Home ಬೆಳಗಾವಿ Drought declaration earlier than other states as a precautionary measure, adequate management:...

Drought declaration earlier than other states as a precautionary measure, adequate management: Krishna Byregowda | ಮುಂಜಾಗ್ರತೆಯ ಕ್ರಮವಾಗಿ ಬೇರೆ ರಾಜ್ಯಗಳಿಗಿಂತ ಶೀಘ್ರ ಬರ ಘೋಷಣೆ, ಸಮರ್ಪಕ ನಿರ್ವಹಣೆ: ಕೃಷ್ಣ ಬೈರೇಗೌಡ

19
0
Karnataka Revenue Minister Krishna Byregowda
Karnataka Revenue Minister Krishna Byregowda

• ಬರ ನಿರ್ವಹಣೆಗಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 895 ಕೋಟಿ ರೂ.
• ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ
• ಪ್ರತಿ ತಾಲೂಕಿನಲ್ಲೂ ಟಾಸ್ಕ್ ಫೋರ್ಸ್ ರಚನೆ
• ಕೇಂದ್ರದಿಂದ 18,171 ಕೋಟಿ ನೆರವಿನ ನಿರೀಕ್ಷೆ

ಬೆಳಗಾವಿ:

ದೇಶದ 17 ರಾಜ್ಯಗಳಲ್ಲಿ ತೀವ್ರ ಬರದ ಪರಿಸ್ಥಿತಿ ಇದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಮುಂಜಾಗ್ರತಾ ಕ್ರಮವಾಗಿ ಶೀಘ್ರ ಬರ ಘೋಷಿಸಲಾಗಿದ್ದು, ಬರ ಪರಿಸ್ಥಿತಿಯನ್ನೂ ಸಮರ್ಪಕವಾಗಿ ನಿರ್ವಹಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಾಜ್ಯದ ಬರ ಪರಿಸ್ಥಿತಿ ಹಾಗೂ ಸರ್ಕಾರದ ನಿರ್ವಹಣೆಗೆ ಸಂಬಂಧಿಸಿ ಪರಿಷತ್‌ ನಲ್ಲಿ ಬುಧವಾರ ಮಾಹಿತಿ ನೀಡಿದ ಸಚಿವರು, “ಕರ್ನಾಟಕ ಮಾತ್ರವಲ್ಲದೆ ದೇಶದ 17 ರಾಜ್ಯಗಳಲ್ಲಿ ತೀವ್ರ ಬರ ಸ್ಥಿತಿ ಇದೆ. ನೆರೆಯ ತಮಿಳುನಾಡು, ಕೇರಳದಲ್ಲೂ ಬರ ಇದೆ. ಮಹಾರಾಷ್ಟ್ರ ಸಹ ನವೆಂಬರ್ ತಿಂಗಳಲ್ಲಿ ಬರ ಘೋಷಣೆ ಮಾಡಿತ್ತು. ಆದರೆ, ಕರ್ನಾಟಕದಲ್ಲಿ ಮುಂಜಾಗ್ರತೆ ಕ್ರಮವಾಗಿ ಸೆಪ್ಟೆಂಬರ್ ತಿಂಗಳಲ್ಲೇ ಬರ ಘೋಷಿಸಲಾಗಿತ್ತು. ಅಲ್ಲದೆ, ಬರ ನಿರ್ವಹಣೆಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಯಿತು” ಎಂದರು.

ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ:

ರಾಜ್ಯದ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಯಾವುದೇ ಗ್ರಾಮ ಹಾಗೂ ನಗರಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಂಡು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ 115 ಗ್ರಾಮಗಳಲ್ಲಿ ಈಗ ಕುಡಿಯುವ ನೀರಿನ ಸಮಸ್ಯೆ ಇದೆ.

ಈ ಪೈಕಿ 89 ಗ್ರಾಮಗಳಲ್ಲಿ ಖಾಸಗಿ ಟ್ಯಾಂಕರ್‌ಗಳ ಮೂಲಕ ನೀರಿನ ಪೂರೈಕೆ ಮಾಡಲಾಗುತ್ತಿದೆ. ನಗರ ಪ್ರದೇಶದ ನಾಲ್ಕು ವಾರ್ಡ್‍ಗಳಲ್ಲಿ ಕುಡಿಯುವ ನೀರಿನ ಕೊರತೆಯಾಗಿದ್ದು, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ

