ಚಿಕ್ಕಬಳ್ಳಾಪುರ:
ಇಲ್ಲಿನ ಕಾಲೇಜು ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಪೋಷಕರು ಪೊಲೀಸ್ ದೂರು ದಾಖಲಿಸಿದ್ದಾರೆ.
ಚಿಕ್ಕಬಳ್ಳಾಪುರದ ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಪ್ರೀತಿ (21) ಮೃತ ದುರ್ದೈವಿ. ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಲ್ಲೂರು ಗ್ರಾಮದ ಪ್ರೀತಿ, ಕಾಲೇಜಿನ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಪ್ರೀತಿ ಸೋಮವಾರ ಮಧ್ಯಾಹ್ನ ತನ್ನ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ವಿಜಯಪುರ ಪೊಲೀಸರು ತನಿಖೆ ಆರಂಭಿಸಿದ್ದು, ಎಲ್ಲ ಆಯಾಮಗಳಲ್ಲೂ ಪರಿಶೀಲನೆ ನಡೆಸಿದ್ದಾರೆ.