Home Uncategorized Education Policy; ರಾಜ್ಯ ಶಿಕ್ಷಣ ನೀತಿ ಸಮಿತಿ ರಚಿಸಿದ ಸರ್ಕಾರ

Education Policy; ರಾಜ್ಯ ಶಿಕ್ಷಣ ನೀತಿ ಸಮಿತಿ ರಚಿಸಿದ ಸರ್ಕಾರ

31
0

ಬೆಂಗಳೂರು;- ರಾಜ್ಯ ಶಿಕ್ಷಣ ನೀತಿ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿರುವ. ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ತರುವ ಕುರಿತು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಅಧಿಕಾರಕ್ಕೆ ಬಂದ ಕೂಡಲೇ ಪಠ್ಯ ಪರಿಷ್ಕರಣೆಗೆ ಕೈ ಹಾಕಿದ್ದ ಸರ್ಕಾರ ರಾಜ್ಯ ಶಿಕ್ಷಣ ನೀತಿ ಜಾರಿಗೆ ಪೂರಕವಾಗಿ ರಾಜ್ಯ ಶಿಕ್ಷಣ ನೀತಿ ಆಯೋಗ ರಚನೆ ಮಾಡಿದೆ. 2024ರ ಫೆ.28ರೊಳಗೆ ವರದಿ ಸಲ್ಲಿಸುವಂತೆ ಆಯೋಗಕ್ಕೆ ಸರ್ಕಾರ ಸೂಚನೆ ನೀಡಿದ್ದು, ರಾಜ್ಯ ಶಿಕ್ಷಣ ನೀತಿ ಆಯೋಗಕ್ಕೆ ಒಟ್ಟು 15 ಸದಸ್ಯರನ್ನು ನೇಮಕ ಮಾಡಲಾಗಿದೆ. 8 ವಿಷಯ ತಜ್ಞರು, ಪ್ರೊ.ನಿರಂಜನಾರಾಧ್ಯ, ರಹಮತ್ ತರೀಕೆರೆ ಸೇರಿದಂತೆ ಪ್ರಮುಖ ಸಾಹಿತಿಗಳಿಗೂ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.

The post Education Policy; ರಾಜ್ಯ ಶಿಕ್ಷಣ ನೀತಿ ಸಮಿತಿ ರಚಿಸಿದ ಸರ್ಕಾರ appeared first on Ain Live News.

LEAVE A REPLY

Please enter your comment!
Please enter your name here