Home ಬೆಂಗಳೂರು ನಗರ Bengaluru Traffic Woes | ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಮೆಟ್ರೋ ಇನ್ನಿತರೆ ಸಾರಿಗೆ ವ್ಯವಸ್ಥೆಗಳ...

Bengaluru Traffic Woes | ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಮೆಟ್ರೋ ಇನ್ನಿತರೆ ಸಾರಿಗೆ ವ್ಯವಸ್ಥೆಗಳ ಸಂಪರ್ಕ ಕೊಂಡಿ ಯೋಜನೆ ಅಗತ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

59
0
DK Shivakumar | Metro and other transport links are necessary to reduce traffic congestion in Bengaluru
https://kannada.thebengalurulive.com/dk-shivakumar-metro-and-other-transport-links-are-necessary-to-reduce-traffic-congestion-in-bengaluru/

ಬೆಂಗಳೂರು:

ವಾರದಲ್ಲಿ ಮೂರು ದಿನ ಬೆಂಗಳೂರಿನಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುತ್ತಿದ್ದು, ಇದನ್ನು ಸುಧಾರಿಸಲು ಮೆಟ್ರೋ ಇನ್ನಿತರೆ ಸಾರಿಗೆ ವ್ಯವಸ್ಥೆಗಳ ಸಂಪರ್ಕಕೊಂಡಿ ಯೋಜನೆ ಅಗತ್ಯವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಹೊರ ವರ್ತುಲ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ಹೊರವರ್ತುಲ ರಸ್ತೆ ಕಂಪನಿಗಳ ಸಂಘದ (ORRCA) ಸದಸ್ಯರೊಂದಿಗೆ ಕಾಡುಬೀಸನಹಳ್ಳಿಯಲ್ಲಿ ನಡೆದ ಸಂವಾದ ಸಭೆಯಲ್ಲಿ ಅವರು: “ಜನರ ಸಮಯ ರಸ್ತೆಗಳಲ್ಲಿ ವ್ಯರ್ಥವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಬೆಂಗಳೂರಿನ ಐದನೇ ಒಂದು ಭಾಗದಷ್ಟು ಆದಾಯ ಹೊರ ವರ್ತುಲ ರಸ್ತೆಯ ಉದ್ದಿಮೆಗಳಿಂದಲೇ ಬರುತ್ತಿದೆ. ನಮಗೆ ಬೆಂಗಳೂರಿನ ಹಾಗೂ ಹೊರ ವರ್ತುಲ ರಸ್ತೆಯ ಉದ್ದಿಮೆಗಳ ಮಹತ್ವ ಮತ್ತಿತರ ವಿಚಾರಗಳ ಬಗ್ಗೆ ಅರಿವಿದೆ. ನಿಮಗೆ ಹಾಗೂ ನಿಮ್ಮ ನೌಕರರರಿಗೆ, ಆ ಭಾಗದ ನಿವಾಸಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಸಮಸ್ಯೆ ನಿವಾರಿಸುವುದೇ ನಮ್ಮ ಆದ್ಯತೆ,” ಎಂದರು.

ಹೆಚ್ಚು ಸಂಚಾರ ದಟ್ಟಣೆ ಉಂಟಾಗುವ 6 ರಿಂದ 8 ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಸಂಚಾರ ದಟ್ಟಣೆಗೆ ಇರುವ ಸಮಸ್ಯೆಗಳನ್ನು ಮೊದಲು ನಿವಾರಿಸಲಾಗುವುದು. ಮುಂದಿನ ಮೂರು ತಿಂಗಳಲ್ಲಿ ರಸ್ತೆ ಗುಂಡಿ ಸಮಸ್ಯೆ ಹಾಗೂ ಸಂಚಾರ ದಟ್ಟಣೆಗೆ ಕಾರಣವಾಗಿರುವ ಅನಧಿಕೃತ ಅಂಗಡಿ- ಮುಂಗಟ್ಟುಗಳನ್ನು ಗುರುತಿಸಿ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ತೆರವುಗೊಳಿಸಲಾಗುವುದು.

ಬೆಂಗಳೂರು ಯೋಜಿತ ನಗರವಲ್ಲ. ಕಳೆದ 30 ವರ್ಷಗಳಲ್ಲಿ ಹೆಚ್ಚು ಬೆಳವಣಿಗೆ ಕಂಡಿದೆ. ಇಲ್ಲಿ ಸಂಚಾರ ದಟ್ಟಣೆಯೊಂದೆ ಸಮಸ್ಯೆಯಲ್ಲ, ಘನತ್ಯಾಜ್ಯ ನಿರ್ವಹಣೆ, ಕುಡಿಯುವ ನೀರು, ವಸತಿ ಸೇರಿದಂತೆ ಅನೇಕ ಸಮಸ್ಯೆಗಳನ್ನು ಈ ನಗರ ಹೊಂದಿದೆ. ಇಷ್ಟೆಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಸವಾಲು ನಮ್ಮ ಮುಂದಿದೆ.

