ಬೆಂಗಳೂರು:
ಅಮೆರಿಕದಲ್ಲಿ ನೆಲೆಸಿದ್ದ ಕರ್ನಾಟಕ ಮೂಲದ ಖ್ಯಾತ ಗಣಿತ ಮತ್ತು ಸಂಖ್ಯಾಶಾಸ್ತ್ರಜ್ಞ ಸಿ.ಆರ್ ರಾವ್ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದು, ಅವರಿಗೆ 102 ವರ್ಷ ವಯಸ್ಸಾಗಿತ್ತು.
ಸಿಆರ್ ರಾವ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಗದ್ವಿಖ್ಯಾತ ಗಣಿತ ಶಾಸ್ತ್ರಜ್ಞರು, ಕರ್ನಾಟಕ ಮೂಲದ ಸಂಖ್ಯಾಶಾಸ್ತ್ರ ಪರಿಣಿತರು ಆದ ಸಿ.ಆರ್ ರಾವ್ ಅವರ ನಿಧನದ ಸುದ್ದಿ ಕೇಳಿ ನೋವಾಯಿತು.
ಜಗದ್ವಿಖ್ಯಾತ ಗಣಿತ ಶಾಸ್ತ್ರಜ್ಞರು, ಕರ್ನಾಟಕ ಮೂಲದ ಸಂಖ್ಯಾಶಾಸ್ತ್ರ ಪರಿಣಿತರು ಆದ ಸಿ.ಆರ್ ರಾವ್ ಅವರ ನಿಧನದ ಸುದ್ದಿ ಕೇಳಿ ನೋವಾಯಿತು.
— CM of Karnataka (@CMofKarnataka) August 23, 2023
ಗಣಿತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ದೇಶದ ಅತ್ಯುನ್ನತ ಪ್ರಶಸ್ತಿ 'ಪದ್ಮವಿಭೂಷಣ' ಮಾತ್ರವಲ್ಲದೆ, 'ಇಂಟರ್ ನ್ಯಾಷನಲ್ ಪ್ರೈಸ್ ಆಫ್ ಸ್ಟ್ಯಾಟಿಸ್ಟಿಕ್ಸ್ – 2023', 'ನ್ಯಾಷನಲ್ ಮೆಡಲ್… pic.twitter.com/dda937w5Gz
ಜಗದ್ವಿಖ್ಯಾತ ಗಣಿತ ಶಾಸ್ತ್ರಜ್ಞರು, ಕರ್ನಾಟಕ ಮೂಲದ ಸಂಖ್ಯಾಶಾಸ್ತ್ರ ಪರಿಣಿತರು ಆದ ಸಿ.ಆರ್ ರಾವ್ ಅವರ ನಿಧನದ ಸುದ್ದಿ ಕೇಳಿ ನೋವಾಯಿತು.
ಗಣಿತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ದೇಶದ ಅತ್ಯುನ್ನತ ಪ್ರಶಸ್ತಿ ‘ಪದ್ಮವಿಭೂಷಣ’ ಮಾತ್ರವಲ್ಲದೆ, ‘ಇಂಟರ್ ನ್ಯಾಷನಲ್ ಪ್ರೈಸ್ ಆಫ್ ಸ್ಟ್ಯಾಟಿಸ್ಟಿಕ್ಸ್ – 2023’, ‘ನ್ಯಾಷನಲ್ ಮೆಡಲ್ ಆಫ್ ಸೈನ್ಸ್’ ಇನ್ನು ಮುಂತಾದ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಭಾರತದ ಕೀರ್ತಿ ಹೆಚ್ಚಿಸಿದ್ದರು. ಇಂತಹ ಮೇರು ಸಾಧಕರ ನಿಧನ ನಾಡಿಗೆ ತುಂಬಿಬಾರದ ನಷ್ಟ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬವರ್ಗಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.