Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Drought in Karnataka | ಅಕ್ಟೋಬರ್ 5 ರಿಂದ ರಾಜ್ಯದಲ್ಲಿ ಕೇಂದ್ರದ ಬರ ಅಧ್ಯಯನ
  • ಬೆಂಗಳೂರು ನಗರ

Drought in Karnataka | ಅಕ್ಟೋಬರ್ 5 ರಿಂದ ರಾಜ್ಯದಲ್ಲಿ ಕೇಂದ್ರದ ಬರ ಅಧ್ಯಯನ

Vighnesh Pawar October 4, 2023 4:00 PM
📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಮೂರು ತಂಡಗಳು ರಾಜ್ಯಕ್ಕೆ ಅಗಮಿಸುತ್ತಿದ್ದು, ಅಕ್ಟೋಬರ್ 5 ರಿಂದ ನಾಲ್ಕು ದಿನಗಳ ಕಾಲ ವಿವಿಧ ಜಿಲ್ಲಾ ಪ್ರವಾಸ ಕೈಗೊಂಡು ಪರಿಶೀಲನೆ ನಡೆಸಲಿವೆ.

ಕೇಂದ್ರ ತಂಡ ಹತ್ತು ಸದಸ್ಯರನ್ನೊಗೊಂಡಿದ್ದು, ರಾಜ್ಯದ ಸ್ಥಳೀಯ ಅಧಿಕಾರಿಗಳೊಂದಿಗೆ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದೆ. ಎಲ್ಲಾ ಸದಸ್ಯರು ರಂದು ಬೆಂಗಳೂರಿಗೆ ಅಗಮಿಸಿ ವಾಸ್ತವ್ಯ ‌ಮಾಡಲಿದ್ದಾರೆ.

ಅಕ್ಟೋಬರ್ 5 ರಂದು ಮೂರೂ ತಂಡಗಳು ಬೆಳಿಗ್ಗೆ 9:30 ರಿಂದ 10:30ರ ಗಂಟೆಯವರೆಗೆ ಕರ್ನಾಟಕ ರಾಜ್ಯ ಪೃಕೃತಿ ವಿಕೋಪ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ನಡೆಯಲಿವೆ. ಮಧ್ಯಾಹ್ನ 12:00 ಗಂಟೆಗೆ ವಿಧಾನ ಸೌಧ ಕೊಠಡಿಯಲ್ಲಿ ರಾಜ್ಯದ ಬರ ಪರಿಸ್ಥಿತಿಯ ಸಂಕ್ಷಿಪ್ತ ವಿವರ ಪಡೆದು ಜಿಲ್ಲೆಗಳಿಗೆ ತೆರಳಲಿವೆ.

ಜಿಲ್ಲಾ ಪ್ರವಾಸದ ವಿವರ

ಮೊದಲ‌ ತಂಡ: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ಐ.ಎ.ಎಸ್. ಅವರ ನೇತೃತ್ವ. ಇದರಲ್ಲಿ ಎಣ್ಣೆ ಬೀಜಗಳ ಅಭಿವೃದ್ದಿ ಇಲಾಖೆಯ ನಿರ್ದೇಶಕರಾದ ಡಾ. ಜೆ ಪೊನ್ನುಸ್ವಾಮಿ, ವೆಚ್ಚ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರಾದ ಮಹೇಂದ್ರ ಚಂಡೇಲಿಯ, ನೀತಿ ಆಯೋಗದ ಸಂಶೋಧನಾಧಿಕಾರಿ ಶಿವಚರಣ್ ಮೀನಾ,ರಾಜ್ಯ ಕೃಷಿ ಆಯುಕ್ತರಾದ ಎಸ್ ಪಾಟೀಲ್ ಐ.ಎ.ಎಸ್ ಅವರನ್ನು ಒಳಗೊಂಡಿದೆ.

