Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ಜುಲೈ 7ರೊಳಗೆ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೀಕರಣ ಮುಗಿಸಲು ಆದ್ಯತೆ‌: ಡಿಸಿಎಂ
  • ಶಿಕ್ಷಣ
  • ಕರ್ನಾಟಕ
  • ಬೆಂಗಳೂರು ನಗರ

ಜುಲೈ 7ರೊಳಗೆ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೀಕರಣ ಮುಗಿಸಲು ಆದ್ಯತೆ‌: ಡಿಸಿಎಂ

The Bengaluru Live July 1, 2021 6:45 PM 1 minute read
ಜುಲೈ 7ರೊಳಗೆ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೀಕರಣ ಮುಗಿಸಲು ಆದ್ಯತೆ‌: ಡಿಸಿಎಂ

ಜುಲೈ 7ರೊಳಗೆ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೀಕರಣ ಮುಗಿಸಲು ಆದ್ಯತೆ‌: ಡಿಸಿಎಂ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಲಸಿಕೀಕರಣ ಮುಗಿಯುತ್ತಿದ್ದಂತೆ ಕಾಲೇಜು ಆರಂಭ ಕುರಿತು‌ ನಿರ್ಧಾರ

ವಿವಿ ಕುಲಪತಿಗಳ ಜತೆ ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸಮಾಲೋಚನೆ

ಬೆಂಗಳೂರು:

ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಿಬ್ಬಂದಿಯ ಲಸಿಕೀಕರಣ ಕಾರ್ಯಕ್ರಮವನ್ನು ಚುರುಕುಗೊಳಿಸಬೇಕು. ಸಾಧ್ಯವಾದಷ್ಟು ಇದೇ 7ರೊಳಗೆ ಮುಗಿಸಲು ಆದ್ಯತೆ‌ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಎಲ್ಲ ವಿವಿಗಳ ಕುಲಪತಿಗಳಿಗೆ ನಿರ್ದೇಶನ ನೀಡಿದರು.

ಕೋವಿಡ್ ‌ಲಸಿಕೆಯನ್ನು‌ ಹೆಚ್ಚು ತ್ವರಿತವಾಗಿ‌ ಕೊಡಿಸುವ ಸಂಬಂಧ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಜತೆ ಗುರುವಾರ ವಿಡಿಯೊ ಸಂವಾದ ನಡೆಸಿದ ನಂತರ ಅವರು‌ ಸುದ್ದಿಗಾರರ ಜತೆ ಮಾತನಾಡಿದರು.

ರಾಜ್ಯದಲ್ಲಿ ಇನ್ನೆರಡು ತಿಂಗಳ ಒಳಗಾಗಿ ಒಟ್ಟು ಜನಸಂಖ್ಯೆಯಲ್ಲಿ ಶೇ.50ರಷ್ಟು ಜನರಿಗೆ ಲಸಿಕೆ ಲಭ್ಯವಾಗಲಿದೆ. ಈ ನಿಟ್ಟಿನಲ್ಲಿ ಭೌತಿಕ ತರಗತಿಗಳು ಆರಂಭಕ್ಕೆ ಮುನ್ನವೇ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ನೀಡಬೇಕು ಹಾಗೂ ನಿತ್ಯವೂ ಪೂರೈಕೆಯಾಗುವ  ಲಸಿಕೆಯನ್ನು ಸಂಬಂಧಿಸಿದ ಅಧಿಕಾರಿಗಳ ಜತೆ ಸಮನ್ವಯ ಸಾಧಿಸಿಕೊಂಡು ಪಡೆದುಕೊಳ್ಳಬೇಕು ಎಂದರು.

ಯಾವುದೇ ಕಾರಣಕ್ಕೂ ಶೈಕ್ಷಣಿಕ ಚಟುವಟಿಕೆ ನಿಲ್ಲಬಾರದು, ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆ ಆಗಬಾರದು. ಈ ಹಿನ್ನೆಲೆಯಲ್ಲಿ ಲಸಿಕೆಯೇ ಪರಿಹಾರ. ಇದನ್ನು ಎಲ್ಲ ಕುಲಪತಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಡಿಸಿಎಂ ಹೇಳಿದರು.

ಎಲ್ಲ ವಿವಿಗಳಲ್ಲಿ ಲಸಿಕೀಕರಣ ಮುಗಿದ ನಂತರ ನೇರ ತರಗತಿಗಳನ್ನು ಆರಂಭ ಮಾಡುವ ಕುರಿತು ನಿರ್ದರಿಸಲಾಗುವುದು., ಈಗ ನಡೆಯುತ್ತಿರುವ ಆನ್‌ಲೈನ್‌ ತರಗತಿಗಳು ಅಬಾಧಿತ ಎಂದರು.

