Home ಅಪರಾಧ ಕಾಂಗ್ರೆಸ್ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ರೋಷನ್ ಬೇಗ್ ನಿವಾಸ, ಕಚೇರಿ ಮೇಲೆ...

ಕಾಂಗ್ರೆಸ್ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ರೋಷನ್ ಬೇಗ್ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ

143
0
Advertisement
bengaluru

ಬೆಂಗಳೂರು:

ಮಾಜಿ ಸಚಿವರಾದ ಜಮೀರ್ ಅಹಮದ್ ಖಾನ್ ಹಾಗೂ ರೋಷನ್ ಬೇಗ್ ಅವರುಗಳ ನಿವಾಸ, ಕಚೇರಿ ಮೇಲೆ ಗುರುವಾರ ಮುಂಜಾನೆ ಇಡಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸ, ಕಚೇರಿ, ಫ್ಲ್ಯಾಟ್ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಇದರ ಜೊತೆಗೆ ಜಮೀರ್ ಅಹ್ಮದ್ ಖಾನ್ ಅವರಿಗೆ ಸೇರಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೂ ದಾಳಿ ನಡೆದಿದೆ ಎಂದೂ ವರದಿಯಾಗಿದೆ.

ಶಿವಾಜಿನಗರದಲ್ಲಿರುವ ರೋಷನ್ ಬೇಗ್ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ ಐಎಂಎ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ರೋಷನ್ ಬೇಗ್ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸಕ್ಷಮ ಪ್ರಾಧಿಕಾರದ ಮುಖ್ಯಸ್ಥರು ಈ ಹಿಂದೆ ಸರ್ಕಾರಕ್ಕೆ ಅನುಮತಿ ಕೋರಿದ್ದರು.

bengaluru bengaluru

bengaluru

LEAVE A REPLY

Please enter your comment!
Please enter your name here