
Dr. Sivashankar N takes charge as Bengaluru Rural District's Deputy Commissioner
ಬೆಂಗಳೂರು:
ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಡಾ. ಶಿವಶಂಕರ.ಎನ್ ಅವರು ವರ್ಗಾವಣೆಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.
ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.
ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಎಂ.ಶ್ರೀನಿವಾಸ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶಿಲ್ದಾರ್‌ಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಆಗಿಯೂ ಕಾರ್ಯ ನಿರ್ವಹಿಸಿದ್ದರು.