ಪದವಿ ವಿದ್ಯಾರ್ಥಿಗಳಿಗೆ ಹೆಲ್ಪ್‌ಲೈನ್‌

ವಿದ್ಯಾರ್ಥಿಗಳಿಗೆ ಈಗಾಗಲೇ ಡಿಜಿಟಲ್‌ ವೇದಿಕೆಗಳ ಮೂಲಕ ಎಲ್ಲ ಮಾಹಿತಿ ಸಿಗುತ್ತಿದ್ದಾಗ್ಯೂ ಅವರ ಮತ್ತಷ್ಟು ಅನುಕೂಲಕ್ಕಾಗಿ ಹೆಲ್ಪ್‌ಲೈನ್‌ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಈ ಸಂದರ್ಭದಲ್ಲಿ ಡಿಸಿಎಂ ಹೇಳಿದರು.

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ದೃಷ್ಟಿಯಿಂದ ಅವರ ಸಮಸ್ಯೆ ಆಲಿಸಿ ಪರಿಹಾರ ಕಲ್ಪಿಸುವ ನಿಟ್ಟನಲ್ಲಿ ಹೆಲ್ಪ್‌ಲೈನ್‌ ಆರಂಭಿಸಲಾಗುತ್ತಿದೆ.

ವಿಶ್ವವಿದ್ಯಾಲಯ ಮಟ್ಟದಲ್ಲೂ ಹೆಲ್ಪ್‌ಲೈನ್‌ ತೆರೆಯುವಂತೆ ಸೂಚಿಸಿದ್ದೇನೆ.#NEP2020 ಯನ್ನು ತ್ವರಿತವಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಪ್ರಯತ್ನ ನಡೆಸುತ್ತಿದೆ.

2/2

— Dr. Ashwathnarayan C. N. (@drashwathcn) July 1, 2021

ಹೆಲ್ಪ್‌ಲೈನ್‌ ವ್ಯವಸ್ಥೆಯನ್ನು ಆಯಾ ವಿವಿ ವ್ಯಾಪ್ತಿಯಲ್ಲಿ ಮಾಡಿಕೊಳ್ಳಬೇಕು. ಅದಕ್ಕೆ ಬೇಕಾದ ಸಂಪೂರ್ಣ ಸಹಕಾರವನ್ನು ಸರಕಾರ ನೀಡುತ್ತದೆ. ಕಾಲ್‌ ಸೆಂಟರ್‌ ಮಾಡುವುದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಸಹಾಯ ಆಗಲಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆಗುತ್ತಿರುವ ಹಿನ್ನೆಲೆಯಲ್ಲಿ ಇದೊಂದು ಅತ್ಯುತ್ತಮ ಉಪಕ್ರಮ ಆಗಲಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಡಾ.ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲಕೃಷ್ಣ ಜೋಶಿ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕುಲಪತಿ ಪ್ರೊ.ಕರಿಸಿದ್ದಪ್ಪ ಸೇರಿದಂತೆ ಮೈಸೂರು, ಮಂಗಳೂರು, ಬೆಳಗಾವಿ, ಶಿವಮೊಗ್ಗ ಮುಂತಾದ ವಿವಿಗಳ ಕುಲಪತಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಮಡಿಕೇರಿ ಜಿಲ್ಲೆಯ ಕ್ರೀಡಾಂಗಣ ಹಾಗೂ ಕ್ರೀಡಾ ಶಾಲೆ ಅಭಿವೃದ್ಧಿಗೆ ಅನುದಾನ- ಸಚಿವ ಡಾ.ನಾರಾಯಣಗೌಡ
Next: ಲಿಥಿಯನ್‌ -ಅಯಾನ್‌ ಸೆಲ್‌ ಉತ್ಪಾದನಾ ಕ್ಷೇತ್ರದ ಪ್ರಮುಖ ಕಂಪನಿ ಸಿ4ವಿ ಯಿಂದ ರಾಜ್ಯದಲ್ಲಿ 4 ಸಾವಿರ ಕೋಟಿಗಳ ಹೂಡಿಕೆಗೆ ಒಪ್ಪಂದ

Related Stories

ಇ-ಖಾತಾ ಮೇಳದ ವೇಳೆ ಜೆ.ಪಿ. ನಗರದ ಕಚೇರಿಯಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿರುವ ಲ್ಯಾಪ್‌ಟಾಪ್ ಪರದೆಯನ್ನು ಮೂವರು ಅಧಿಕಾರಿಗಳು ನೋಡುತ್ತಿರುವುದು
  • ಬೆಂಗಳೂರು ನಗರ
  • ಬೆಂಗಳೂರು

ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ

The Bengaluru Live November 8, 2026 5:49 PM
ಮಳೆ ಸುರಿಯುತ್ತಿರುವ ರಸ್ತೆಯಲ್ಲಿ ವಾಹನಗಳ ಪಕ್ಕದಲ್ಲಿ ಕೊಡೆ ಹಿಡಿದು ಸಾಗುತ್ತಿರುವ ವ್ಯಕ್ತಿ
  • ಕರ್ನಾಟಕ
  • ಬೆಂಗಳೂರು

ಬೆಂಗಳೂರು ಹವಾಮಾನ: ಇಂದು ಹಗುರ ಮಳೆ ಸಾಧ್ಯತೆ, ಸೋಮವಾರ-ಮಂಗಳವಾರ ಒಣ ಹವೆ; ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ

The Bengaluru Live November 8, 2026 2:38 PM
ಅರ್ಚಕರು ಆರತಿ ಬೆಳಗುತ್ತಿರುವಾಗ ಹಾಸನಾಂಬೆ ದೇವರ ಮುಂದೆ ಕೈಮುಗಿದು ನಿಂತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಪತ್ನಿ ಉಷಾ
  • ಕರ್ನಾಟಕ
  • ರಾಜಕೀಯ

ಪೆಟ್ರೋಲ್‌ನಲ್ಲಿ ಎಥೆನಾಲ್: ಹೊಣೆಯಿಂದ ನುಣುಚಿಕೊಳ್ಳಲು ಕೇಂದ್ರಕ್ಕೆ ಸಾಧ್ಯವಿಲ್ಲ ಎಂದ ಸಿಎಂ ಶಿವಕುಮಾರ್; ರಾಜ್ಯದ 67 ಕಡೆ ಮಾದರಿ ಪರೀಕ್ಷೆ

The Bengaluru Live November 8, 2026 1:59 PM

Latest Post

ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು: ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ; ಪ್ರಿಯಾಂಕ್ ಖರ್ಗೆ ಮೇಲೆ ಎಫ್‌ಐಆರ್‌ಗೆ ಮುನಿಸ್ವಾಮಿ ಆಗ್ರಹ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಮೆಯ ಮುಂದೆ ಕೇಸರಿ ಶಲ್ಯ ಧರಿಸಿ ಫಲಕಗಳೊಂದಿಗೆ ಘೋಷಣೆ ಕೂಗುತ್ತಿರುವ ಬಿಜೆಪಿ ಕಾರ್ಯಕರ್ತರು
  • ರಾಜಕೀಯ
  • ಬೆಂಗಳೂರು

ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು: ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ; ಪ್ರಿಯಾಂಕ್ ಖರ್ಗೆ ಮೇಲೆ ಎಫ್‌ಐಆರ್‌ಗೆ ಮುನಿಸ್ವಾಮಿ ಆಗ್ರಹ

November 8, 2026 11:20 PM
ಸುಳ್ಳಿಗೆ ಹಾಸನಾಂಬೆ ತಕ್ಕ ಉತ್ತರ ನೀಡುತ್ತಾಳೆ: ಸಿಎಂ ಡಿ.ಕೆ. ಶಿವಕುಮಾರ್; ಹಾಸನದ ಏಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲಕ್ಕೆ ಮನವಿ ಹಾಸನದ ಹಾಸನಾಂಬೆ ದೇವಾಲಯದಲ್ಲಿ ಪತ್ನಿ ಉಷಾ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ರಾಜಕೀಯ

ಸುಳ್ಳಿಗೆ ಹಾಸನಾಂಬೆ ತಕ್ಕ ಉತ್ತರ ನೀಡುತ್ತಾಳೆ: ಸಿಎಂ ಡಿ.ಕೆ. ಶಿವಕುಮಾರ್; ಹಾಸನದ ಏಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲಕ್ಕೆ ಮನವಿ

November 8, 2026 11:10 PM
ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್ ಎತ್ತರದ ಚಾವಣಿ ಮತ್ತು ನುಣುಪಾದ ನೆಲವಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ವಿಶಾಲ ಒಳಾಂಗಣ
  • ರಾಜಕೀಯ
  • ಬೆಂಗಳೂರು

ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್

November 8, 2026 7:38 PM
ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ ಕೇಸರಿ ಬಿಜೆಪಿ ಶಾಲು ಹಾಕಿಕೊಂಡು ಕೆನೆ ಬಣ್ಣದ ತೋಳುಕುರ್ಚಿಯಲ್ಲಿ ಕುಳಿತು ಪತ್ರಗಳನ್ನು ಹಿಡಿದು ಕೈಸನ್ನೆ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
  • ರಾಜಕೀಯ
  • ಬೆಂಗಳೂರು

ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

November 8, 2026 6:20 PM
ಕುಮಾರಸ್ವಾಮಿ ಲಂಚ ಆರೋಪ ಸುಳ್ಳು ಎಂದ ಹಾಸನ ಡಿಸಿ ಲತಾಕುಮಾರಿ; ವಾಟ್ಸಾಪ್ ಚಾಟ್ ಕುರಿತು ತನಿಖೆಗೆ ಆಗ್ರಹ ಹಾಸನ ಫಲಕದ ಮುಂದೆ ಗುಲಾಬಿ ಮತ್ತು ಹಳದಿ ಚೌಕಳಿ ಸೀರೆಯಲ್ಲಿ ಕೈಗಳನ್ನು ಜೋಡಿಸಿ ಮಾತನಾಡುತ್ತಿರುವ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ
  • ರಾಜಕೀಯ
  • ಬೆಂಗಳೂರು

ಕುಮಾರಸ್ವಾಮಿ ಲಂಚ ಆರೋಪ ಸುಳ್ಳು ಎಂದ ಹಾಸನ ಡಿಸಿ ಲತಾಕುಮಾರಿ; ವಾಟ್ಸಾಪ್ ಚಾಟ್ ಕುರಿತು ತನಿಖೆಗೆ ಆಗ್ರಹ

November 8, 2026 6:11 PM
ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ ಇ-ಖಾತಾ ಮೇಳದ ವೇಳೆ ಜೆ.ಪಿ. ನಗರದ ಕಚೇರಿಯಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿರುವ ಲ್ಯಾಪ್‌ಟಾಪ್ ಪರದೆಯನ್ನು ಮೂವರು ಅಧಿಕಾರಿಗಳು ನೋಡುತ್ತಿರುವುದು
  • ಬೆಂಗಳೂರು ನಗರ
  • ಬೆಂಗಳೂರು

ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ

November 8, 2026 5:49 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಮೆಯ ಮುಂದೆ ಕೇಸರಿ ಶಲ್ಯ ಧರಿಸಿ ಫಲಕಗಳೊಂದಿಗೆ ಘೋಷಣೆ ಕೂಗುತ್ತಿರುವ ಬಿಜೆಪಿ ಕಾರ್ಯಕರ್ತರು
  • ರಾಜಕೀಯ
  • ಬೆಂಗಳೂರು

ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು: ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ; ಪ್ರಿಯಾಂಕ್ ಖರ್ಗೆ ಮೇಲೆ ಎಫ್‌ಐಆರ್‌ಗೆ ಮುನಿಸ್ವಾಮಿ ಆಗ್ರಹ

The Bengaluru Live November 8, 2026 11:20 PM
ಹಾಸನದ ಹಾಸನಾಂಬೆ ದೇವಾಲಯದಲ್ಲಿ ಪತ್ನಿ ಉಷಾ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ರಾಜಕೀಯ

ಸುಳ್ಳಿಗೆ ಹಾಸನಾಂಬೆ ತಕ್ಕ ಉತ್ತರ ನೀಡುತ್ತಾಳೆ: ಸಿಎಂ ಡಿ.ಕೆ. ಶಿವಕುಮಾರ್; ಹಾಸನದ ಏಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲಕ್ಕೆ ಮನವಿ

The Bengaluru Live November 8, 2026 11:10 PM
ಎತ್ತರದ ಚಾವಣಿ ಮತ್ತು ನುಣುಪಾದ ನೆಲವಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ವಿಶಾಲ ಒಳಾಂಗಣ
  • ರಾಜಕೀಯ
  • ಬೆಂಗಳೂರು

ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್

The Bengaluru Live November 8, 2026 7:38 PM
ಕೇಸರಿ ಬಿಜೆಪಿ ಶಾಲು ಹಾಕಿಕೊಂಡು ಕೆನೆ ಬಣ್ಣದ ತೋಳುಕುರ್ಚಿಯಲ್ಲಿ ಕುಳಿತು ಪತ್ರಗಳನ್ನು ಹಿಡಿದು ಕೈಸನ್ನೆ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
  • ರಾಜಕೀಯ
  • ಬೆಂಗಳೂರು

ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

The Bengaluru Live November 8, 2026 6:20 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು: ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ; ಪ್ರಿಯಾಂಕ್ ಖರ್ಗೆ ಮೇಲೆ ಎಫ್‌ಐಆರ್‌ಗೆ ಮುನಿಸ್ವಾಮಿ ಆಗ್ರಹ
  • ಸುಳ್ಳಿಗೆ ಹಾಸನಾಂಬೆ ತಕ್ಕ ಉತ್ತರ ನೀಡುತ್ತಾಳೆ: ಸಿಎಂ ಡಿ.ಕೆ. ಶಿವಕುಮಾರ್; ಹಾಸನದ ಏಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲಕ್ಕೆ ಮನವಿ
  • ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್
  • ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ
©Copyright 2025 The Bengaluru Live All rights reserved. | MoreNews by AF themes.