ಬೆಂಗಳೂರು, ಮಾರ್ಚ್ 12 (ಕರ್ನಾಟಕ ವಾರ್ತೆ) : ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕ್ರಮಬದ್ಧವಲ್ಲದ ಆಸ್ತಿಗಳಗೆ ನಮೂನೆ 11 ಬಿ ವಿತರಿಸಲಾಗುತ್ತಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳು) ನಿಯಮಗಳು -2006ರ ನಿಯಮ 28 ಮತ್ತು 30 ರಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕ್ರಮಬದ್ಧ ಆಸ್ತಿಗಳಿಗೆ ನಮೂನೆ-9 ಹಾಗೂ 11 ಎ ಗಳನ್ನು ಹಾಗೂ 11ಎ ಗಳನ್ನು ಹಾಗೂ ಕ್ರಮಬದ್ಧವಲ್ಲದ ಆಸ್ತಿಗಳಿಗೆ ನಮೂನೆ 11 ಬಿ ಯನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಡಿಜಿಟಲ್ ಸಹಿಯ ಮೂಲಕ ವಿತರಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಅವರು ತಿಳಿಸಿದರು.
ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಚನ್ನಗಿರಿ ವಿಧಾನಸಭಾ ಸದಸ್ಯ ಬಸವರಾಜು ವಿ ಶಿವಗಂಗಾ ಇವರ ಪ್ರಶ್ನೆಗೆ ದಿನಾಂಕ: 14-06-2013ರ ನಂತರ ಭೂ ಪರಿವರ್ತನೆಯಾಗಿ ವಿನ್ಯಾಸ ನಕ್ಷೆ ಅನುಮೋದನೆಯಾದ ಆಸ್ತಿಗಳ್ನು ನೋಂದಣಿ ಮಾಡಲು ಅವಕಾಶವಿರುವುದಿಲ್ಲ. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಕ್ರಮಬದ್ಧವಾದ ನಿವೇಶನಗಳು ಮತ್ತು ಕಟ್ಟಡಗಳನ್ನು (ಸರ್ಕಾರಿ/ಸ್ಥಳೀಯ ಸಂಸ್ಥೆ/ಶಾಸನಬದ್ಧ ಸಂಸ್ಥೆ/ಅರಣ್ಯ ಭೂಮಿಯನ್ನು ಹೊರತುಪಡಿಸಿ) ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಪ್ರತ್ಯೇಕ ವಹಿಯಲ್ಲಿ ದಾಖಲಿಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ಕ್ಕೆ ತಿದ್ದುಪಡಿ ತರಲಾಗುತ್ತಿದೆ. ಅಧಿನಿಯಮಕ್ಕೆ ತರಲಾಗುವ ತಿದ್ದುಪಡಿಯನ್ವಯ ಈ ಸಂಬಂಧ ನಿಯಮಗಳನ್ನು ರೂಪಿಸಿ ದಿನಾಂಕ: 14-06-2013ಕ್ಕೂ ಮೊದಲು ಹಾಗೂ ನಂತರ ನೋಂದಣಿಯಾದ ಎಲ್ಲಾ ನಿವೇಶನಗಳು ಮತ್ತು ಕಟ್ಟಡಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ಖಾತೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಉತ್ತರಿಸಿದರು.