Home ಬೆಂಗಳೂರು ನಗರ ಡಿಎಂಎಪ್ ನಿಧಿಯಲ್ಲಿ ಆಕ್ಸಿಜನ್ ಟ್ಯಾಂಕರ್ ಖರೀದಿ: ನಿರಾಣಿ ಕಾಯ೯ಶೈಲಿಗೆ ಕಟೀಲು ಮೆಚ್ಚುಗೆ

ಡಿಎಂಎಪ್ ನಿಧಿಯಲ್ಲಿ ಆಕ್ಸಿಜನ್ ಟ್ಯಾಂಕರ್ ಖರೀದಿ: ನಿರಾಣಿ ಕಾಯ೯ಶೈಲಿಗೆ ಕಟೀಲು ಮೆಚ್ಚುಗೆ

20
0

  • ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಮನವಿಗೆ ಸ್ಪಂಧಿಸಿದ ಸಚಿವ ಮುರುಗೇಶ್ ನಿರಾಣಿ
  • ಆಕ್ಸಿಜನ್ ಸಂಗ್ರಹಣೆ ಹಾಗೂ ಸಾಗಾಣಿಕೆಗೆ 24 ಮೆಟ್ರಿಕ್ ಟನ್ ಸಾಮಥ್ಯ೯ದ ಆಕ್ಸಿಜನ್ ಟ್ಯಾಂಕರ್ ಖರೀದಿ
  • ಬೇರೆ ಜಿಲ್ಲೆಗಳಿಂದ ಬೇಡಿಕೆ ಬಂದರೆ ಪರಿಶೀಲನೆ

ಬೆಂಗಳೂರು:

ಆಮ್ಲಜನಕ ಟ್ಯಾಂಕರ್ ಖರೀದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್) ಅಡಿಯಲ್ಲಿ ಲಭ್ಯವಿರುವ ಹಣವನ್ನು ಬಳಸಿಕೊಳ್ಳಲು ಅವಕಾಶ ನೀಡಿದ್ದಕ್ಕಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಗೆ ಎಂಡಿಎಫ್ ಅಡಿಯಲ್ಲಿ ಆಕ್ಸಿಜನ್ ಸಂಗ್ರಹಿಸಲು ಅಗತ್ಯವಾದ ಆಮ್ಲಜನಕ ಟ್ಯಾಂಕರ್ ಖರೀದಿಸಲು ಮತ್ತು ಅದನ್ನು ಜಿಲ್ಲೆಯ ಆಸ್ಪತ್ರೆಗಳಿಗೆ ಸಾಗಿಸಲು ಕೋವಿಡ್ -19 ಗೆ ಚಿಕಿತ್ಸೆ ನೀಡಲು ಸಚಿವ ಮುರುಗೇಶ್ ನಿರಾಣಿ ಅವಕಾಶ ಮಾಡಿಕೊಟ್ಟಿದ್ದಾರೆ.

ಅತ್ಯಂತ ‌ಕ್ಷಿಪ್ರಗತಿಯಲ್ಲಿ ಸ್ಪಂಧನೆ ಮಾಡಿದ ಅವರ ಕಾಯ೯ಶೈಲಿಗೆ ಕಟೀಲು ಅವರು ಮೆಚ್ಚುಗೆ ಸೂಚಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ‌ಸಚಿವ ಮುರುಗೇಶ್ ನಿರಾಣಿಯವರ ಜೊತೆ ಮಾತುಕತೆ ನಡೆಸಿ ಜಿಲ್ಲೆಯಲ್ಲಿ ಕರೋನಾ ವೈರಸ್ ಸೋಂಕು ತಡೆಗಟ್ಟಲು ಮತ್ತು ಸೋಂಕು ನಿವಾರಣೆಗೆ ಅವಶ್ಯವಿರುವ ಆಕ್ಸಿಜನ್ ಸಂಗ್ರಹಿಸಲು ಮತ್ತು ಸಾಗಿಸಲು 24 ಮೆಟ್ರಿಕ್ ಟನ್ ಆಕ್ಸಿಜನ್ ಸಂಗ್ರಹ ಸಾಮರ್ಥ್ಯದ ಆಕ್ಸಿಜನ್ ಟ್ಯಾಂಕರ್ ಖರೀದಿ ಮಾಡಲು ಎಂಡಿಎಫ್ ನಿಧಿ ಬಳಸಿಕೊಳ್ಳುವಂತೆ ಮನವಿ ಮಾಡಿದ್ದರು.

ಅಧ್ಯಕ್ಷರ ಮನವಿ ಮೇರೆಗೆ ಸಚಿವ ನಿರಾಣಿ ಅವರು ತಕ್ಷಣವೇ ಕಾರ್ಯಪ್ರವೃತ್ತರಾಗಿ‌ ಅಗತ್ಯವಿರುವ ಕಡೆ ಆಕ್ಸಿಜನ್ ಟ್ಯಾಂಕರ್ ಖರೀದಿಸಲು ತೀರ್ಮಾನಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದಲೂ ಬೇಡಿಕೆ ಬಂದರೆ ಸಕಾರಾತ್ಮಕವಾಗಿ ಪರಿಗಣಿಸಲು ಸಚಿವ ನಿರಾಣಿ ಅವರು ತೀಮಾ೯ನಿಸಿದ್ದಾರೆ.

ರಾಜ್ಯದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಗಳು ಅಸ್ತಿತ್ವದಲ್ಲಿದ್ದು,ಇದರಡಿ ಅನೇಕ ಸಮಾಜಿಕ ಕೆಲಸಗಳನ್ನು ಮಾಡಬಹುದಾಗಿದೆ.

ಕುಡಿಯುವ ನೀರು,ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಅಳತೆ,ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಂಬಂದಿಸಿದ ಕಾರ್ಯಕ್ರಮಗಳನ್ನು ನಡೆಸಬಹುದು.

ವಯಸ್ಸಾದ ವಿಕಲಚೇತನ ವ್ಯಕ್ತಿಗಳ ಕಲ್ಯಾಣ,ಕೌಶಲ್ಯ ಅಭಿವೃದ್ಧಿ,ನೈರ್ಮಲ್ಯತೆ,ಭೌತಿಕ ಮೂಲ ಸೌಕರ್ಯ,ನೀರಾವರಿ,
ಶಕ್ತಿ ಮತ್ತು ನೀರಿನ ಅಭಿವೃದ್ಧಿ, ಹಾಗೂ ಗಣಿಗಾರಿಕೆ ಜಿಲ್ಲೆಗಳಲ್ಲಿ ಪರಿಸರದ ಗುಣಮಟ್ಟ ಹೆಚ್ಚಿಸುವುದು ಸೇರಿದಂತೆ ನಾನಾ ರೀತಿಯ ಸಮಾಜಿಕ ಕೆಲಸಗಳನ್ನು ಮಾಡಲು ಅವಕಶಾವಿದೆ.

LEAVE A REPLY

Please enter your comment!
Please enter your name here