ಬೆಂಗಳೂರು:
ವಿಧಾನ ಪರಿಷತ್ ಸಭಾಪತಿ ಚುನಾವಣೆಗೆ ರಾಜ್ಯಪಾಲರು ದಿನಾಂಕ ಪ್ರಕಟಿಸಿದ್ದು, ಮಂಗಳವಾರ ಚುನಾವಣೆ ನಿಗದಿಯಾಗಿದೆ.
ಪ್ರತಾಪ್ ಚಂದ್ರಶೆಟ್ಟಿ ರಾಜೀನಾಮೆಯಿಂದ ತೆರವಾಗಿರುವ ಸಭಾಪತಿ ಹುದ್ದೆಗೆ ಸೋಮವಾರ ನಾಮಪತ್ರ ಸಲ್ಲಿಕೆಯಾಗಲಿದೆ. ಬಹುತೇಕ ಜೆಡಿಎಸ್ ನ ಹಿರಿಯ ಸದಸ್ಯ ಬಸವರಾಜಹೊರಟ್ಟಿ ಉಪ ಸಭಾಪತಿಯಾಗುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಭಾಪತಿ ಚುನಾವಣೆ ನಿಗದಿ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದ್ದು, ರಾಜ್ಯಪಾಲರು ದಿನಾಂಕ ನಿಗದಿ ಮಾಡಿದ್ದಾರೆ.
ಮಂಗಳವಾರ ಸಭಾಪತಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ನಿಯಮ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಗಳ 7 ( 1 ) ನೆಯ ನಿಬಂಧನೆಯ ಮೇರೆಗೆ ಚುನಾವಣೆಯು ನಡೆಯಲಿದೆ.
ಮೇಲ್ಮನೆಯಲ್ಲಿ ಬಿಜೆಪಿ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಸಭಾಪತಿ ಸ್ಥಾನ ಜೆಡಿಎಸ್‌ಗೆ ಬಿಟ್ಟುಕೊಡಲಾಗುತ್ತಿದೆ. ಉಪಸಭಾಪತಿಯಾಗಿ ಬಿಜೆಪಿಯ ಪ್ರಾಣೇಶ್ ಈಗಾಗಲೇ ಅಧಿಕಾರ ವಹಿಸಿಕೊಂಡಿದ್ದು,ಕಾಂಗ್ರೆಸ್ ನಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಹೋದಲ್ಲಿ ಪರೋಕ್ಷವಾಗಿ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಬಹುತೇಕ ಅವಿರೋಧವಾಗಿ ಸಭಾಪತಿಯಾಗಲಿದ್ದಾರೆ. UNI