Home ಶಿವಮೊಗ್ಗ ಕಲ್ಲು ಗಣಿಗಾರಿಕೆಗೆ ಸಾಗಿಸುತ್ತಿದ್ದ ಡೈನಮೈಟ್, ಜಿಲೆಟಿನ್ ಸ್ಫೋಟ; 8ಕ್ಕೂ ಅಧಿಕ ಮಂದಿ ಸಾವು

ಕಲ್ಲು ಗಣಿಗಾರಿಕೆಗೆ ಸಾಗಿಸುತ್ತಿದ್ದ ಡೈನಮೈಟ್, ಜಿಲೆಟಿನ್ ಸ್ಫೋಟ; 8ಕ್ಕೂ ಅಧಿಕ ಮಂದಿ ಸಾವು

27
0

ಶಿವಮೊಗ್ಗ/ಬೆಂಗಳೂರು:

ಲ್ಲು ಗಣಿಗಾರಿಕೆಗೆ ಸಾಗಿಸುತ್ತಿದ್ದ ಡೈನಮೈಟ್ ಸ್ಫೋಟಗೊಂಡ ಪರಿಣಾಮ 8ಕ್ಕೂ ಅಧಿಕ ಕಾರ್ಮಿಕರು ದಾರುಣ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಅಬ್ಬಲಗೆರೆಯ ಹುಣಸೋಡು ರೈಲ್ವೆ ಕ್ರಷರ್ ನಲ್ಲಿ ಕಳೆದ ರಾತ್ರಿ ನಡೆದಿದೆ.

ಲಾರಿಯಲ್ಲಿ ಜಿಲೆಟಿನ್ ಕಡ್ಡಿಗಳು, ಡೈನಮೈಟ್ ಗಳು ಹಾಗೂ ಇನ್ನಿತರ ಸ್ಫೋಟಕ ಸಾಮಗ್ರಿಗಳನ್ನು ಶಿವಮೊಗ್ಗಕ್ಕೆ ತರಲಾಗಿತ್ತು. ಈ ವೇಳೆ ಒಂದಕ್ಕೊಂದು ತಗುಲಿ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಪರಿಣಾಮ ಲಾರಿ ಹಾಗೂ ಕಾರ್ಮಿಕರ ದೇಹಗಳು ಛಿದ್ರವಾಗಿವೆ.

ಕಲ್ಲು ಕ್ವಾರಿಯೊಂದರ ಬಳಿ ರಾತ್ರಿ 10:30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈ ಅವಘಡದಲ್ಲಿ 8ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದು ತಿಳಿದುಬಂದಿದೆ. ಸ್ಫೋಟದ ತೀವ್ರತೆಯಿಂದ ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೀತಿಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

LEAVE A REPLY

Please enter your comment!
Please enter your name here