Home ರಾಜಕೀಯ ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರ ಸ್ಥಾಪನೆ : ಸಚಿವ ಚಲುವರಾಯಸ್ವಾಮಿ

ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರ ಸ್ಥಾಪನೆ : ಸಚಿವ ಚಲುವರಾಯಸ್ವಾಮಿ

46
0

ಬೆಳಗಾವಿ : ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಬೆಳಗಾವಿ ಸುವರ್ಣ ಸೌಧ ಸಭಾಂಗಣದಲ್ಲಿ ಕೃಷಿ ಮತ್ತು ಜಲಾನಯನ ಇಲಾಖೆಗಳ ವಿಭಾಗ ಮಟ್ಟದ ಸಭೆ ನಡೆಸಿ ಮಾತನಾಡಿದ ಅವರು, “ಕೃಷಿಕರಿಗೆ ಯೋಜಿತ ತರಬೇತಿ ನೀಡಿ‌ ಸಾಮರ್ಥ್ಯ ಅಭಿವೃದ್ಧಿಗೆ ಕ್ರಮವಹಿಸಲಾಗುತ್ತಿದೆ . ವಿಜಯನಗರ,  ಯಾದಗಿರಿ ,ಗದಗ ,ಕೋಲಾರ, ಚಾಮರಾಜನಗರ, ರಾಮನಗರ,ಉಡುಪಿ ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ ಮಾಡಲಾಗುವುದು” ಎಂದರು.

ಕಬ್ಬಿನಲ್ಲಿ ಕೀಟ ನಿಯಂತ್ರಣಕ್ಕೆ ಅವಶ್ಯ ವಿರುವ ಟ್ರೈಕೋಗ್ರಾಮಾ ಪರತಂತ್ರ ಜೀವಿಯ ಉತ್ಪಾದನೆಯಲ್ಲಿ ನೂತನ ತಾಂತ್ರಿಕತೆ ಅಳವಡಿಕೆಗೆ ಸೂಚಿಸಿದ ಕೃಷಿ ಸಚಿವರು, ಮುಂದಿನ 6 ತಿಂಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಿ ರೈತರಿಗೆ ಒದಗಿಸುವಂತೆ ನಿರ್ದೇಶನ ನೀಡಿದರು.

ಕೃಷಿ ಆಯುಕ್ತರಾದ ವೈ.ಎಸ್ ಪಾಟೀಲ್, ಜಲಾನಯನ ಇಲಾಖೆ ಆಯುಕ್ತರಾದ ಗಿರೀಶ್, ನಿರ್ದೇಶಕರಾದ ಪದ್ಮಯ್ಯ ನಾಯಕ್,ಕೃಷಿ ನಿರ್ದೇಶಕರಾದ  ಜಿ.ಟಿ ಪುತ್ರ ಅಪರ ನಿರ್ದೇಶಕರಾd ವೆಂಕಟರಮಣ ರೆಡ್ಡಿ ಮತ್ತಿತರರು ಈ‌ ಸಂದರ್ಭದಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here