ಬಾಳೆಹೊನ್ನೂರು (ಚಿಕ್ಕಮಗಳೂರು):
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ ಸಿ) ಅನುಮೋದಿಸಿರುವ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ರಂಭಾಪುರಿ ಪೀಠಕ್ಕೆ ಭಾನುವಾರ ಭೇಟಿ ನೀಡಿ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ವರ್ಷದ ನವೆಂಬರ್ ನಿಂದ ದರ ಏರಿಕೆ ಪ್ರಕ್ರಿಯೆ ಆರಂಭವಾಗಿದೆ. 2023ರ ಮಾರ್ಚ್ ನಲ್ಲಿಯೇ ದರ ಏರಿಕೆ ಆಗಬೇಕಿತ್ತು. ಆದರೆ, ಆಗ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಏರಿಕೆ ಆಗಿರಲಿಲ್ಲ. ಚುನಾವಣೆ ಮುಗಿದ ನಂತರ ಮೇ 12 ರಿಂದ ಅನ್ವಯವಾಗುವಂತೆ ವಿದ್ಯುತ್ ದರ ಏರಿಕೆ ಮಾಡಲಾಗಿದೆ ಎಂದರು.
Today I visited the holy Sringeri Mutt and sought blessings of His Holiness Jagadguru Sri Sri Vidushekhara Bharathiteertha Swamiji.
— KJ George (@thekjgeorge) June 18, 2023
ಇಂದು ನಾನು ಪೂಜ್ಯ ಶೃಂಗೇರಿ ಮಠಕ್ಕೆ ಭೇಟಿ ನೀಡಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದೆ. pic.twitter.com/xNk6pDeOxB
ಹಿಂದಿನ ಬಿಜೆಪಿ ಸರ್ಕಾರವೇ ವಿದ್ಯುತ್ ದರ ಏರಿಕೆ ಮಾಡಿದ್ದು, ಜುಲೈನಿಂದ ಯಾವುದೇ ದರ ಏರಿಕೆ ಆದರೂ ಅದನ್ನು ಸರ್ಕಾರವೇ ಭರಿಸಲಿದೆ. ಆದರೆ, ಹಿಂದಿನ ಬಾಕಿಯನ್ನು ಗ್ರಾಹಕರೇ ಭರಿಸಬೇಕು ಎಂದು ಅವರು ತಿಳಿಸಿದರು.
ಶಾಸಕ ಟಿ.ಡಿ.ರಾಜೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಅಂಶುಮಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಟರಾಜ್ ಗೇರ್ ಬೈಲ್, ಬಿ.ಸಿ.ಗೀತಾ, ಇಬ್ರಾಹಿಂ ಶಾಫಿ, ಮಹಮ್ಮದ್ ಹನೀಫ್, ಎಂ.ಎಸ್.ಅರುಣೇಶ್, ಎಚ್.ಎಂ.ಸತೀಶ್, ಮಹೇಶ್ ಆಚಾರ್, ಬಿ.ಕೆ.ಮದುಸೂಧನ್ ಇದ್ದರು.