ಅಲ್ಲದೆ, ರಾಜ್ಯ ಸರ್ಕಾರವು ಸಮರ್ಥವಾಗಿ ಬರ ನಿರ್ವಹಿಸಲು ಪ್ರೋ ಆ್ಯಕ್ಟಿವ್ ಆಗಿ ಕೆಲಸ ಮಾಡಿದೆ. ಕಳೆದ 10 ವರ್ಷಗಳ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಜನವರಿ-ಫೆಬ್ರವರಿ ವೇಳೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ ಸುಮಾರು 6,237 ಸಮಸ್ಯಾತ್ಮಕ ಗ್ರಾಮಗಳನ್ನು ಮತ್ತು ನಗರ ಪ್ರದೇಶದ 914 ವಾರ್ಡ್‍ಗಳನ್ನು ಕುಡಿಯುವ ನೀರಿನ ಸಮಸ್ಯಾತ್ಮಕ ಪ್ರದೇಶಗಳೆಂದು ಗುರುತಿಸಿ ಮುಂಜಾಗ್ರತೆಯಾಗಿ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವರು ತಿಳಿಸಿದರು.

ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಈಗಾಗಲೇ 3,672 ಖಾಸಗಿ ಬೋರವೇಲ್‍ಗಳನ್ನು ಗುರುತಿಸಿ ಬಾಡಿಗೆಗೆ ತೆಗೆದುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಮತ್ತು ಉಳಿದಂತೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಸಿದ್ಧತೆ ಮಾಡಲಾಗಿದೆ. ರಾಜ್ಯದಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿಲ್ಲ. ಆದರೂ, 15 ದಿನಗಳಿಗೊಮ್ಮೆ ಜಿಲ್ಲಾಧಿಕಾರಿಗಳ ಸಭೆ ನಡೆಸಿ ವ್ಯವಸ್ಥೆಗೆ ಚುರುಕು ಮುಟ್ಟಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮೇವಿಗೂ ಕೊರತೆ ಇಲ್ಲ:

ಸದನದಲ್ಲಿ ಮೇವಿನ ಸಮಸ್ಯೆ ಬಗ್ಗೆಯೂ ಮಾತನಾಡಿದ ಸಚಿವರು, ಚಿತ್ರದುರ್ಗ ಜಿಲ್ಲೆ ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಮೇವಿನ ಕೊರತೆ ಇನ್ನೂ ಉದ್ಭವಿಸಿಲ್ಲ. ಈ ಬಗ್ಗೆಯೂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈವರೆಗೆ ಅಲ್ಪ ಪ್ರಮಾಣದ ನೀರಿನ ಸೌಲಭ್ಯ ಇರುವ ರೈತರಿಗೆ 7.63 ಲಕ್ಷ ಉಚಿತ ಮೇವಿನ್ ಕಿಟ್ ನೀಡಲಾಗಿದೆ. ಫೆಬ್ರವರಿಗೆ ಮೇವು ಲಭ್ಯವಾಗಲಿದ್ದು, ರಾಜ್ಯದಲ್ಲಿ ಮೇವಿನ ಕೊರತೆ ಉದ್ಭವಿಸಲು ಸಾಧ್ಯವಿಲ್ಲ. ಇದರ ಜೊತೆಗೆ ಮೇವನ್ನು ಹೊರ ರಾಜ್ಯಗಳಿಗೆ ಕಳ್ಳಸಾಗಾಣೆ ಮಾಡದಂತೆಯೂ ನಿರ್ಬಂಧಿಸಲಾಗಿದೆ ಎಂದರು.

ಬರ ನಿರ್ವಹಣೆಗೆ ಸಿಎಂ ನೇತೃತ್ವದಲ್ಲಿ ಸಭೆ:

ರಾಜ್ಯದ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿ ಜನರ ಸಂಕಷ್ಟಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ತೊಂದರೆಯಾಗದಂತೆ ಕ್ರಮವಹಿಸಲು ರಾಜ್ಯ ಸರ್ಕಾರ ಅನೇಕ ರೀತಿಯ ಪರಿಹಾರಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿಗಳು ಬರ ನಿರ್ವಹಣೆಗಾಗಿ ಮೂರು ಸಭೆಗಳನ್ನು ಜರುಗಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಅಲ್ಲದೇ ಸರ್ಕಾರವು ಬರ ನಿರ್ವಹಣೆಗಾಗಿ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಈಗಾಗಲೇ 8 ಸಭೆಗಳನ್ನು ಜರುಗಿಸಿ ಬರ ಪರಿಸ್ಥಿತಿ ಹಾಗೂ ಜಿಲ್ಲಾಡಳಿಗಳು ಕೈಗೊಂಡಿರುವ ಮುಂಜಾಗ್ರತೆ ಹಾಗೂ ಪರಿಹಾರ ಕ್ರಮಗಳನ್ನು ಪರಾಮರ್ಶಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದೆ.

