- ಸುಧಾರಿತ ಕೋಶ ರಸಾಯನಶಾಸ್ತ್ರ ತಂತ್ರಜ್ಞಾನಕ್ಕಾಗಿ ಲಿಥಿಯಂ-ಐಯಾನ್ ಕೋಶಗಳನ್ನು ಉತ್ಪಾದಿಸುವ ಗಿಗಾ ಕಾರ್ಖಾನೆಗಳು
- ಅಂದಾಜು 1200 -1400 ಉದ್ಯೋಗ ಸೃಷ್ಟಿ
ಬೆಂಗಳೂರು:
ರಾಜ್ಯದಲ್ಲಿ ಲಿಥಿಯಂ-ಐಯಾನ್ ಸೆಲ್ ಉತ್ಪಾದನಾಗಿಗಾ ₹6,000 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲು ಎಕ್ಸೈಡ್ ಇಂಡಸ್ಟ್ರೀಸ್ ಮುಂದೆ ಬಂದಿದೆ.
ಈ ಸಂಬಂಧ ಗುರುವಾರ ಬೆಂಗಳೂರಿನ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಎಕ್ಸೈಡ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿದೇರ್ಶಕ ಮತ್ತು ಸಿಇಒ ಸುಬೀರ್ ಚಕ್ರವರ್ತಿ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಎಕ್ಸೈಡ್ ಇಂಡಸ್ಟ್ರೀಸ್ ಬಂಡವಾಳ ಹೂಡಿಕೆ ಮಾಡುತ್ತಿರುವ ಪರಿಣಾಮ ರಾಜ್ಯದಲ್ಲಿ ಒಟ್ಟು 1200 -1400 ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ. ಇದು ಸುಧಾರಿತ ಕೋಶ ರಸಾಯನಶಾಸ್ತ್ರ ತಂತ್ರಜ್ಞಾನಕ್ಕಾಗಿ ಭಾರತದ ಅತಿದೊಡ್ಡ ಗಿಗಾ ಕಾರ್ಖಾನೆಗಳಲ್ಲಿ ಒಂದಾಗಿದೆ ಎಂದು ಚಕ್ರವರ್ತಿ ಹೇಳಿದರು.
ಎಕ್ಸೈಡ್ ಇಂಡಸ್ಟ್ರೀಸ್ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯವಿಮಾನ ನಿಲ್ದಾಣದ ಬಳಿಯ ಹರಳೂರು ಕೈಗಾರಿಕಾ ಪ್ರದೇಶದಲ್ಲಿ 80 ಎಕರೆ ಭೂಮಿಯನ್ನು ಕೋರಿದೆ.
ಎಕ್ಸೈಡ್ ಇಂಡಸ್ಟ್ರೀಸ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುಬೀರ್ ಚಕ್ರವರ್ತಿ ಅವರು ಇಂದು ಮುಖ್ಯಮಂತ್ರಿ @BSBommai ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
— CM of Karnataka (@CMofKarnataka) March 31, 2022
ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. pic.twitter.com/tvKRNyRXOj
ಕಂಪನಿಗೆ ಎಲ್ಲಾ ರೀತಿಯ ