಯದ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಥಳ ಮತ್ತು ಸಮಯ
- ದಿನಾಂಕ: ನವೆಂಬರ್ 7.
- ಸಮಯ: ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2.00ರವರೆಗೆ.
- ಸ್ಥಳ: ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಸಿ.ಒ.ಇ. ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ತುಮಕೂರು ರಸ್ತೆ, ಪೀಣ್ಯ, ಬೆಂಗಳೂರು.
ಯಾರು ಭಾಗವಹಿಸಬಹುದು
10ನೇ ತರಗತಿ ಉತ್ತೀರ್ಣರು, ಪಿ.ಯು.ಸಿ. ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ, 35 ವರ್ಷದೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅದೇ ವಿಳಾಸದ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 7975294271ಅನ್ನು ಸಂಪರ್ಕಿಸಬಹುದು.
