ನವದೆಹಲಿ:
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹಿರಿಯರು. ಏನೇ ಮನಸ್ತಾಪವಿದ್ದರೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆ ಚರ್ಚಿಸಿ ಭಗೆಹರಿಸಿಕೊಳ್ಳಬೇಕಿತ್ತು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಮ್ಮ ಇಲಾಖೆಯಲ್ಲಿ ಅನ್ಯರ ಹಸ್ತಕ್ಷೇಪ ಆಗುತ್ತಿರುವ ಬಗ್ಗೆ ಖುದ್ದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧವೇ ರಾಜ್ಯಪಾಲರಿಗೆ ಪತ್ರ ಬರೆದು ದೂರು ನೀಡಿದ್ದರು. ಹೀಗೆ ಯಡಿಯೂರಪ್ಪ ವಿರುದ್ಧ ಕೆ.ಎಸ್. ಈಶ್ವರಪ್ಪ ದೂರು ನೀಡಿರುವ ವಿಚಾರದ ಬಗ್ಗೆ ದೆಹಲಿಯಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ಈಶ್ವರಪ್ಪನವರು ಹಿರಿಯ ಸಚಿವರು. ಹೀಗೆ ಬಹಿರಂಗವಾಗಿ ಪತ್ರ ಬರೆಯಬಾರದಿತ್ತು. ಏನೇ ಮನಸ್ತಾಪವಿದ್ದರೂ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆಗೆ ಚರ್ಚಿಸಬೇಕು. ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪ ಮಾಡಬೇಕು. ಅದುಬಿಟ್ಟು ಹೀಗೆ ರಾಜ್ಯಪಾಲರಿಗೆ ಪತ್ರ ಬರೆಯಬಾರದಿತ್ತು ಎಂದಿದ್ದಾರೆ.
ಪ್ರಸ್ತುತ ನಾವು ಚುನಾವಣೆ ಮೇಲೆ ಗಮನ ಹರಿಸಿದ್ದೇವೆ. ಮೂರು ಉಪ ಚುನಾವಣೆಯಲ್ಲಿ ಗೆಲ್ಲಲಿದ್ದೇವೆ. ಬಳಿಕ ನಾವು ಪತ್ರದ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸೂಕ್ಷ್ಮವಾಗಿ ಹೇಳಿದ್ದಾರೆ.
ಇದನ್ನೂ ಓದಿ: ಸಿಎಂ ಯಡಿಯೂರಪ್ಪ ವಿರುದ್ಧ ಬಿಜೆಪಿ ಹೈಕಮಾಂಡ್, ರಾಜ್ಯಪಾಲರಿಗೆ ಸಚಿವ ಈಶ್ವರಪ್ಪ ದೂರು https://kannada.thebengalurulive.com/minister-eswarappa-lodges-complaint-against-cm-yediyurappa/
ಇದನ್ನೂ ಓದಿ: ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸುವಂತೆ ಸಿದ್ದರಾಮಯ್ಯ ಆಗ್ರಹ https://kannada.thebengalurulive.com/siddaramaiah-urges-the-governor-to-intervene-immediately-and-dismiss-chief-minister/