Home ಕರ್ನಾಟಕ ಮುಡಾ ಪ್ರಕರಣದಲ್ಲಿ ಇಡಿ ಪ್ರವೇಶ: ದೂರುದಾರ ಸ್ನೇಹಮಯಿ ಕೃಷ್ಣಗೆ ಸಮನ್ಸ್ ಜಾರಿ

ಮುಡಾ ಪ್ರಕರಣದಲ್ಲಿ ಇಡಿ ಪ್ರವೇಶ: ದೂರುದಾರ ಸ್ನೇಹಮಯಿ ಕೃಷ್ಣಗೆ ಸಮನ್ಸ್ ಜಾರಿ

10
0

ಬೆಂಗಳೂರು: ಇಡಿ ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದ್ದು, ಮೊದಲ ಬಾರಿಗೆ ಅಧಿಕೃತವಾಗಿ ಸಿಎಂ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣಗೆ ಪ್ರಕರಣದ ಸಾಕ್ಷ್ಯಾಧಾರ, ದಾಖಲೆ ಸಲ್ಲಿಸುವಂತೆ ಸಮನ್ಸ್ ನೀಡಿದೆ.

ಅಕ್ಟೋಬರ್ 3ರ ಬೆಳಗ್ಗೆ 11 ಗಂಟೆಯೊಳಗೆ ಇ-ಮೇಲ್ ಮೂಲಕ ಮುಡಾ ಪ್ರಕರಣದ ಸಂಬಂಧಿಸಿದಂತೆ ಸಾಕ್ಷ್ಯಾಧಾರ, ದಾಖಲೆ ಸಲ್ಲಿಸುವಂತೆ ಸಿಎಂ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣಗೆ ಇಡಿ ಸಮನ್ಸ್ ಜಾರಿ ಮಾಡಿದೆ. ಈ ಮೂಲಕ ಇಡಿ ಅಧಿಕೃತವಾಗಿ ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದಂತಾಗಿದೆ.

ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಇಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿನ್ನೆ ಅಷ್ಟೇ ಇಸಿಐಆರ್ ದಾಖಲಿಸಿಕೊಂಡಿದೆ. ಇದರ ಬೆನ್ನಲ್ಲೇ ಇದೀಗ ಇಡೀ ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದ್ದು, ಮೊದಲಿಗೆ ದೂರಿಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ, ದಾಖಲೆ ಸಲ್ಲಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣಗೆ ಇಡಿ ಸಮನ್ಸ್ ನೀಡಿದೆ.

PMLA ಕಾಯ್ದೆಯಡಿ ECIR ದಾಖಲಾಗಿದ್ದು, ಈ ECIR ಪೊಲೀಸರ FIRಗೆ ಸರಿ ಸಮಾನವಾಗಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ವಿಶೇಷಾಧಿಕಾರವಿದೆ. ಸಮನ್ಸ್ ನೀಡಿ ವಿಚಾರಣೆಗೆ ಕರೆಯಬಲ್ಲ ಅಧಿಕಾರ ಇಡಿಗಿದೆ. ಅಲ್ಲದೇ ತನಿಖೆ ಹಂತದಲ್ಲಿ ಆಸ್ತಿಗಳನ್ನ ಸೀಜ್ ಮಾಡುವ ಅಧಿಕಾರವಿದೆ.

LEAVE A REPLY

Please enter your comment!
Please enter your name here