ಕರ್ನಾಟಕದ ಅರಣ್ಯ, ವನ್ಯಜೀವಿ ರಕ್ಷಣೆಯಲ್ಲಿ ಪ್ರಾಣತ್ಯಾಗ ಮಾಡಿದ ಅರಣ್ಯ ಸಿಬ್ಬಂದಿಗೆ ಡಿ.ಕೆ. ಶಿವಕುಮಾರ್ ಗೌರವ ನಮನ
ಬೆಂಗಳೂರು: ಕರ್ನಾಟಕದ ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನು ರಕ್ಷಿಸುವ ವೇಳೆ ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಗೌರವ ನಮನ ಸಲ್ಲಿಸಿದರು. ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ನಡೆಯಿತು.
ರಾಜ್ಯದ ಅರಣ್ಯ ಮತ್ತು ವನ್ಯಜೀವಿ ಸಂಪತ್ತಿನ ರಕ್ಷಣೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿಯ ಸ್ಮರಣಾರ್ಥ ನಿರ್ಮಿಸಿರುವ ಹುತಾತ್ಮರ ಸ್ಮಾರಕಕ್ಕೆ ಶಿವಕುಮಾರ್ ಅವರು ಪುಷ್ಪಗುಚ್ಛವಿರಿಸಿ ಗೌರವ ಸಲ್ಲಿಸಿದರು.
ಅರಣ್ಯ ಭವನದಲ್ಲಿ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮುಖ್ಯಮಂತ್ರಿಗಳು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ, ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
