Home ಕರ್ನಾಟಕ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ: ನ್ಯಾಯಾಲಯ ಏನೇ ತೀರ್ಪು ನೀಡಿದರು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ

ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ: ನ್ಯಾಯಾಲಯ ಏನೇ ತೀರ್ಪು ನೀಡಿದರು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ

21
0
Disproportionate assets case| I will accept whatever judgment court gives as God's gift says DK Shivakumar

ಸಕಲೇಶಪುರ (ಹೆಬ್ಬನಹಳ್ಳಿ), ಆ. 29: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರೂ ನಾನು ಅದನ್ನು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸಲು ಸಿಬಿಐ ಹೈಕೋರ್ಟಿಗೆ ಅರ್ಜಿ ಸಲ್ಲಿಸಿರುವ ಪ್ರಕರಣದ ಕುರಿತ ತೀರ್ಪಿನ ಬಗ್ಗೆ ಕೇಳಿದಾಗ “ನನಗೆ ದೇವರ ಮೇಲೆ ಮತ್ತು ನ್ಯಾಯಾಲಯದ ಮೇಲೆ ನಂಬಿಕೆ ಇದೆ” ಎಂದರು.

ಎತ್ತಿನಹೊಳೆ ಕಾಮಗಾರಿ ವೀಕ್ಷಣೆ ನಂತರ ಸಕಲೇಶಪುರದ ಹೆಬ್ಬನಹಳ್ಳಿ ಬಳಿ ಮಾಧ್ಯಮಗಳಿಗೆ ಪ್ರಶ್ನೆಗಳಿಗೆ ಗುರುವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು.

ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ಮೇಲೆ ದೂರು ದಾಖಲಾಗಿರುವ ಬಗ್ಗೆ ಕೇಳಿದಾಗ ” ಸಿಎಂ ಏನು ಮಾಡಿದ್ದಾರೆ ಎಂದು ಅವರ ಮೇಲೆ ಎಲ್ಲಾ ಏಕೆ ಮುಗಿಬೀಳುತ್ತಿದ್ದಾರೋ ನನಗೆ ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಏನು ಆಗುವುದಿಲ್ಲ. ಜಮೀನು ಕಳೆದುಕೊಂಡಿರುವುದಕ್ಕೆ ಪರಿಹಾರವಾಗಿ ಬಿಜೆಪಿಯವರೇ ನಿವೇಶನ ನೀಡಿದ್ದಾರೆ. ಸಿಎಂ ಅವರು ಎಲ್ಲೂ ಪ್ರಭಾವವನ್ನು ಬೀರಿಲ್ಲ, ಸಹಿಯನ್ನು ಮಾಡಿಲ್ಲ” ಎಂದರು.

ನಕಲಿಗಲ್ಲ ಅಸಲಿಗೆ ಉತ್ತರ ಕೊಡುತ್ತೇನೆ: ಜಮೀನನ್ನು ಡೀನೋಟಿಫಿಕೇಶನ್ ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ ” ನಕಲಿಗೆಲ್ಲ ನಾನು ಉತ್ತರ ಕೊಡುವುದಿಲ್ಲ. ಅಸಲಿಗೆ ಮಾತ್ರ ಉತ್ತರ ಕೊಡುತ್ತೇನೆ” ಎಂದು ತಿರುಗೇಟು ನೀಡಿದರು.

LEAVE A REPLY

Please enter your comment!
Please enter your name here