Home ರಾಜಕೀಯ ಸಂಸದರಾಗಿ ಆಯ್ಕೆಯಾದ ಇ.ತುಕಾರಾಂ ಶಾಸಕ ಸ್ಥಾನಕ್ಕೆ ರಾಜೀನಾಮೆ

ಸಂಸದರಾಗಿ ಆಯ್ಕೆಯಾದ ಇ.ತುಕಾರಾಂ ಶಾಸಕ ಸ್ಥಾನಕ್ಕೆ ರಾಜೀನಾಮೆ

13
0

ಬೆಂಗಳೂರು : 2023ರ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದಿಂದ ಆಯ್ಕೆಯಾಗಿದ್ದ ಇ. ತುಕಾರಾಂ ತಮ್ಮ ಶಾಸಕ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಇ. ತುಕಾರಾಂ ಸಂಸದರಾಗಿ ಆಯ್ಕೆಯಾದರು. ಆದ್ದರಿಂದ ತುಕಾರಾಂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here