Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Drought in Karnataka | ಹೆಚ್ಚುವರಿ 22 ತಾಲೂಕುಗಳು ಬರ ಘೋಷಣೆ; ಅಧಿಸೂಚನೆ ಹೊರಡಿಸಿದ ಸರ್ಕಾರ, ಸೋಮವಾರ ಕೇಂದ್ರಕ್ಕೆ ಮತ್ತೊಂದು ಮನವಿ ಸಲ್ಲಿಕೆ!
  • ಬೆಂಗಳೂರು ನಗರ

Drought in Karnataka | ಹೆಚ್ಚುವರಿ 22 ತಾಲೂಕುಗಳು ಬರ ಘೋಷಣೆ; ಅಧಿಸೂಚನೆ ಹೊರಡಿಸಿದ ಸರ್ಕಾರ, ಸೋಮವಾರ ಕೇಂದ್ರಕ್ಕೆ ಮತ್ತೊಂದು ಮನವಿ ಸಲ್ಲಿಕೆ!

Vighnesh Pawar October 13, 2023 6:00 PM 1 minute read
Drought in Karnataka | Additional 22 taluks declared drought hit

Drought in Karnataka | Additional 22 taluks declared drought hit

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ
  • ಸಣ್ಣ-ಅತಿಸಣ್ಣ ರೈತರ ಬಗ್ಗೆ ಕೇಂದ್ರಕ್ಕೆ ಮಾಹಿತಿಯ ಕೊರತೆ, ಬರ ಪರಿಹಾರದಲ್ಲೂ ರಾಜ್ಯಕ್ಕೆ ಬರೆ..!
  • 22ರ ಪೈಕಿ 11 ತಾಲೂಕುಗಳಲ್ಲಿ ತೀವ್ರ ಬರ
  • ತೀವ್ರ ಬರ ಎದುರಿಸುತ್ತಿರುವ ತಾಲೂಕುಗಳ ಸಂಖ್ಯೆ 186ಕ್ಕೆ ಏರಿಕೆ
  • ಸೋಮವಾರ ಮತ್ತೊಂದು ಮೆಮೊರಾಂಡಮ್ (ಮನವಿ) ಸಲ್ಲಿಕೆ
  • ಹೆಚ್ಚುವರಿಯಾಗಿ 300-350 ಕೋಟಿ ಪರಿಹಾರಕ್ಕೆ ಮನವಿ

ಬೆಂಗಳೂರು:

ಕಳೆದ ಒಂದು ವಾರದಿಂದ ನಡೆಸಲಾಗಿರುವ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆ ಹಾಗೂ ಬೆಳೆ ಸಮೀಕ್ಷೆ ದೃಢೀಕರಣ (Ground Truthing) ವರದಿ ಅನ್ವಯ ಹೆಚ್ಚುವರಿ 22 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿ ರಾಜ್ಯ ಸರ್ಕಾರ ಇಂದು (ಶುಕ್ರವಾರ) ಅಧೀಕೃತ ಅಧಿಸೂಚನೆ ಹೊರಡಿಸಿದೆ. ಈ ಪೈಕಿ 11 ತಾಲೂಕುಗಳು ತೀವ್ರ ಬರಪೀಡಿತ ಎಂದು ಗುರುತಿಸಲಾಗಿದೆ. ಈ ಸಂಬಂಧ ಹೆಚ್ಚುವರಿ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮುಂದಿನ ಸೋಮವಾರ ಮತ್ತೊಂದು ಮನವಿ ಪತ್ರ (ಮೆಮೊರಾಂಡಮ್) ಸಲ್ಲಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ರಾಜ್ಯದ 236 ತಾಲೂಕುಗಳ ಪೈಕಿ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿತ್ತು. ಆದರೆ, ಈ ವರ್ಷ ಇತಿಹಾಸ ಕಾಣದ ತೀವ್ರ ಬರ ಎದುರಾಗಿದ್ದು, ಬಹುತೇಕ ಎಲ್ಲಾ ಜಿಲ್ಲೆಗಳಿಗೂ ಮಳೆ ಕೊರತೆ ಎದುರಾಗಿದೆ. ಹೀಗಾಗಿ ಉಳಿದ ತಾಲೂಕುಗಳನ್ನೂ ಸಹ “ಬರ ಪೀಡಿತ” ಎಂದು ಘೋಷಿಸುವಂತೆ ಒತ್ತಾಯ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಕಳೆದ ಅಕ್ಟೋಬರ್.09 ರಂದು ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಬರ ಘೋಷಣೆಯಿಂದ ಹೊರಗುಳಿದ 34 ತಾಲೂಕುಗಳ ಪೈಕಿ 22 ತಾಲೂಕುಗಳಲ್ಲಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆ ಹಾಗೂ ಬೆಳೆ ಸಮೀಕ್ಷೆ ದೃಢೀಕರಣ (Ground Truthing) ನಡೆಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಲಾಗಿತ್ತು.