ರಾಜ್ಯದ 22 ಜಿಲ್ಲೆಗಳಿಗೆ ಸ್ವತಃ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಬರಗಾಲದ ಸ್ಥಿತಿಯನ್ನು ಅವಲೋಕಿಸಿದ್ದೇನೆ. ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿ ಆಯಾ ವಿಭಾಗದ ಜಿಲ್ಲಾಧಿಕಾರಿಗಳ ಹಾಗೂ ತಹಶೀಲ್ದಾರರ ಸಭೆ ಜರುಗಿಸಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತು ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದರು. ಜಿಲ್ಲಾ ಮಟ್ಟದಲ್ಲಿ ಬರ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ 133 ಸಭೆಗಳನ್ನು ಜರುಗಿಸಿದ್ದಾರೆ ಎಂದರು.

ಶಾಸಕರ ಅಧ್ಯಕ್ಷತೆಯ ಟಾಸ್ಕ್‍ಫೋರ್ಸ್ ಕ್ರಿಯಾಶೀಲ:

ಪ್ರತಿ ತಾಲೂಕಿನಲ್ಲಿ ಬರ ನಿರ್ವಹಣೆಗಾಗಿ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್‍ಫೋರ್ಸ್ ಸಮಿತಿಗಳನ್ನು ರಚಿಸಿ, ಅಗತ್ಯ ಹಣ ಬಿಡುಗಡೆ ಮಾಡಲಾಗಿದೆ. ಈಗಾಗಲೇ ಶಾಸಕರ ಅಧ್ಯಕ್ಷತೆಯ 183 ಟಾಸ್ಕ್‍ಫೋರ್ಸ್ ಸಮಿತಿ ಸಭೆಗಳು ಜರುಗಿವೆ ಎಂದು ಅವರು ತಿಳಿಸಿದರು.

ಗ್ರಾಮ ಪಂಚಾಯತ್ ಮಟ್ಟದ ಟಾಸ್ಕ್‍ಫೋರ್ಸ್ ಸಮಿತಿ ರಚನೆ:

ಬರ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕ್ಷೇತ್ರ ಮಟ್ಟದ ಸಮಸ್ಯೆಗಳನ್ನು ಗುರುತಿಸಿ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಗ್ರಾಮ ಪಂಚಾಯತ್ ಮಟ್ಟದ ಟಾಸ್ಕ್‍ಪೋರ್ಸ್ ರಚಿಸಲಾಗಿದೆ. ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಓ.), ಕುಡಿಯುವ ನೀರು ವಿಭಾಗದ ಅಸಿಸ್ಟಂಟ್ ಇಂಜನಿಯರ್ ಮತ್ತು ಗ್ರಾಮ ಆಡಳಿತ ಅಧಿಕಾರಿ ಇರುವ ಈ ಸಮಿತಿಯು ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರು, ಮೇವು ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಈ ಕುರಿತು ನಿರ್ಣಯ ಕೈಗೊಂಡು ತಹಶೀಲ್ದಾರರಿಗೆ ಸಲ್ಲಿಸಬೇಕು.

ಈ ಸಮಿತಿ ಮನವಿಯನ್ನು ಪರಿಗಣಿಸಿ 24 ಗಂಟೆಯಲ್ಲಿ ನೀರು ಪೂರೈಸಲು ತಹಶೀಲ್ದಾರರು ತಕ್ಷಣ ಕ್ರಮವಹಿಸಬೇಕು. ವಿಶೇಷವಾಗಿ ಈ ಸಮಿತಿ ಕುಡಿಯುವ ನೀರಿನ ಕುರಿತು ಮತ್ತು ಮೇವು, ಟ್ಯಾಂಕರ್ ನೀರು ಸರಬರಾಜು, ಬಾಡಿಗೆ ಬೋರವೇಲ್, ನೀರು ಸರಬರಾಜು ಪೈಪ್‍ಲೈನ್ ದುರಸ್ತಿ ಕಾರ್ಯಗಳಿಗೆ ಗಮನಹರಿಸಲಿದೆ. ಇದಕ್ಕಾಗಿ ಅನುದಾನ ಕೊರತೆಯಾಗದಂತೆ ತಹಶೀಲ್ದಾರರ ಖಾತೆಗೆ ರೂ. 50 ಲಕ್ಷ ಬಿಡುಗಡೆ ಮಾಡುವಂತೆ ಈಗಾಗಲೇ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸದನದಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here