ಬೆಂಗಳೂರು:
ಡಾರ್ಕ್ ವೆಬ್ ಮೂಲಕ ವಿದೇಶದಿಂದ ಡ್ರಗ್ಸ್ ಆಮದು ಕೇಸ್ಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಡಿ ಹೆಡ್ ಕಾನ್ಸ್ಟೇಬಲ್ ಅನ್ನು ಅಮಾನತುಗೊಳಿಸಲಾಗಿದೆ.
ಸದಾಶಿವನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಪ್ರಭಾಕರ್ ಅಮಾತನತ್ತಾದವರು.
ಪ್ರಕರಣದಲ್ಲಿ ಬಂಧಿತ ಆರೋಪಿಗಳಿಗೆ ಅವರು ಕೇಳಿದ್ದ ವ್ಯಕ್ತಿಗಳ ಲೊಕೇಷನ್ ಹಾಗೂ ಇತರೆ ಮಾಹಿತಿ ನೀಡಲಾಗಿದೆ ಎಂಬ ಆರೋಪದಡಿ ಸದಾಶಿವನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಪ್ರಭಾಕರ್ನನ್ನು ಸಸ್ಪೆಂಡ್ ಮಾಡಲಾಗಿದೆ.
ಚಾಮರಾಜಪೇಟೆಯ ಪೋಸ್ಟ್ ಆಫೀಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲ ಸಿಬ್ಬಂದಿಗಳೊಂದಿಗೆ ಆರೋಪಿಗಳ ಸಂಪರ್ಕ ಹೊಂದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.