Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Electricity Shortage in Karnataka | ಆಕಸ್ಮಿಕ‌ ಸಂದರ್ಭಕ್ಕೆ ಅಗತ್ಯವಾದ ಯೋಜನೆ/ ಸಿದ್ದತೆ ಏಕೆ ಮಾಡಿಕೊಂಡಿಲ್ಲ: ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
  • ಬೆಂಗಳೂರು ನಗರ

Electricity Shortage in Karnataka | ಆಕಸ್ಮಿಕ‌ ಸಂದರ್ಭಕ್ಕೆ ಅಗತ್ಯವಾದ ಯೋಜನೆ/ ಸಿದ್ದತೆ ಏಕೆ ಮಾಡಿಕೊಂಡಿಲ್ಲ: ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Vighnesh Pawar October 13, 2023 6:21 PM 1 minute read
Electricity Shortage in Karnataka | Why no emergency planning/preparedness has not been done: Chief Minister Siddaramaiah questioned officials

Electricity Shortage in Karnataka | Why no emergency planning/preparedness has not been done: Chief Minister Siddaramaiah questioned officials

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ
  • ಕಚೇರಿಯಲ್ಲೇ ಕುಳಿತರೆ ಸಮಸ್ಯೆ ಬಗೆಹರಿಯಲ್ಲ: ಎಸ್ಕಾಂ MD ಗಳಿಗೆ ಹೊಣೆ ಮಾಡಿ: ಸಿಎಂ ಖಡಕ್ ಸೂಚನೆ
  • ಹಿಂದಿನ ಸರ್ಕಾರ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. ಈಗ ಮಳೆ ಇಲ್ಲದೆ ಉತ್ಪಾದನೆ ಕುಂಠಿತ ಆಗಿದೆ ಎನ್ನುವುದನ್ನು ನಮ್ಮ ರೈತರಿಗೆ ಮನವರಿಕೆ ಮಾಡಿ: ಸಿಎಂ ಖಡಕ್ ಸೂಚನೆ

ಬೆಂಗಳೂರು:

ರೈತರಿಗೆ ವಿದ್ಯುತ್ ಕೊರತೆ ಆಗದಂತೆ ಆಕಸ್ಮಿಕ‌ ಸಂದರ್ಭಕ್ಕೆ ಅಗತ್ಯವಾದ ಯೋಜನೆ/ ಸಿದ್ಧತೆ ಏಕೆ ಮಾಡಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂಧನ ಇಲಾಖೆ ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಇಂಧನ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸುವ ವೇಳೆಯಲ್ಲಿ ಹಲವು ಜಿಲ್ಲೆಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗಳನ್ನು ಪ್ರಸ್ತಾಪಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಇರುವ ವಿದ್ಯುತ್ ಅನ್ನು ವೈಜ್ಞಾನಿಕವಾಗಿ ಬೇರೆ ಬೇರೆ ಬ್ಯಾಚ್ ಗಳಲ್ಲಿ ಸರಬರಾಜು ಮಾಡಲು ಕ್ರಮ ವಹಿಸಬೇಕು. ಮೊದಲೇ ಹೀಗೆ ಮಾಡಿದ್ದರೆ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ ಸಮಸ್ಯೆ ಆಗದಂತೆ ನಿರ್ವಹಿಸಬಹುದಿತ್ತು. ಕಚೇರಿಯಲ್ಲೇ ಕುಳಿತರೆ ಸಮಸ್ಯೆ ಬಗೆಹರಿಯುವುದಿಲ್ಲ. ಚೀಫ್ ಎಂಜಿನಿಯರ್ ಗಳು ಫೀಲ್ಡ್ ಗೆ ಹೋಗಬೇಕು. ಪರಿಸ್ಥಿತಿಯನ್ನು ರೈತರಿಗೆ ಮನವರಿಕೆ ಮಾಡಿಸಿ ಅವರ ಸಮಸ್ಯೆಗಳನ್ನು ಆಲಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಹಿಂದಿನ ಸರ್ಕಾರದಲ್ಲಿ ಉತ್ತಮವಾದ ಅಗತ್ಯ ಮಳೆ ಆಗಿದ್ದರೂ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಮಳೆ ಕೊರತೆ ಆಗಿ, ಬರಗಾಲ ಬಂದಿದೆ. ಇದನ್ನು ರೈತರಿಗೆ ಮನವರಿಕೆ ಮಾಡಿಸಬೇಕು. ರೈತರಿಗೆ ಯಾವ ವೇಳೆ ಎಷ್ಟು ವಿದ್ಯುತ್ ಅಗತ್ಯವಿದೆ ಎನ್ನುವುದನ್ನು ಸರಿಯಾಗಿ ಅರ್ಥಮಾಡಿಕೊಂಡು ಇರುವ ವಿದ್ಯುತ್ ಅನ್ನೇ ಅವರಿಗೆ ಅಗತ್ಯ ವೇಳೆಯಲ್ಲಿ ಸರಬರಾಜು ಮಾಡಬೇಕು ಎಂದು ಸೂಚಿಸಿದರು.