ಈ ವರದಿಯನುಸಾರ ಇದೀಗ 22 ತಾಲೂಕುಗಳನ್ನೂ ಬರ ಪೀಡಿತ ಎಂದು ಘೋಷಿಸಲಾಗಿದ್ದು, ಈ ಪೈಕಿ 11 ತಾಲ್ಲೂಕುಗಳಲ್ಲಿ “ತೀವ್ರ ಬರ” ಹಾಗೂ 11 ತಾಲೂಕುಗಳಲ್ಲಿ, “ಸಾಧಾರಣ ಬರ” ಪೀಡಿತ ತಾಲ್ಲೂಕು ಎಂದು ಘೋಷಿಸುವ ಅರ್ಹತೆ ಪಡೆದಿರುವುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಲ್ಲದೆ, ಸೆಪ್ಟೆಂಬರ್ ಅಂತ್ಯದವರೆಗಿನ ಬೆಳೆ ಸಮೀಕ್ಷೆಯನ್ನಷ್ಟೇ ಪರಿಗಣಿಸುವುದಾದರೆ 22 ತಾಲೂಕುಗಳ ಪೈಕಿ 17 ತಾಲ್ಲೂಕುಗಳನ್ನು “ತೀವ್ರ ಬರಪೀಡಿತ ತಾಲ್ಲೂಕು ಎಂದು ಮತ್ತು ಉಳಿದ 5 ತಾಲೂಕನ್ನು ಸಾಧಾರಣ ಬರಪೀಡಿತ ಎಂದು ಗುರುತಿಸಬಹುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಮೂಲಕ ರಾಜ್ಯದಲ್ಲಿ ಒಟ್ಟು 236 ತಾಲೂಕುಗಳ ಪೈಕಿ 189 ತೀವ್ರ ಬರಪೀಡಿತ ಹಾಗೂ 27 ಸಾಧಾರಣಾ ಬರಪೀಡಿತ ತಾಲೂಕುಗಳು ಒಳಗೊಂಡಂತೆ ಒಟ್ಟು 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದಂತಾಗಿದೆ.

ಸೋಮವಾರ ಮತ್ತೊಂದು ಮೆಮೊರಾಂಡಮ್ ಸಲ್ಲಿಕೆ

ಮೊದಲ ಹಂತದಲ್ಲೇ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದ್ದು, ಕೇಂದ್ರ ಸರ್ಕಾರದ ಪರಿಹಾರ ಕೋರಿ ಕಳೆದ ಸೆಪ್ಟೆಂಬರ್. 22 ರಂದು ಆನ್ಲೈನ್ ಮೂಲಕ ಕೇಂದ್ರಕ್ಕೆ ಮನವಿಯನ್ನೂ ಸಲ್ಲಿಸಲಾಗಿದೆ.

ರಾಜ್ಯದ ಮನವಿಗೆ ಸ್ಪಂದಿಸಿದ್ದ ಕೇಂದ್ರ ಸರ್ಕಾರ ಒಂದೇ ವಾರದ ಅವಧಿಯಲ್ಲಿ ಬರ ಪರಿಸ್ಥಿತಿಯ ವಾಸ್ತವ ಅಧ್ಯಯನಕ್ಕೆ ತಂಡವನ್ನೂ ಕಳುಹಿಸಿತ್ತು. ರಾಜ್ಯಕ್ಕೆ ಆಗಮಿಸಿದ್ದ ತಂಡ ಮೂರು ಭಾಗಗಳಾಗಿ ರಾಜ್ಯದ ವಿವಿಧ ಬರ ಪೀಡಿತ ಜಿಲ್ಲೆಗಳಿಗೆ ಮೂರು ದಿನಗಳ ಪ್ರವಾಸ ಕೈಗೊಂಡಿತ್ತು.

ಬರ ಅಧ್ಯಯನದ ನಂತರ ಸಭೆ ನಡೆಸಿದ್ದ ಕೇಂದ್ರ ತಂಡ ರಾಜ್ಯದ ಮನವಿ ಪತ್ರ (ಮೆಮೊರಾಂಡಮ್) ವಾಸ್ತವದಿಂದಲೇ ಕೂಡಿದೆ ಎಂದು ಅಭಿಪ್ರಾಯ ಪಟ್ಟಿತ್ತು. ಅಲ್ಲದೆ, ಎರಡನೇ ಸುತ್ತಿನಲ್ಲಿ ಮತ್ತಷ್ಟು ತಾಲೂಕುಗಳನ್ನೂ ಸಹ ಬರ ಪೀಡಿತ ಪಟ್ಟಿಗೆ ಸೇರಿಸಿ ಮತ್ತೊಂದು ಮನವಿ ಪತ್ರ ಸಲ್ಲಿಸುವ ಹಕ್ಕು ರಾಜ್ಯಕ್ಕಿದೆ ಎಂದು ತಿಳಿಸಿತ್ತು.

