Home ಬೆಂಗಳೂರು ನಗರ Drought in Karnataka: ಜಂಟಿ ಸಮೀಕ್ಷೆ ವರದಿ ಆಧಾರದ ಅನುಸಾರ ಬರ ಘೋಷಣೆ ತೀರ್ಮಾನಿಸಲಾಗುವುದು –...

Drought in Karnataka: ಜಂಟಿ ಸಮೀಕ್ಷೆ ವರದಿ ಆಧಾರದ ಅನುಸಾರ ಬರ ಘೋಷಣೆ ತೀರ್ಮಾನಿಸಲಾಗುವುದು – ಕಂದಾಯ ಸಚಿವ ಕೃಷ್ಣ ಭೈರೇಗೌಡ

7
0
Drought in Karnataka: Final announcement after joint survey report - Revenue Minister Krishna Byre Gowda
Drought in Karnataka: Final announcement after joint survey report - Revenue Minister Krishna Byre Gowda
Advertisement
bengaluru

ಬೆಂಗಳೂರು:

ರಾಜ್ಯದಲ್ಲಿ ಆರಂಭದಲ್ಲಿಯೇ 2023ರ ಮಂಗಾರು ದುರ್ಬಲಗೊಂಡು, ಜೂನ್ ತಿಂಗಳಿನಲ್ಲಿ ಶೇ 55ರಷ್ಟು ಮಳೆ ಕೊರತೆಯಾಗಿತ್ತು. ನಂತರ ಜುಲೈ ತಂಗಳಿನಲ್ಲಿ ಉತ್ತಮವಾಗಿ ಮಳೆಯಾದರೂ, ಆಗಸ್ಟ್ ತಿಂಗಳಿನಲ್ಲಿ ಶೇಕಡಾ 73 ರಷ್ಟು ಮಳೆ ಕೊರತೆಯಾಗಿದೆ. 2. ಒಟ್ಟಾರೆ ಪ್ರಸಕ್ತ ಮಂಗಾರು ಜೂನ್ 1 ರಿಂದ ಸೆಪ್ಟೆಂಬರ್ 4 ರವರೆಗೆ ವಾಡಿಕೆಯಾಗಿ 711 ಮಿ.ಮಿ. ಮಳೆಯಾಗಬೇಕಿದ್ದು, ವಾಸ್ತವಿಕ 526 ಮಿ.ಮಿ ಮಳೆಯಾಗಿದ್ದು, ಶೇಕಡಾ 26ರಷ್ಟು ಮಳೆ ಕೊರತೆಯಾಗಿದ್ದು, ಬರ ಪರಿಸ್ಥಿತಿ ತಲೆದೋರಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಜರುಗಿದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಪ್ರಕೃತಿ ವಿಕೋಪದಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಿ, ಮಾತನಾಡಿದ ಸಚಿವರು, ಬರ ಪರಿಸ್ಥಿತಿ ಬಗ್ಗೆ ನಿಗಾ ಮತ್ತು ನಿರ್ವಹಣೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಈವರೆಗೆ 3 ಬಾರಿ ಸಭೆ ನಡೆಸಿ ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಪರಾಮರ್ಶಿಸಿದೆ. ದಿನಾಂಕ 22-08-2023 ರಂದು ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಕೇಂದ್ರ ಸರ್ಕಾರದ ಕೃಷಿ, ಸಹಕಾರ ಮತ್ತು ರೈತರ ಕಲ್ಯಾಣ ಮಂತ್ರಾಲಯದ ಪರಿಷ್ಕøತ ಬರ ಕೃಪಿಡಿ 2020ರಲ್ಲಿ ಸೂಚಿಸಲಾಗಿರುವ, ಕಡ್ಡಾಯ ಮಾನದಂಡಗಳಾದ, ಮಳೆ ಕೊರತೆ (ಶೇಕಡಾ>60, ಸತತ 3 ವಾರಗಳ ಶುಷ್ಕ ವಾತಾವರಣ ಹಾಗೂ ಇತರೆ ತತ್ಪರಿಣಾಮ ಮಾನದಂಡಗಳ (ಉಪಗ್ರಹ ಆಧಾರತ ಬೆಳೆ ಸೂಚ್ಯಂಕ, ತೇವಾಂಶ ಕೊರತೆ ಹಾಗೂ ಜಲ ಸಂಪನ್ಮೂಲ ಸೂಚ್ಯಂಕ) ಅನ್ವಯ, ರಾಜ್ಯದಲ್ಲಿ ಬರ ಪರಿಸ್ಥಿತಿ ಕಂಡುಬಂದಿರುವ 113 ತಾಲೂಕುಗಳನ್ನು ಕ್ಷೇತ್ರ ಪರಿಶೀಲನೆ ಹಾಗೂ ದೃಢೀಕರಣಕ್ಕಾಗಿ Ground Truthing ಜಂಟಿ ಸಮೀಕ್ಷೆ ಕೈಗೊಂಡು ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು ಎಂದು ತಿಳಿಸಿದರು.

