Home ಕರ್ನಾಟಕ ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

34
0
Dubai Kannadigas felicitates Karnataka Minister Ashwathnarayan

ದುಬೈ:

`ದುಬೈ ಎಕ್ಸ್ ಪೋ-2020’ರಲ್ಲಿ ಕರ್ನಾಟಕ ಸರಕಾರದ ಪರವಾಗಿ ಭಾಗವಹಿಸಲು ಇಲ್ಲಿಗೆ ಆಗಮಿಸಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ಇಲ್ಲಿರುವ ಸಂಯುಕ್ತ ಅರಬ್ ಸಂಸ್ಥಾನದ ಅನಿವಾಸಿ ಕನ್ನಡಿಗರ ವೇದಿಕೆಯ ವತಿಯಿಂದ ಶುಕ್ರವಾರ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, “ಅನಿವಾಸಿ ಕನ್ನಡಿಗರು ನೀಡಿದ ಈ ಸನ್ಮಾನದಿಂದ ಹೃದಯ ತುಂಬಿ ಬಂದಿದೆ. ಇಲ್ಲಿರುವ ಕನ್ನಡಿಗರೆಲ್ಲರೂ ಕರ್ನಾಟಕದ ರಾಯಭಾರಿಗಳಿದ್ದಂತೆ,’’ ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯರ ಸಂಘದ ಪದಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ, ರಾಜ್ಯ ಕೈಮಗ್ಗ ನಿಗಮದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here