Home ಅಪರಾಧ Bengaluru | ಪೊಲೀಸರ ಮೇಲೆ ದಾಳಿ ನಡೆಸಿದ ಎಂಟು ನೈಜೀರಿಯನ್ ಪ್ರಜೆಗಳ ಬಂಧನ

Bengaluru | ಪೊಲೀಸರ ಮೇಲೆ ದಾಳಿ ನಡೆಸಿದ ಎಂಟು ನೈಜೀರಿಯನ್ ಪ್ರಜೆಗಳ ಬಂಧನ

23
0
Nigerian citizens Attack police personnel in Bengaluru

ಬೆಂಗಳೂರು: ಪೊಲೀಸರ ಮೇಲೆ ವಿದೇಶಿ ಪ್ರಜೆಗಳಿಂದ ಹಲ್ಲೆ ಕೇಸ್ ಗೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ.

ರಾಜ್ಯದ ಅರೆಸೇನಾ ತುಕಡಿಯನ್ನು ಪೊಲೀಸರು ಕರೆದೊಯ್ದಿದಿದ್ದು, ಆರೋಪಿಗಳನ್ನು ಬಂಧಿಸಿ ಕರೆತರಲಾಗುತ್ತಿದೆ.

ಕಳೆದ ರಾತ್ರಿ ಡ್ರಗ್​ ಪೆಡ್ಲರ್​ ಇರುವ ಕುರಿತು ಮಾಹಿತಿ ಬಂದ ಹಿನ್ನಲೆ ಸಿಸಿಬಿ ಪೊಲೀಸರು ರಾಜನಕುಂಟೆ ಪೊಲೀಸ್​ ಠಾಣೆಯ ಮಾವಳ್ಳಿ ಪುರದಲ್ಲಿ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ತಪ್ಪಿಸಿಕೊಳ್ಳಲು ಮುಂದಾದ ನೈಜೀರಿಯಾ ಪ್ರಜೆಗಳು ಸೇರಿಕೊಂಡು ಸಿಸಿಬಿ ಇನ್ಸ್ ಪೆಕ್ಟರ್ ಸುಬ್ರಹ್ಮಣ್ಯಸ್ವಾಮಿ ಸೇರಿದಂತೆ ಐದಕ್ಕೂ ಹೆಚ್ಚು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು.

ತಕ್ಷಣ ಸಿಸಿಬಿ ಪೊಲೀಸರು 112 ಗೆ ಕರೆ ಮಾಡಿದ್ದರು. ಕೂಡಲೇ ಘಟನಾ ಸ್ಥಳಕ್ಕೆ ರಾಜಾನುಕುಂಟೆ ಹೊಯ್ಸಳ ಸಿಬ್ಬಂದಿಗಳು ಬಂದಿದ್ದಾರೆ. ಹೊಯ್ಸಳ ಸಿಬ್ಬಂದಿ ಮೇಲೂ ಹಲ್ಲೆ ಮಾಡಿ ಪರಾರಿಯಾಗಿದ್ದರು.

ಇನ್ನು ಸಿಸಿಬಿ ಒಂದು ಜೀಪ್ ಹಾಗೂ ರಾಜಾನುಕುಂಟೆ ಪೊಲೀಸ್ ಠಾಣೆಯ ಹೊಯ್ಸಳ ಜೀಪ್​ನ ಗಾಜನ್ನು ಕಬ್ಬಿಣದ ರಾಡು, ಕಲ್ಲಿನಿಂದ ಪುಡಿ ಮಾಡಿದ್ದರು. ಘಟನೆಯಲ್ಲಿ ಗಾಯಗೊಂಡ ಸಿಬ್ಬಂದಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಬೆಂಗಳೂರು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಆಸ್ಪತ್ರೆಗೆ ಆಗಮಿಸಿ ಗಾಯಾಳು ಸಿಬ್ಬಂದಿ ಆರೋಗ್ಯ ವಿಚಾರಸಿದರು. ನಂತರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಗಳ ಪತ್ತೆಗೆ ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದ್ದರು.

LEAVE A REPLY

Please enter your comment!
Please enter your name here