ದಿನಾಂಕ 19-08-2023ರಲ್ಲಿದ್ದಂತೆ 113 ತಾಲೂಕುಗಳ ಪೈಕಿ ಜಂಟಿ ಸಮೀಕ್ಷೆಯಲ್ಲಿ ಮಾರ್ಗಸೂಚಿ ಅನ್ವಯ 62 ತಾಲೂಕುಗಳ ಬರ ಘೋಷಣೆಗೆ ಅರ್ಹವಾಗಿದೆ. ಆದರೆ, ಜಂಟಿ ಸಮೀಕ್ಷೆಯ ನಂತರ ಬೆಳೆ ಪರಿಸ್ಥಿತಿ ಮತ್ತೆ ಕುಸಿದಿದೆ ಎಂದು ವರದಿಗಳು ಬಂದಿರುತ್ತವೆ. ಹಾಗಾಗಿ ಉಳಿದ 51 ತಾಲೂಕುಗಳಲ್ಲಿ ಮತ್ತೊಮ್ಮೆ ಜಂಟಿ ಸಮೀಕ್ಷೆಗೆ ಒಳಪಡಿಸಲು ತೀರ್ಮಾನಿಸಿದೆ. ಮುಂದುವರೆದು ದಿನಾಂಕ 02-09-2023 ರ ಅಂತ್ಯಕ್ಕೆ ಅರ್ಹವಾಗಿರುವ 83 ತಾಲೂಕುಗಳಲ್ಲಿ Ground Truthing ಜಿಲ್ಲಾಧಿಕಾರಿಗಳಿಗೆ ಸೂಚಿಸಲು ತೀರ್ಮಾನಿಸಲಾಯಿತು. ಒಟ್ಟಾರೆ 51 ಮತ್ತು 83 ತಾಲೂಕುಗಳಲ್ಲಿ,Ground Truthing ಮುಗಿಸಿ ಒಂದು ವಾರದೊಳಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ ಎಂದು ತಿಳಿಸಿದರು.

bengaluru bengaluru

134 ತಾಲೂಕುಗಳಲ್ಲಿ ಜಂಟಿ ಸಮೀಕ್ಷೆ ವರದಿ ಆಧಾರದ ಅನುಸಾರ ಬರ ಘೋಷಣೆ ತೀರ್ಮಾನಿಸಲಾಗುವುದು. ಬರ ಘೋಷಣೆಯ ನಂತರ ಕೇಂದ್ರ ಸರ್ಕಾರದ ನೆರವಿಗಾಗಿ ಮನವಿ ಸಲ್ಲಿಸಲು (ಮಮೊರಾಂಡಮ್) ಸಲ್ಲಿಸಲಾಗುವುದು. ಬರ ಘೋಷಣೆ ಯಾದ ದಿನದಿಂದ ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೆÇೀರ್ಸ್ ರಚಿಸಲು ತೀರ್ಮಾನಿಸಲಾಗಿದೆ.

ಬರ ಘೋಷಣೆ ನಂತರ ಕುಡಿಯುವ ನೀರು ಕೊರತೆ ಕಂಡುಬಂದ ವಸತಿ ಪ್ರದೇಶಗಳಲ್ಲಿ ಟ್ಯಾಂಕರ್ ಮುಖಾಂತರ ಅಥವಾ ಬಾಡಿಗೆ ಬೋರ್ ವೆಲ್ ಮುಖಾಂತರ ತುರ್ತು ಕುಡಿಯುವ ನೀರು ಒದಗಿಸುವ ಖರ್ಚು ವೆಚ್ಚವನ್ನು ಎಸ್ ಡಿಆರ್ ಎಫ್ (SDRF) ಮುಖಾಂತರ ಬರಿಸಲು ಅನುಮತಿಸಿದೆ. ಹಾಲಿ ಮೇವು ಲಭ್ಯವಿದ್ದು ಮುಂದಿನ ದಿನಗಳಲ್ಲಿ ಮೇವಿನ ಕೊರತೆ ನಿಭಾಯಿಸಲು ನೀರಿನ ವ್ಯವಸ್ಥೆ ಇರುವ ರೈತರಿಗೆ ಮೇವು ಬಿತ್ತನೆ ಬೀಜದ ಕಿಟ್ ವಿತರಿಸಲು ಪಶು ಸಂಗೋಪನೆ ಇಲಾಖೆಗೆ 20 ಕೋಟಿ ರೂ ಮೊತ್ತ ವಿತರಿಸಲು ತೀರ್ಮಾನಿಸಲಾಗಿದೆ. ಹಾಗೂ ಎಲ್ಲಾ ತೀರ್ಮಾನಗಳೂ ಸಚಿವ ಸಂಪುಟ ಸಮಿತಿ ನಿರ್ಣಯಕ್ಕೆ ಒಳಪಟ್ಟಿರುತ್ತವೆ ಎಂದು ತಿಳಿಸಿದರು.