ಇದರನ್ವಯ 22 ತಾಲೂಕುಗಳಲ್ಲಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆ ಹಾಗೂ ಬೆಳೆ ಸಮೀಕ್ಷೆ ದೃಢೀಕರಣ (Ground Truthing) ನಡೆಸಲಾಗಿದ್ದು, ಮನವಿ ಪತ್ರ (ಮೆಮೊರಾಂಡಮ್) ಸಿದ್ದಪಡಿಸುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂದಿನ ಸೋಮವಾರ (ಅಕ್ಟೋಬರ್. 16) ಮನವಿ ಪತ್ರ ಸಲ್ಲಿಸಲಾಗುವುದು, ಕೇಂದ್ರ ಸರ್ಕಾರದ ಮಾನದಂಡಗಳ ಅನ್ವಯ ಹೆಚ್ಚುವರಿ 300 ರಿಂದ 350 ಕೋಟಿ ರೂ. ಬರ ಪರಿಹಾರ ಕೋರಲು ಅವಕಾಶ ಇದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

ಮೆಮೊರಾಂಡಮ್ ಜೊತೆಗೆ ಕೇಂದ್ರ ಸಚಿವರ ಭೇಟಿಗೂ ಮನವಿ

ಕೇಂದ್ರ ಗೃಹ ಸಚಿವರು ಹಾಗೂ ಕೃಷಿ ಸಚಿವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿ ಮನವಿ ಸಲ್ಲಿಸಲು ಈ ಹಿಂದೆಯೇ ಅವಕಾಶ ಕೇಳಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವತಃ ಕೇಂದ್ರಕ್ಕೆ ಪತ್ರ ಬರೆದು ಭೇಟಿಗೆ ಅವಕಾಶ ನೀಡುವಂತೆ ಕೋರಿದ್ದರು.

ಆದರೆ, ಕೇಂದ್ರ ಸಚಿವರು ಈವರೆಗೆ ಭೇಟಿಗೆ ಅವಕಾಶ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಸೋಮವಾರ ಸಲ್ಲಿಸಲಿರುವ ಎರಡನೇ ಮೆಮೊರಾಂಡಮ್ ನಲ್ಲಿ ಮತ್ತೊಮ್ಮೆ ಕೇಂದ್ರ ಗೃಹ ಮತ್ತು ಕೃಷಿ ಸಚಿವರ ಭೇಟಿಗೆ ಅವಕಾಶ ನೀಡುವಂತೆ ಕೋರಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟಪಡಿಸಿದ್ದಾರೆ.

ಸಣ್ಣ ರೈತರ ಬಗ್ಗೆ ಕೇಂದ್ರಕ್ಕಿಲ್ಲ ನಿಖರ ಮಾಹಿತಿ, ಪರಿಹಾರದಲ್ಲೂ ರಾಜ್ಯಕ್ಕೆ ಬರೆ..!

ರಾಜ್ಯದ ಸಣ್ಣ-ಅತಿಸಣ್ಣ ರೈತರ ನಿಖರ ಅಂಕಿಸಂಖ್ಯೆ ಕೇಂದ್ರ ಸರ್ಕಾರದ ಬಳಿ ಇಲ್ಲ, ಪರಿಣಾಮ ಬರ ಪರಿಹಾರ ನಿಧಿಯಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಹಿರಿಯ ಅಧಿಕಾರಿಗಳ ಜೊತೆಗಿನ ಇಂದಿನ (ಶುಕ್ರವಾರ) ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ ಹೊರಹಾಕಿದರು.

ಈ ಬಗ್ಗೆ ಮಾತನಾಡಿದ ಸಚಿವರು, “ರಾಜ್ಯದಲ್ಲಿ ಶೇ.68 ರಿಂದ ಶೇ.70 ರಷ್ಟು ಸಣ್ಣ ಅತಿಸಣ್ಣ ರೈತರಿದ್ದಾರೆ. ಆದರೆ, ಕೇಂದ್ರ ಸರ್ಕಾರದ ಈ ಹಿಂದಿನ ಗಣತಿಯಂತೆ ಈ ಪ್ರಮಾಣ ಶೇ.45 ರಷ್ಟು ಮಾತ್ರ ಇದೆ. ಹೀಗಾಗಿ ಬರ ಪರಿಹಾರದ ಹಣದಲ್ಲೂ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ” ಎಂದು ಬೇಸರ ಹೊರಹಾಕಿದರು.

“ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾನದಂಡಗಳ ಪ್ರಕಾರ ೫ ಎಕರೆಗಿಂತ ಹೆಚ್ಚಿನ ಕೃಷಿ ಭೂಮಿಯನ್ನು ಹೊಂದಿದವರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ. ಆದರೆ, ಮಳೆ ಕೊರತೆಯ ಕಾರಣಕ್ಕೆ ರಾಜ್ಯದಲ್ಲಿ ಪ್ರಸ್ತುತ 41.11 ಲಕ್ಷ ಹೆಕ್ಟೇರ್ ಭೂಮಿಯಲ್ಲಿನ ಕೃಷಿ ಕೈಕೊಟ್ಟಿದೆ. ಹೆಚ್ಚುವರಿಯಾಗಿ 10.5 ಲಕ್ಷ ಹೆಕ್ಟೇರ್ ಭೂಮಿಯ ಕೃಷಿಯೂ ಈ ಪಟ್ಟಿಗೆ ಸೇರಲಿದೆ. ಉಳಿದ ಬೆಳೆಗಳೂ ರೈತರ ಕೈಸೇರುವ ಭರವಸೆ ಇಲ್ಲ. ಈ ನಡುವೆ ಕೇಂದ್ರ ಸರ್ಕಾರದ ಅಂಕಿಅಂಶಗಳ ಆಧಾರದಲ್ಲಿ ಪರಿಹಾರ ಬಿಡುಗಡೆ ಮಾಡಿದರೆ ರಾಜ್ಯಕ್ಕೆ ಮತ್ತಷ್ಟು ಅನ್ಯಾಯವಾಗಲಿದೆ.

ಸಣ್ಣ-ಅತಿಸಣ್ಣ ರೈತರ ಅಂಕಿಸಂಖ್ಯೆಗಳಲ್ಲಿ ಕಾಲಕಾಲಕ್ಕೆ ಬದಲಾವಣೆಯಾಗುತ್ತಲೇ ಇರುತ್ತದೆ. ಈ ಬಗ್ಗೆ ಕೇಂದ್ರ ಸರ್ಕಾರ ಆಗಿಂದಾಗ್ಗೆ ಗಣತಿ ನಡೆಸಬೇಕು. ಆದರೆ, ಸಣ್ಣ-ಅತಿಸಣ್ಣ ರೈತರ ಗಣತಿಯನ್ನು ವಿಳಂಭಗೊಳಿಸಿ ಈಗ ಹಿಂದಿನ ಗಣತಿಯನ್ನು ಪರಿಗಣಿಸುವುದು ಸರಿಯಲ್ಲ. ಹೀಗಾಗಿ ಬರ ಪರಿಹಾರ ಬಿಡುಗಡೆ ಮಾಡುವ ಮುನ್ನ ರಾಜ್ಯದ ಸರ್ಕಾರದ ಇತ್ತೀಚಿನ ಅಂಕಿಅಂಶಗಳನ್ನು ಪರಿಗಣಿಸಬೇಕು ಎಂದು ಮನವಿ ಪತ್ರದಲ್ಲಿ (ಮೆಮೊರಾಂಡಮ್) ಉಲ್ಲೇಖಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

About the Author

Vighnesh Pawar

Subscriber

View All Posts

Post navigation

Previous: JP Nadda | ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಿದೆ ಕರ್ನಾಟಕ ಹೈಕೋರ್ಟ್
Next: Electricity Shortage in Karnataka | ಆಕಸ್ಮಿಕ‌ ಸಂದರ್ಭಕ್ಕೆ ಅಗತ್ಯವಾದ ಯೋಜನೆ/ ಸಿದ್ದತೆ ಏಕೆ ಮಾಡಿಕೊಂಡಿಲ್ಲ: ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Related Stories

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

The Bengaluru Live November 23, 2026 5:28 PM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 24ರಂದು ವಿಲ್ಸನ್ ಗಾರ್ಡನ್, ಶಾಂತಿನಗರ, ರಿಚ್‌ಮಂಡ್ ಸರ್ಕಲ್ ಸುತ್ತಮುತ್ತ ವಿದ್ಯುತ್ ಕಡಿತ

The Bengaluru Live November 23, 2026 5:28 PM

Latest Post

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

November 23, 2026 7:26 PM
‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್ ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

November 23, 2026 7:14 PM
ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

November 23, 2026 5:59 PM
ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

November 23, 2026 5:37 PM
ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 23, 2026 5:34 PM
ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

November 23, 2026 5:28 PM

ನೀವು ತಪ್ಪಿಸಿಕೊಂಡಿರಬಹುದು

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

The Bengaluru Live November 23, 2026 7:14 PM
ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

The Bengaluru Live November 23, 2026 5:59 PM
ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

The Bengaluru Live November 23, 2026 5:37 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು
  • ‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್
  • ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ
  • ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ
©Copyright 2025 The Bengaluru Live All rights reserved. | MoreNews by AF themes.