ವಿದ್ಯುತ್ ಕಳ್ಳತನ ಮತ್ತು ವಿದ್ಯುತ್ ಸೋರಿಕೆ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ? ವಿಚಕ್ಷಣಾ ದಳದಲ್ಲಿ ಎಷ್ಟು SP ಗಳು ಇದ್ದೀರಿ ? ಏನು ಮಾಡುತ್ತಿದ್ದೀರಿ? ಇವರು ಎಷ್ಟು ವಿದ್ಯುತ್ ಕಳ್ಳತನ ಪತ್ತೆ ಹಚ್ಚಿದ್ದಾರೆ ಎನ್ನುವುದನ್ನು ನಿಗಾ ವಹಿಸಿ ಕ್ರಿಯಾಶೀಲವಾಗಿ ಕೆಲಸ ಮಾಡಲು ಸೂಚನೆ ನೀಡಿ ಎನ್ನುವ ನಿರ್ದೇಶನವನ್ನು ಮುಖ್ಯಮಂತ್ರಿಗಳು ನೀಡಿದರು.

ಮುಖ್ಯಮಂತ್ರಿ @siddaramaiah ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಇಂಧನ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ ಕೆಲವು ಸೂಚನೆಗಳನ್ನು ನೀಡಿದರು.

ರೈತರಿಗೆ ವಿದ್ಯುತ್ ಕೊರತೆ ಆಗದಂತೆ ಆಕಸ್ಮಿಕ‌ ಸಂದರ್ಭಕ್ಕೆ ಅಗತ್ಯವಾದ ಯೋಜನೆ / ಸಿದ್ಧತೆ ಏಕೆ ಮಾಡಿಕೊಂಡಿಲ್ಲ? ಇರುವ ವಿದ್ಯುತ್ ಅನ್ನು ವೈಜ್ಞಾನಿಕವಾಗಿ ಬೇರೆ ಬೇರೆ ಬ್ಯಾಚ್ ಗಳಲ್ಲಿ… pic.twitter.com/lrI2HtvurB

— CM of Karnataka (@CMofKarnataka) October 13, 2023

ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ವಿದ್ಯುತ್‌ ಉತ್ಪಾದನೆ, ಪ್ರಸರಣೆ ಮತ್ತು ವಿತರಣೆಗೆ ಸಂಬಂಧಿಸಿದ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸಭೆಯ ಮುಖ್ಯಾಂಶಗಳು

