Home ತುಮಕೂರು ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಡ್ರೋನ್ ಪ್ರತಾಪ್ ಅರೆಸ್ಟ್

ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಡ್ರೋನ್ ಪ್ರತಾಪ್ ಅರೆಸ್ಟ್

9
0

ತುಮಕೂರು/ಬೆಂಗಳೂರು: ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ನನ್ನು ಪೊಲೀಸರು ಬಂಧಿಸಿದ್ದಾರೆ.

ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದ್ದರು. ಈ ಸಂಬಂಧ ಇಂದು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು, ಡ್ರೋನ್ ಪ್ರತಾಪ್​ನನ್ನು ಬಂಧಿಸಿದ್ದಾರೆ.

Screenshot 2024 12 12 22 57 11 15 f9ee0578fe1cc94de7482bd41accb329

ಕೃಷಿ ಹೊಂಡದಂತ ಆಳವಾದ ಗುಂಡಿಯಲ್ಲಿನ ನೀರಿಗೆ ಕೆಮಿಕಲ್ ಹಾಕಿ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದರು. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್‌ ಆಗಿದೆ, ಬೆಂಕಿ ಸಹ ಚಿಮ್ಮಿದೆ. ಅಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ. ಈ ವೀಡಿಯೋ ನೋಡಿ ಪ್ರತಾಪ್‌ ಬಿಲ್ಡಪ್ ಬೇರೆ ಕೊಟ್ಟಿದ್ದರು. ಜೊತೆಗೆ ನಗು-ನಗುತ್ತಲೇ ನೋಡಿ.. ನೋಡಿ ದೊಡ್ಡ ಬ್ಲಾಸ್ಟ್ ಇದು ಎಂದು ಪ್ರತಾಪ್‌ ಕೂಗಿದ್ದರು. ಈ ವಿಡಿಯೋ ಸಾರ್ವಜನಿಕರ ಟೀಕೆಗೆ ಗುರಿಯಾಗಿತ್ತು.

LEAVE A REPLY

Please enter your comment!
Please enter your name here