Indradhanush 5.0 in Karnataka: ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನ

ಬೆಂಗಳೂರು:

ಲಸಿಕೆಗಳಿಂದ ತಡೆಗಟ್ಟಬಹುದಾದ ಮಾರಕ ರೋಗಗಳ ವಿರುದ್ಧ ಮಕ್ಕಳನ್ನು ರಕ್ಷಿಸಲು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ, ಅನೇಕ ಲಸಿಕೆಗಳನ್ನು ನೀಡಲಾಗುತ್ತಿದೆ. ಲಸಿಕೆಗಳನ್ನು ಕಾಲಕಾಲಕ್ಕೆ ಪಡೆಯದೆ ವಂಚಿತರಾದ 0-5 ವರ್ಷದೊಳಗಿನ ಮಕ್ಕಳು ಹಾಗೂ ಗರ್ಭಿಣಿಯರನ್ನು ಗುರಿಯಾಗಿಸಿಕೊಂಡು ಅವರಿಗೆ ಬಿಟ್ಟು ಹೋದ ಲಸಿಕೆಗಳನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರವು ತೀವ್ರತರವಾದ ಇಂದ್ರಧನುಷ್ ಲಸಿಕಾ ಅಭಿಯಾನ 5.0 ಕಾರ್ಯಕ್ರಮವನ್ನು ಆಯೋಜಿಸಿದೆ.

ಈ ಅಭಿಯಾನದಲ್ಲಿ ಲಸಿಕೆ ಪಡೆಯದೇ ವಂಚಿತರಾಗಿರುವ, ಬಿಟ್ಟು ಹೋಗಿರುವ, ಅಪಾಯದಲ್ಲಿರುವ ಪ್ರದೇಶಗಳನ್ನು ಮತ್ತು ಸಮುದಾಯಗಳನ್ನು ಗುರುತಿಸಿ ಅವರನ್ನು ತಲುಪುವತ್ತ ನಮ್ಮ ಪ್ರಯತ್ನಗಳನ್ನು ಕೇಂದ್ರೀಕರಿಸಬೇಕಾಗಿದೆ. ವಿಶೇಷವಾಗಿ ದಢಾರ, ರುಬೆಲ್ಲಾ ಲಸಿಕಾಕರಣ, ಪಿಸಿವಿ ಲಸಿಕಾಕರಣ ಮತ್ತು ಇತ್ತೀಚಿಗೆ 3ನೇ ಡೋಸ್ ಆಗಿ ಸೇರ್ಪಡೆಗೊಳಿಸಿರುವ ಎಫ್‍ಐಪಿವಿ ಲಸಿಕಾಕರಣದ ಪ್ರಗತಿಯನ್ನು ಹೆಚ್ಚಿಸುವ ಸಲುವಾಗಿ ತೀವ್ರತರವಾದ ಇಂದ್ರಧನುಷ್ ಅಭಿಯಾನ 5.0 ನ್ನು ಹಮ್ಮಿಕೊಳ್ಳಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ನಿರ್ದೇಶನದಂತೆ ರಾಜ್ಯ ಸರ್ಕಾರವು 2023 ರ ಆಗಸ್ಟ್ 7 ರಿಂದ 12 ರವರೆಗೆ, ಸೆಪ್ಟೆಂಬರ್ 12 ರಿಂದ 16ರವರೆಗೆ ಮತ್ತು ಅಕ್ಟೋಬರ್ 9 ರಿಂದ 14 ರವರೆಗೆ ಈ ತಿಂಗಳುಗಳಲ್ಲಿ ನಿರ್ಧಿಷ್ಟ 6 ದಿನಗಳಂದು ಸಾರ್ವತ್ರಿಕ ಲಸಿಕಾಕಾರ್ಯಕ್ರಮದ ಲಸಿಕಾ ಕಾರ್ಯಕ್ರಮದ ದಿನಗಳನ್ನು ಒಳಗೊಂಡಂತೆ ರಾಜ್ಯದ ಎಲ್ಲಾ 32 ಜಿಲ್ಲೆಗಳಲ್ಲಿ ಮೂರು ಸುತ್ತುಗಳಲ್ಲಿ ತೀವ್ರತರವಾದ ಇಂದ್ರಧನುಷ್ ಅಭಿಯಾನ 5.0 ಅನ್ನು ನಡೆಸಲು ತೀರ್ಮಾನಿಸಲಾಗಿರುತ್ತದೆ.

