ಬೆಂಗಳೂರು:
ಮಹಾನ್ ದೇಶಭಕ್ತರು, ರಾಷ್ಟ್ರ ನಾಯಕರು ಮತ್ತು ಭಾರತೀಯ ಜನಸಂಘಧ ಸಂಸ್ಥಾಪಕರಾದ ಡಾ.ಶ್ಯಾಮಪ್ರಸಾದ ಮುಖರ್ಜಿ ಅವರ ಜನ್ಮದಿನವನ್ನು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಆಚರಿಸಲಾಯಿತು. ಡಾ.ಶ್ಯಾಮಪ್ರಸಾದ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಭಾರತೀಯ ಜನಸಂಘ ಸಂಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಜನ್ಮದಿನದ ಅಂಗವಾಗಿ ರಾಜ್ಯ ಬಿಜೆಪಿ ಪದಾಧಿಕಾರಿಗಳು ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.#ShyamaPrasadMukherji pic.twitter.com/7Z4npjukxU
— BJP Karnataka (@BJP4Karnataka) July 6, 2021
ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್‍ಕುಮಾರ್, ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲ್ ಕುಮಾರ್ ಸುರಾಣ, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಜಗದೀಶ ಹಿರೇಮನಿ, ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯಾಧ್ಯಕ್ಷರು ಮತ್ತು ಪಕ್ಷದ ರಾಜ್ಯ ವಕ್ತಾರರೂ ಆದ ಶ್ರೀ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಶ್ರೀ ಲೋಕೇಶ್ ಅಂಬೆಕಲ್ಲು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.