ಎರಡನೆ ತಂಡ: ಕೇಂದ್ರ ಕುಡಿಯುವ ನೀರು ಹಾಗು ಸ್ವಚ್ಛತಾ ಸಚಿವಾಲಯದ ಹೆಚ್ಚುವರಿ ಸಲಹೆಗಾರರಾ ಡಿ. ರಾಜಶೇಖರ್ ಐ.ಎ.ಎಸ್ ನೇತೃತ್ವ, ಪಶುಸಂಗೋಪನೆ ಇಲಾಖೆ ‌ನಿರ್ದೇಶಕರಾದ ಆರ್ ಥಾಕರೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಾಯಕ ಆಯುಕ್ತರಾದ ಮೋತಿರಾಂ , ರಾಜ್ಯದ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕರಾದ ಕರೀಗೌಡ ಐ.ಎ.ಎಸ್ ಅವರನ್ನು ಒಳಗೊಂಡಿದೆ.

ಮೂರನೇ ತಂಡ: ಕೇಂದ್ರ ಜಲ ಆಯೋಗದ ನಿರ್ದೇಶಕರಾದ ಅಶೋಕ್ ಕುಮಾರ್ .ವಿ ಇವರ ನೇತೃತ್ವ, ಎಂ.ಎನ್ ಸಿ.ಎಫ್ ಸಿ ಯ ಉಪ‌ ನಿರ್ದೇಶಕರಾದ ಕರಣ್ ಚೌಧರಿ, ಆಹಾರ ಮತ್ತು ನಾಗರೀಕ‌ ಸರಬರಾಜು ಇಲಾಖೆ ಉಪ ಕಾರ್ಯದರ್ಶಿ ಸಂಗೀತ್ ಕುಮಾರ್ ಹಾಗೂ ರಾಜ್ಯದ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಹಿರಿಯ ಸಲಹೆಗಾರರಾದ ಡಾ ಶ್ರೀನಿವಾಸ ರೆಡ್ಡಿ ಇರಲಿದ್ದಾರೆ.

ತಂಡಗಳ ಪ್ರವಾಸದ ವಿವರ — ಮೊದಲ ತಂಡ: ಅಕ್ಟೋಬರ್ 5 ರಂದು ಬೆಳಗಾವಿಗೆ ಆಗಮನ. ಅಕ್ಟೋಬರ್ 6 ರಂದು ಬೆಳಗಾವಿ ಹಾಗೂ ವಿಜಾಪುರ ಜಿಲ್ಲೆಗಳಲ್ಲಿ ಬರ ಪರಿಶೀಲನೆ. ಅಕ್ಟೋಬರ್ 7 ರಂದು ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಬರ ಪರಿಶೀಲನೆ. ಅಕ್ಟೋಬರ್ 8 ರಂದು ಬೆಂಗಳೂರು ಪ್ರಯಾಣ.

ಎರಡನೆ ತಂಡ: ಗದಗ್ ಕೊಪ್ಪಳ, ಬಳ್ಳಾರಿ ವಿಜಯನಗರ ಜಿಲ್ಲಾ ಪ್ರವಾಸ ಬರ ಅಧ್ಯಯನ. ಅಕ್ಟೋಬರ್ 5 ರಂದು ಬೆಂಗಳೂರಿನಿಂದ ಹುಬ್ಬಳಿಗೆ ಪ್ರಯಾಣ ವಾಸ್ತವ್ಯ. ಅಕ್ಟೋಬರ್ 6 ರಂದು ಗದಗ ಹಾಗೂ ಕೊಪ್ಪಳ ‌ಜಿಲ್ಲೆಗಳ ಬರ ಪರಿಸ್ಥಿತಿ ಅಧ್ಯಯನ. ಅಕ್ಟೋಬರ್ 7 ರಂದು ವಿಜಯನಗರ, ಬಳ್ಳಾರಿ ಜಿಲ್ಲೆಗಳ ಬರ ಅಧ್ಯಯನ. ಅಕ್ಟೋಬರ್ 8 ರಂದು ಬೆಂಗಳೂರು ಪ್ರಯಾಣ.

