Home ರಾಜಕೀಯ Nikhil Kumaraswamy | ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ; ಇದು ಏಳೂವರೆ ಕೋಟಿ ಕನ್ನಡಿಗರ...

Nikhil Kumaraswamy | ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ; ಇದು ಏಳೂವರೆ ಕೋಟಿ ಕನ್ನಡಿಗರ ದನಿ ಎಂದ ನಿಖಿಲ್ ಕುಮಾರಸ್ವಾಮಿ

69
0
Enough is enough Congress government; this is the voice of seven and a half crore Kannadigas, says Nikhil Kumaraswamy

ಬೆಂಗಳೂರಿನಲ್ಲಿ ನಾಳೆ ಜೆಡಿಎಸ್ ನಿಂದಾ ಬೃಹತ್ ಪ್ರತಿಭಟನೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಶಾಸಕರು, ಎಂಎಲ್ಸಿಗಳು, ನಾಯಕರು ಭಾಗಿ, ಫ್ರೀಡಂ ಪಾರ್ಕ್ ನಿಂದ ದಳಪತಿಗಳ ವಿಧಾನಸೌಧ ಚಲೋ

ಬೆಂಗಳೂರು: ಸಾಕಪ್ಪ ಸಾಕು ಕಾಂಗ್ರೆಸ್ ಸಾಕು ಅಭಿಯಾನ ನಮ್ಮ ಸ್ಲೋಗನ್ ಅಲ್ಲ, ನಾಡಿನ ಎಳೂವರೆ ಕೋಟಿ ಜನರ ದನಿ. ಸಾಮಾನ್ಯ ಕನ್ನಡಿಗನ ಕಣ್ಣೀರ ಕೂಗು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಸರ್ಕಾರದ ದುರಾಡಳಿತ, ಭ್ರಷ್ಟಾಚಾರದ ಜತೆಗೆ ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಸಂಪತ್ತನ್ನ ಲೂಟಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ರಾಜ್ಯ ಸರ್ಕಾರದ ದುರಾಡಳಿತ, ಬೆಲೆ ಏರಿಕೆ ವಿರೋಧಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಇದು ರಾಜ್ಯದ ಜನರ ಮನೆ ಮನೆಯ ಮಾತು. ಜನರ ಭಾವನೆಗಳಿಗೆ ಸ್ಪಂದಿಸುವ ಕೆಲಸವನ್ನು ನಮ್ಮ ಪಕ್ಷ ಮಾಡುತ್ತಿದೆ ಎಂದು ಅವರು ತಿಳಿಸಿದರು.

ನಾವು ನಮ್ಮ ಜವಾಬ್ದಾರಿ ಕರ್ತವ್ಯ ಅರಿತು ಈ ಪ್ರತಿಭಟನೆ ಮಾಡುತ್ತಿದ್ದೇವೆ. ಕೇಂದ್ರ ಸಚಿವರಾದ ಕುಮಾರಸ್ವಾಮಿ ನೇತೃತ್ವದಲ್ಲಿ ಈ ಬೃಹತ್ ಹೋರಾಟ ಮಾಡುತ್ತಿದ್ದೇವೆ. ಆಡಳಿತ ವೈಫಲ್ಯ, ಭ್ರಷ್ಟಾಚಾರ ಮಾತ್ರವಲ್ಲ ಅನೇಕ ವಿಚಾರಗಳ ಬಗ್ಗೆ ನಮ್ಮ ಹೋರಾಟ ನಡೆಸಳಿದ್ದೇವೆ. ಇದು ಒಂದು ದಿನದ ಅಭಿಯಾನ ಅಲ್ಲ ಸರ್ಕಾರ ಇರೋ ತನಕ ನಮ್ಮ ಹೋರಾಟ ನಿರಂತರ ವಾಗಿರುತ್ತೆ ಎಂದರು ಅವರು.

