Home ಮಂಡ್ಯ ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣಾ ಯೋಜನೆಗೆ ಚಾಲನೆ

ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣಾ ಯೋಜನೆಗೆ ಚಾಲನೆ

13
0
Egg distribution scheme launched for school children in Karnataka
Egg distribution scheme launched for school children in Karnataka
Advertisement
bengaluru

ಮಂಡ್ಯ :

ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ / ಬಾಳೆಹಣ್ಣು , ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಜಿಲ್ಲೆಯ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಯೋಜನೆಗೆ ಚಾಲನೆ ನೀಡಿದರು.

ರಾಜ್ಯದ ಎಲ್ಲಾ ಸರ್ಕಾರಿ , ಅನುದಾನಿತ ಶಾಲೆಗಳ 1ರಿಂದ 10 ನೇ ತರಗತಿ ವರಗಿನ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ವಾರದಲ್ಲಿ ಎರೆಡು ದಿನ ಮೊಟ್ಟೆ , ಮೊಟ್ಟೆ ತಿನ್ನದವರಿಗೆ ಬಾಳೆ ಹಣ್ಣು ಶೇಂಗಾ ಚಿಕ್ಕಿ ವಿತರಿಸುವ ಯೋಜನೆ ಇದಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ, ಶಾಸಕರಾದ ಗಾಣಿಗ ರವಿ, ಎಬಿ ರಮೇಶ್ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣಯ್ಯ, ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ಬಿ ಬಿ ಕಾವೇರಿ ಮತ್ತಿತರರು ಉಪಸ್ಥಿತರಿದ್ದರು.

bengaluru bengaluru


bengaluru

LEAVE A REPLY

Please enter your comment!
Please enter your name here