ಮೈಸೂರು:
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ಬೆಳಗ್ಗೆ ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು.
ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಇಂದು ಮೈಸೂರಿನ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲೆಂದು ವಿಶೇಷ ಪೂಜೆ ನೆರವೇರಿಸಲಾಯಿತು. pic.twitter.com/JGeX0xj2Zf
— DK Shivakumar (@DKShivakumar) May 9, 2023
ಮಧ್ಯಾಹ್ನ ಮೈಸೂರಿನ ಚಾಮುಂಡೇಶ್ವರಿ ದೇಗುಲಕ್ಕೆ ಒಟ್ಟಾಗಿ ತೆರಳಿದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಚಾಮುಂಡೇಶ್ವರಿಯಲ್ಲಿ ಚುನಾವಣೆಗೆ ಮುನ್ನ ವಿಶೇಷ ಪ್ರಾರ್ಥನೆ ಮಾಡಿದರು. ಕಾಂಗ್ರೆಸ್ ಗ್ಯಾರಂಟಿಯ ಪ್ರತಿಯನ್ನಿಟ್ಟು ವಿಶೇಷ ಪೂಜೆ ಸಲ್ಲಿಸಿದ್ದು ಕಂಡುಬಂತು.