ತೀವ್ರತರವಾದ ಮಿಷನ್ ಇಂದ್ರಧನುಷ್ 50 ಕಾರ್ಯಕ್ರಮದ ಮುಖ್ಯ ಅಂಶಗಳು:

ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿ ಅನುಸಾರ ವಯಸಿಗೆ ಅನುಗುಣವಾಗಿ ಲಸಿಕೆ ಪಡೆಯದ / ಬಿಟ್ಟುಹೋದ / ವಂಚಿತ ಮತ್ತು ಲಸಿಕಾಕರಣಕ್ಕೆ ಬಾಕಿ ಇರುವ ಗರ್ಭಿಣಿಯರು ಹಾಗೂ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತೀವ್ರತರವಾದ ಮಿಷನ್ ಇಂದ್ರಧನುಷ್ 5.0 ರಲ್ಲಿ ಲಸಿಕೆ ನೀಡಲಾಗುವುದು.

ವಿಶೇಷವಾಗಿ ದಢಾರ – ರುಬೆಲ್ಲಾ ರೋಗ ನಿರೋಧಕತೆಯ ಅಂತರವನ್ನು ಕಡಿಮೆ ಮಾಡಲಾಗುವುದು ದುರ್ಬಲ ಸಮುದಾಯವನ್ನು ತಲುಪುವುದು ಸಮುದಾಯ ಪಾಲ್ಗೊಳ್ಳುವಿಕೆ, ಸಾರ್ವತಿಕ ಲಸಿಕಾ ವೇಳಾಪಟ್ಟಿಗೆ ಇತ್ತೀಚಿಗೆ ಸೇರ್ಪಡೆಗೊಂಡ ಪಿಸಿವಿ ಲಸಿಕೆ ಮತ್ತು 3ನೇ ಡೋಸ್ ಆಗಿ ಸೇರ್ಪಡೆಗೊಳಿಸಿದ ಎಫ್‍ಐಪಿವಿ ಲಸಿಕಾಕರಣದ ಪ್ರಗತಿಯನ್ನು ಹಾಗೂ ಡಿಪಿಟಿ ಬೂಸ್ಟರ್ ಅನ್ನು ಓಪಿವಿ ಬೂಸ್ಟರ್ ಲಸಿಕೆಗಳ ಪ್ರಗತಿಯನ್ನು ಹೆಚ್ಚಿಸಲಾಗುವುದು. ತೀವ್ರತರವಾದ ಮಿಷನ್ ಇಂದ್ರಧನುಷ್ 5.0 ರಲ್ಲಿ ನೀಡಲಾದ ಲಸಿಕೆಗಳ ವಿವರವನ್ನು U-WIN ಪೋರ್ಟ್‍ಲ್ ನಲ್ಲಿ ದಾಖಲಿಸಿ ಇ-ಲಸಿಕಾಕರಣದ ಪ್ರಮಾಣ ಪತ್ರ ಸೃಜಿಸಲಾಗುವುದು.

ಲಸಿಕೆ ಬಾಕಿ ಇರುವ / ಲಸಿಕೆ ಬಿಟ್ಟು ಹೋಗಿರುವ / ಲಸಿಕೆ ವಂಚಿತರಾಗಿರುವ ಮಕ್ಕಳಿಗೆ ಹಾಗು ಗರ್ಭಿಣಿಯರಿಗೆ ಲಸಿಕೆ ಹಾಕಿಸುವಲ್ಲಿ ಎಲ್ಲರ ಸಹಕಾರ ಮಹತ್ವದಾಗಿರುತ್ತದೆ. ಆದ್ದರಿಂದ ಈ ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳು ಸಂವಹನ ತಂತ್ರಜ್ಞಾನ ಅಭಿವೃದ್ಧಿಗೆ ಬೆಂಬಲ ನೀಡಬೇಕು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಸುದ್ದಿ ಮೂಲ: ಕರ್ನಾಟಕ ವಾರ್ತೆ


bengaluru

LEAVE A REPLY

Please enter your comment!
Please enter your name here