  1. ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ವಿದ್ಯುತ್‌ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ ರೈತರಿಗೆ ಪ್ರತಿದಿನ ಮೂರು ಪಾಳಿಗಳಲ್ಲಿ ನಿರಂತರ ಐದು ಗಂಟೆಗಳ ಕಾಲ ವಿದ್ಯುತ್‌ ಪೂರೈಕೆ ಮಾಡುವಂತೆ ಹಾಗೂ ಲೋಡ್‌ ಶೆಡ್ಡಿಂಗ್‌ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಕಾಂಗಳ ಎಂ.ಡಿ.ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
  2. ಕೃಷಿ ಕ್ಷೇತ್ರದಲ್ಲಿ ವಿದ್ಯುತ್‌ಗೆ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಕನಿಷ್ಠ ಐದು ಗಂಟೆ ನಿರಂತರ ವಿದ್ಯುತ್‌ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
  3. ಲಭ್ಯವಿರುವ ವಿದ್ಯುತ್ತಿನ ದಕ್ಷ ಹಂಚಿಕೆಯೂ ಅತಿ ಮುಖ್ಯವಾಗಿದ್ದು, ಎಸ್ಕಾಂಗಳ ಎಂ.ಡಿ.ಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಿ ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಎಲ್ಲ ಮುಖ್ಯ ಎಂಜಿನಿಯರುಗಳನ್ನು ಜಿಲ್ಲೆಗೊಬ್ಬರಂತೆ ನೋಡಲ್‌ ಅಧಿಕಾರಿಗಳಾಗಿ ನೇಮಕ ಮಾಡಲಾಗಿದ್ದು, ಅವರು ನಿರಂತರ 5 ಗಂಟೆ ವಿದ್ಯುತ್‌ ಪೂರೈಕೆ ಯಾವುದೇ ಅಡಚಣೆಯಿಲ್ಲದೆ ಆಗುವಂತೆ ಖಾತರಿಪಡಿಸಬೇಕು ಎಂದು ಸೂಚಿಸಿದರು.
  4. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಇಂದಿನ ಸಭೆಯ ತೀರ್ಮಾನಗಳ ಪಾಲನೆಯಾಗುತ್ತಿರುವುದನ್ನು ಖಾತರಿಪಡಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
  5. ಕಳೆದ ಐದು ವರ್ಷಗಳಿಂದ ವಿದ್ಯುತ್‌ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯ ಹೆಚ್ಚಳ ಕೇವಲ 4000 ಮೆಗಾವ್ಯಾಟ್ ನಷ್ಟು ಮಾತ್ರ ಇದೆ. ರಾಜ್ಯದ ಒಟ್ಟಾರೆ ವಿದ್ಯುತ್‌ ಉತ್ಪಾದನಾ ಸಾಮರ್ಥ್ಯ 32,000 ಮೆಗಾವ್ಯಾಟ್‌ ಇದ್ದರೂ ಇದರಲ್ಲಿ 16 ಸಾವಿರ ಮೆಗಾವ್ಯಾಟ್‌ ಸೌರ ವಿದ್ಯುತ್‌ ಆಗಿದ್ದು, ಇದು ಹಗಲು ಹೊತ್ತಿನಲ್ಲಿ ಮಾತ್ರ ಉತ್ಪಾದನೆ ಆಗುವುದರಿಂದ ಬೇಡಿಕೆ ನಿರ್ವಹಣೆಯಲ್ಲಿ ವ್ಯತ್ಯಯವಾಗುತ್ತಿದೆ. ಜೊತೆಗೆ ಕಲ್ಲಿದ್ದಲಿನಲ್ಲಿ ಕೆಲವು ಸಮಸ್ಯೆಗಳಿದ್ದುದನ್ನು ನಿವಾರಿಸಲಾಗಿದ್ದು, ಇದೀಗ ಆಮದು ಕಲ್ಲಿದ್ದಲು ಖರೀದಿಗೆ ಟೆಂಡರ್‌ ಕರೆಯಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.
  6. IEX/ BILATERAL ನಲ್ಲಿ ವಿದ್ಯುತ್‌ ಪಡೆಯಲು ಕ್ರಮ ನವೆಂಬರ್‌ನಿಂದ ಉತ್ತರ ಪ್ರದೇಶದಿಂದ 300 ಮೆ.ವ್ಯಾ., ಪಂಜಾಬ್‌ ನಿಂದ 600 ಮೆ.ವ್ಯಾ. ವಿದ್ಯುತ್‌ ಪಡೆಯಲಾಗುವುದು. ಕೆ.ಇ.ಆರ್.ಸಿ.. ಅನುಮೋದನೆಯೊಂದಿಗೆ 1500 ಮೆಗಾವ್ಯಾಟ್‌ ಅಲ್ಪಾವಧಿ ವಿದ್ಯುತ್‌ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
  7. ರಾಜ್ಯದಲ್ಲಿನ ವಿದ್ಯುತ್‌ ಉತ್ಪಾದಕರಿಂದ ವಿದ್ಯುತ್‌ ಪಡೆಯಲು ರಾಷ್ಟ್ರೀಯ ವಿಪತ್ತಿನಡಿಯಲ್ಲಿ ವಿದ್ಯುತ್‌ ಕಾಯ್ದೆಯ ಸೆಕ್ಷನ್‌ 11ನ್ನು ಜಾರಿಗೊಳಿಸಲಾಗಿದೆ. ಆ ಮೂಲಕ ವಿದ್ಯುತ್‌ ಕೊರತೆಯನ್ನು ನಿವಾರಿಸಲಾಗುವುದು ಎಂದು ಅಧಿಕಾರಿಗಳು ವಿವರಿಸಿದರು.
  8. ದಕ್ಷಿಣದ ಎಲ್ಲ ರಾಜ್ಯಗಳಲ್ಲಿ ವಿದ್ಯುತ್‌ ಕೊರತೆ ತೀವ್ರವಾಗಿದೆ. ಪ್ರತಿ ವರ್ಷ ನೀವು contingency plan ಹೊಂದಿರಬೇಕು. ಯುದ್ಧ ಕಾಲೇ ಶಸ್ತ್ರಾಭ್ಯಾಸ ಎಂಬಂತೆ ಕಾರ್ಯಪ್ರವೃತ್ತರಾದರೆ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಎಚ್ಚರಿಸಿದರು.
  9. ಶೇ.13 ರಷ್ಟು ವಿದ್ಯುತ್‌ ವಿತರಣಾ ನಷ್ಟವಾಗುತ್ತಿದೆ. ವಿದ್ಯುತ್‌ ಕಳವು ಗೃಹ ಜ್ಯೋತಿಯಿಂದ ಕಡಿಮೆಯಾಗಿದೆ. ಕೈಗಾರಿಕಾ ವಿದ್ಯುತ್‌ ಕಳವು ಅತಿ ಕಡಿಮೆ ಎನ್ನುವುದು ಅಧಿಕಾರಿಗಳ ಅಭಿಪ್ರಾಯ.
  10. ಕಬ್ಬಿನ ಬೆಳೆಗೆ ನೀರು ಹಾಯಿಸಲು ಕೆಲವು ಜಿಲ್ಲೆಗಳಲ್ಲಿ ವಿದ್ಯುತ್‌ ಬೇಡಿಕೆ ಹೆಚ್ಚಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಕಬ್ಬಿನ ಕಟಾವು, ಅರೆಯುವಿಕೆ ಪ್ರಾರಂಭವಾದ ಕೂಡಲೇ ಬೇಡಿಕೆ ಇಳಿಕೆಯಾಗಲಿದ್ದು, ಕಬ್ಬು ಅರೆಯುವಿಕೆಯೊಂದಿಗೆ ಕೊ-ಜೆನರೇಶನ್‌ ನಿಂದ ವಿದ್ಯುತ್‌ ಲಭ್ಯವಾಗುತ್ತದೆ ಎಂದು ಸಭೆಗೆ ವಿವರಿಸಲಾಯಿತು.

