
ಬೆಂಗಳೂರು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ “ವಿಶ್ವ ಪರಿಸರ ದಿನ” ಕಾರ್ಯಕ್ರಮವನ್ನು ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವರು ಡಿ.ಕೆ. ಶಿವಕುಮಾರ್ ರವರು ಚಾಲನೆ ನೀಡಿದರು.
ಶಿವಕುಮಾರ್ ರವರು ರಾಚೇನಹಳ್ಳಿ ಕೆರೆ ಆವರಣದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಚಾಲನೆ ನೀಡಿದರು.
ಇಂದು ಒಂದು ಒಳ್ಳೆಯ ಕೆಲಸದ ಮೂಲಕ ದಿನವನ್ನು ಆರಂಭಿಸಿದೆ. ಬ್ಯಾಟರಾಯನಪುರ ಬಳಿಯ ರಾಚೇನಹಳ್ಳಿಯಲ್ಲಿ ಇಂದು ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಿಡ ನೆಡುವ ಮೂಲಕ ಚಾಲನೆ ನೀಡಿದೆ. pic.twitter.com/rgsRrM0mRL
— DK Shivakumar (@DKShivakumar) June 5, 2023
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದಾದ್ಯಂತ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಪರಿಸರ ಉಳಿಸುವ ಕೆಲಸ ಮಾಡುವ ಬಗ್ಗೆ ಜಾಗೃತಿ ಮೂಡಿಸಲಾಯಿತು.
ವಿಶ್ವ ಪರಿಸರ ದಿನದ ಅಂಗವಾಗಿ ಪಾಲಿಕೆ ಶಾಲಾ ವಿದ್ಯಾರ್ಥಿಗಳಿಂದ ರಾಚೇನಹಳ್ಳಿ ಕೆರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಲ್ನಡಿಗೆ ಹಾಗೂ ಸೈಕಲ್ ಜಾಥ ಮೂಲಕ ನಾಗರಿಕರಲ್ಲಿ ಪರಿಸರ ಜಾಗೃತಿ ಮೂಡಿಸಲಾಯಿತು.
ಬಿಬಿಎಂಪಿ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಬ್ಯಾಟರಾಯನಪುರದ ರಾಚೇನಹಳ್ಳಿ ಕೆರೆ ಆವರಣದಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ @DKShivakumar & ಮಾನ್ಯ ಕಂದಾಯ ಸಚಿವರಾದ ಶ್ರೀ @krishnabgowda ಅವರು ಉದ್ಘಾಟಿಸಿದರು.#BBMPCares #WorldEnvironmentDay @CMofKarnataka @siddaramaiah @BBMPAdmn @KarnatakaVarthe pic.twitter.com/z3phvYlbAv
— Tushar Giri Nath IAS (@BBMPCOMM) June 5, 2023
ಈ ವೇಳೆ ಕಂದಾಯ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಕೃಷ್ಣ ಭೈರೇಗೌಡ, ಶಾಸಕರಾದ ಎ.ಸಿ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ನಾಗರಾಜ್, ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ವಿಶೇಷ ಆಯುಕ್ತರಾದ ಜಯರಾಮ್ ರಾಯಪುರ, ಡಾ. ಹರೀಶ್ ಕುಮಾರ್, ಡಾ. ದೀಪಕ್, ರೆಡ್ಡಿ ಶಂಕರ ಬಾಬು, ಪಿ.ಎನ್.ರವೀಂದ್ರ, ಪ್ರೀತಿ ಗೆಹ್ಲೋಟ್, ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಸರೀನಾ ಸಿಕ್ಕಲಿಗರ್, ವಲಯ ಜಂಟಿ ಆಯುಕ್ತರಾದ ಪೂರ್ಣಿಮಾ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.