
Electronic City: three boys drowned
ಬೆಂಗಳೂರು:
ಕೆರೆಯಲ್ಲಿ ಈಜಲು ಹೋಗಿದ್ದ ಹತ್ತನೇ ತರಗತಿಯ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯ 2ನೇ ಹಂತದ ನೀಲಾದ್ರಿ ಬಳಿ ನಡೆದಿದೆ.
ಮೃತ ಬಾಲಕರನ್ನು 13 ವರ್ಷದ ಕಿರಣ್, 13 ವರ್ಷದ ತೀರ್ಥ ಮತ್ತು 14 ವರ್ಷದ ಫೈಜಲ್ ಎಂದು ಗುರುತಿಸಲಾಗಿದೆ.
ಮಂಗಳವಾರ ಸಂಜೆ ಆಟ ಆಡಲು ಹೊರ ಹೋಗಿದ್ದ ತೀರ್ಥ, ಫೈಜಲ್ ರಾತ್ರಿ ಆದರೂ ಬಾರದ ಹಿನ್ನೆಲೆ ಕುಟುಂಬಸ್ಥರು ಹುಡುಕಾಡಿದ್ದಾರೆ. ಆವಾಗ ಕೆರೆ ಬಳಿ ಬಾಲಕರ ಸೈಕಲ್, ಬಟ್ಟೆ ಮತ್ತು ಚಪ್ಪಲಿ ಪತ್ತೆಯಾಗಿವೆ.
ಈಜು ಬಾರದಿದ್ದರು ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿದ್ದಾಗ ಅವಘಡ ಸಂಭವಿಸಿದೆ. ನಿನ್ನೆಯಿಂದ ಬಾಲಕರ ಮೃತದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ನಡೆಸಿದ್ದು, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.