About the Author

Vighnesh Pawar

Subscriber

View All Posts

Post navigation

Previous: Drought in Karnataka | ಹೆಚ್ಚುವರಿ 22 ತಾಲೂಕುಗಳು ಬರ ಘೋಷಣೆ; ಅಧಿಸೂಚನೆ ಹೊರಡಿಸಿದ ಸರ್ಕಾರ, ಸೋಮವಾರ ಕೇಂದ್ರಕ್ಕೆ ಮತ್ತೊಂದು ಮನವಿ ಸಲ್ಲಿಕೆ!
Next: Income Tax Raid in Bengaluru | ಐಟಿ ದಾಳಿಯಲ್ಲಿ ಮತ್ತೊಂದು ಗುತ್ತಿಗೆದಾರರ ಅಪಾರ್ಟ್‌ಮೆಂಟ್‌ನಲ್ಲಿ 40 ಕೋಟಿ ರೂ ವಶ; ಕಾಂಗ್ರೆಸ್ ಪಕ್ಷದ ಮಾಜಿ ಎಂಎಲ್‌ಸಿಗೆ ಸೇರಿದ್ದು ಎಂದು ಗುತ್ತಿಗೆದಾರರ ಹೇಳಿಕೆ

Related Stories

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

The Bengaluru Live November 23, 2026 5:28 PM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 24ರಂದು ವಿಲ್ಸನ್ ಗಾರ್ಡನ್, ಶಾಂತಿನಗರ, ರಿಚ್‌ಮಂಡ್ ಸರ್ಕಲ್ ಸುತ್ತಮುತ್ತ ವಿದ್ಯುತ್ ಕಡಿತ

The Bengaluru Live November 23, 2026 5:28 PM

Latest Post

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

November 23, 2026 7:26 PM
‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್ ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

November 23, 2026 7:14 PM
ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

November 23, 2026 5:59 PM
ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

November 23, 2026 5:37 PM
ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 23, 2026 5:34 PM
ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

November 23, 2026 5:28 PM

ನೀವು ತಪ್ಪಿಸಿಕೊಂಡಿರಬಹುದು

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

The Bengaluru Live November 23, 2026 7:14 PM
ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

The Bengaluru Live November 23, 2026 5:59 PM
ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

The Bengaluru Live November 23, 2026 5:37 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು
  • ‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್
  • ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ
  • ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ
©Copyright 2025 The Bengaluru Live All rights reserved. | MoreNews by AF themes.