ಮೂರನೇ ತಂಡ: ಅಕ್ಟೋಬರ್ 6 ರಂದು ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಪ್ರವಾಸ ನಡೆಸಿ ಚಿತ್ರದುರ್ಗ ವಾಸ್ತವ್ಯ. ಅಕ್ಟೋಬರ್ 7 ರಂದು ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆ ಪ್ರವಾಸ ನಡೆಸಿ ಬೆಂಗಳೂರು ಆಗಮನ. ಅಕ್ಟೋಬರ್ 8 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬರ ಪರಿಸ್ಥಿತಿ ಅಧ್ಯಯನ. ಮೂರು ತಂಡಗಳು ಅಕ್ಟೋಬರ್ 8 ರಂದು ಬೆಂಗಳೂರು ಆಗಮಿಸಿ ಅಕ್ಟೋಬರ್ 9 ರಂದು ಬೆಂಗಳೂರಿನಲ್ಲಿ ಮತ್ತೊಮ್ಮೆ ಸ್ಥಳೀಯ ಅಧಿಕಾರಿಗಳಿಂದ ಸಂಕ್ಷಿಪ್ತ ವಿವರಣೆ ಪಡೆದು ದೆಹಲಿಗೆ ತೆರಳಲಿದೆ.

ಅಧಿಕಾರಿಗಳಿಗೆ ಕೃಷಿ ಸಚಿವರ ಸೂಚನೆ: ಕೇಂದ್ರ ತಂಡ ಜಿಲ್ಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಂದಾಯ,ಕೃಷಿ , ತೋಟಗಾರಿಕೆ ಇಲಾಖೆ ಅಧಿಕಾರಿಗಳು ಈ ಸಾಲಿನ ಮಳೆಯ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡಿಕೊಡಬೇಕು. ಹಲವುಕಡೆ ಸಂಪೂರ್ಣ ಬೆಳೆ ಹಾನಿಯಾಗಿದ್ದು ಕೆಲವೆಡೆ ಬೆಳೆ ಇದ್ದರೂ ಉಂಟಾಗಲಿರುವ ತೀವ್ರ ಇಳುವರಿ ಕುಸಿತದ ಬಗ್ಗೆ ಪರಿಣಾಮಕಾರಿಯಾಗಿ ವಿವರಿಸಿ ಅರ್ಥ ಮಾಡಿಕೊಡಬೇಕು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸುದ್ದಿ ಮೂಲ: ಕರ್ನಾಟಕ ವಾರ್ತೆ

About the Author

Vighnesh Pawar

Subscriber

View All Posts

Post navigation

Previous: Karnataka CM Siddaramaiah | ಸೇವಾಲಾಲ್ ಮಠಕ್ಕೆ ನೆರವು ನೀಡಿದ್ದು ನಮ್ಮ ಸರ್ಕಾರ, ಸೇವಾಲಾಲ್ ಜಯಂತಿ ಆಚರಿಸಿದ್ದು ನಮ್ಮ ಸರ್ಕಾರ, ತಾಂಡ್ಯಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು ನಮ್ಮ ಸರ್ಕಾರ
Next: Shimoga | ಶಿವಮೊಗ್ಗ ಘಟನೆಯ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

Related Stories

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

The Bengaluru Live November 24, 2026 9:08 PM

Latest Post

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

November 25, 2026 10:58 AM
ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

November 25, 2026 10:01 AM
ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM

ನೀವು ತಪ್ಪಿಸಿಕೊಂಡಿರಬಹುದು

ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

The Bengaluru Live November 25, 2026 10:58 AM
ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

The Bengaluru Live November 25, 2026 10:01 AM
ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ
  • ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ
  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
©Copyright 2025 The Bengaluru Live All rights reserved. | MoreNews by AF themes.