ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್.
ಬೆಂಗಳೂರು: ತಂತ್ರಜ್ಞಾನ ಕಂಪನಿಗಳು ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಮನವಿ ಮಾಡಿದರು. ಕನ್ನಡದ ಹೆಸರಿನಲ್ಲಿ ಬೆದರಿಕೆ ಅಥವಾ ನೈತಿಕ ಪೊಲೀಸ್ಗಿರಿ ನಡೆಸಿದರೆ ಸರ್ಕಾರ ಕಂಪನಿಗಳ ಬೆಂಬಲಕ್ಕೆ ನಿಲ್ಲಲಿದೆ ಎಂದರು.
ಸ್ಥಳೀಯ ಪ್ರತಿಭೆಗಳಿಗೆ ಕಂಪನಿಗಳು ಹೆಚ್ಚಿನ ಅವಕಾಶ ಕಲ್ಪಿಸಬೇಕು ಎಂದು ಶಿವಕುಮಾರ್ ಹೇಳಿದರು. ಕೌಶಲ ಆಧಾರಿತ ನೇಮಕಾತಿಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದ ಅವರು, ವೈಯಕ್ತಿಕ ಹಿತಾಸಕ್ತಿಗೆ ಕನ್ನಡದ ಹೆಸರನ್ನು ಬಳಸುವುದಕ್ಕೂ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಸ್ಥಳೀಯರ ನೇಮಕಾತಿ ಕುರಿತು ಮಾಹಿತಿ ಕೇಳಲು ಕನ್ನಡಪರ ಸಂಘಟನೆಗಳು ಬೆಂಗಳೂರಿನ ತಂತ್ರಜ್ಞಾನ ಕಂಪನಿಗಳಿಗೆ ಭೇಟಿ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಈ ಹೇಳಿಕೆ ನೀಡಿದ್ದಾರೆ.