ಬೆಂಗಳೂರಿನ ಪೊಲೀಸ್, ಬಿಬಿಎಂಪಿ, ಬಿಡಿಎ, ಮೆಟ್ರೋ ಕಮಿಷನರ್‌ಗಳಿಗೆ ಸಂಚಾರ ದಟ್ಟಣೆ ಬಗ್ಗೆ ಅರಿವಿದೆ, ಅವರುಗಳು ಸಹ ಸರ್ಕಾರದ ಒತ್ತಾಸೆಯಂತೆ ಕೆಲಸ ಮಾಡಲಿದ್ದಾರೆ.

WhatsApp Image 2023 10 07 at 4.03.20 PM

ಬೆಂಗಳೂರಿನ ಸಾಮರ್ಥ್ಯಕ್ಕೆ ತಕ್ಕಂತೆ ತೆರಿಗೆ ಸಂಗ್ರಹವಾಗುತ್ತಿಲ್ಲ.

ಬೆಂಗಳೂರಿನ ಸಾಮರ್ಥ್ಯಕ್ಕೆ ಅನುಗುಣವಾಗಿ ತೆರಿಗೆ ಹಣ ಸಂಗ್ರಹವಾಗುತ್ತಿಲ್ಲ. ಈ ಬಗ್ಗೆ ನನಗೆ ಅಸಮಧಾನವಿದೆ. ಜನರು ಹಾಗೂ ಉದ್ದಿಮೆಗಳು ತಮ್ಮ ಆಸ್ತಿಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕು. ಬೆಂಗಳೂರಿನ ಐಟಿ ಕಂಪೆನಿಗಳು ಸೇರಿದಂತೆ ಇತರೇ ಉದ್ದಿಮೆಗಳ ಮಾಲೀಕರು ತಮ್ಮ ಸಿಎಸ್ಆರ್ ಹಣವನ್ನು ಗ್ರಾಮೀಣ ಭಾಗದ ಶಿಕ್ಷಣಕ್ಕೆ ಖರ್ಚು ಮಾಡಬೇಕು. ನಗರ ಭಾಗದ ಮಕ್ಕಳಿಗೆ ದೊರೆಯುತ್ತಿರುವ ಉತ್ತಮ ಗುಣಮಟ್ಟದ ಶಿಕ್ಷಣ ಗ್ರಾಮೀಣ ಭಾಗದ ಮಕ್ಕಳಿಗೂ ದೊರೆಯಬೇಕು ಎನ್ನುವ ಸರ್ಕಾರದ ಕನಸಿಗೆ ನೀವೆಲ್ಲಾ ಕೈಜೋಡಿಸಬೇಕು.

45 ಮೀಟರ್ ರಸ್ತೆ ಯೋಜನೆ ಪರಿಶೀಲನೆ

ಮಹದೇವಪುರ ವಲಯ ಹೊರ ವರ್ತುಲ ರಸ್ತೆಯಿಂದ ಭೋಗನಹಳ್ಳಿ, ಗುಂಜೂರು ಹಾಗೂ ವರ್ತೂರು ಮುಖಾಂತರ ಹೊಸ ಪಿ.ಆರ್.ಆರ್ ರಸ್ತೆಗೆ ಸಂಪರ್ಕ ಕಲ್ಪಿಸಲು 5.6 ಕಿ.ಮೀ ಉದ್ದದ 45 ಮೀಟರ್ ಅಗಲದ ರಸ್ತೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಪೈಕಿ 4 ಕಿ.ಮೀ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ 1.6 ಕಿ.ಮೀ ರಸ್ತೆ ಕಾಮಗಾರಿ ಬಾಕಿಯಿದೆ. ಬಾಕಿ ರಸ್ತೆ ಕಾಮಗಾರಿಯಲ್ಲಿ ರೈಲ್ವೆ ಮೇಲು ಸೇತುವೆ ಕಾಮಗಾರಿ ಹಾಗೂ ಅರಣ್ಯ ಇಲಾಖೆಯಿಂದ ಜಾಗ ಪಡೆಯಬೇಕಿದ್ದು, ಅಗತ್ಯ ಕ್ರಮಗಳನ್ನು ಕೈಗೊಂಡು ಬಾಕಿ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

LEAVE A REPLY

Please enter your comment!
Please enter your name here