ದುರಾಡಳಿತಕ್ಕೆ ದಿಟ್ಟ ಉತ್ತರ ಕೊಡಬೇಕು ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾಕಪ್ಪ ಸಾಕು ಈ ಕಾಂಗ್ರೆಸ್ ಸರ್ಕಾರ ಅನ್ನೋ ಭಾವನೆ ಜನರ ಮನಸಿನಲ್ಲಿ ಬಂದಿದೆ. ಜನ ವಿರೋಧಿ ಸರ್ಕಾರ ಜನರನ್ನು ಕಿತ್ತು ತಿನ್ನುತ್ತಿದೆ. ಕಾಂಗ್ರೆಸ್ಸಿನ ದುರಾಡಳಿತಕ್ಕೆ ದಿಟ್ಟ ಉತ್ತರ ನೀಡಬೇಕಿದೆ. ಈ ಹೊರಟ್ಟಕ್ಕೆ ನಮ್ಮ ಜತೆ ಕೈ ಜೋಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಅಭಿಯಾನವನ್ನು ಯಶಸ್ವಿಗೊಳಿಸೋಣ ಎಂದು ನಿಖಿಲ್ ಅವರು ಮನವಿ ಮಾಡಿದರು.

ಕಮಿಷನ್ ಅನ್ನೋದಕ್ಕೆ ಲಿಮಿಟೆಷನ್ ಇಲ್ಲ ಕಳೆದ ಚುನಾವಣೆಯಲ್ಲಿ ಇದೇ ಕಾಂಗ್ರೆಸ್ಸಿಗರು ಅಂದು ಇದ್ದಂತ ಸರ್ಕಾರದ ವಿರುದ್ಧ ಪೇ ಸಿಎಂ ಅಭಿಯಾನ ಮಾಡಿದ್ದರು. 40% ಕಮಿಷನ್ ಆರೋಪ ಮಾಡಿದ್ದರು. ನಮಗೊಂದು ಅವಕಾಶ ಕೊಡಿ ನಾವು ಸಂಪೂರ್ಣವಾಗಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುತ್ತೇವೆ ಎಂದು ಎಂದು ಹೇಳಿದ್ದರು. ಅಂತ ಹೇಈಗ ಭ್ರಷ್ಟಾಚಾರ ಅನ್ನುವುದು ಯಾವ ಹಂತಕ್ಕೆ ತಲುಪಿದೆ ಎಂದರೆ ಪರ್ಸೆಂಟೇಜ್ ಅನ್ನುವುದಕ್ಕೆ ಲಿಮಿಟೆಷನ್ ಇಲ್ಲ, ಲಿಮಿಟೆಷನ್ ಮೀರಿ ಹೋಗಿದೆ ಎಂದು ಅವರು ಆರೋಪಿಸಿದರು.

ರಾಯರೆಡ್ಡಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಬಸವರಾಜ ರಾಯರೆಡ್ಡಿ ಅವರು ಸರ್ಕಾರದ ಭ್ರಷ್ಟಾಚಾರದ ವಿಚಾರವಾಗಿ ಮಾತನಾಡಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಭ್ರಷ್ಟಾಚಾರ ಅನೇಕ ಸರ್ಕಾರಗಳಲ್ಲಿ ಇದೆ, ಇಲ್ಲ ಅಂತ ಹೇಳೋದಿಲ್ಲ. ಆದರೆ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಅಂತ ರಾಯರೆಡ್ಡಿ ಅವರೇ ತಿಳಿಸಿದ್ದಾರೆ. ಅವರು ಹೇಳಿರುವುದನ್ನು ಗೌರವಿಸುತ್ತೇವೆ. ಆ ವ್ಯವಸ್ಥೆಯಿಂದ ಹೊರಬರುವುದಕ್ಕೆ ಈ ಹೋರಾಟ ಮಾಡುತ್ತಿದ್ದೇವೆ. ಬಿಜೆಪಿ ಜೆಡಿಎಸ್ ಸರ್ಕಾರದ ವಿಚಾರವಾಗಿ ಅವರು ಮಾತನಾಡಿರುವುದು ಕೇವಲ ರಾಜಕೀಯ ಅಷ್ಟೇ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here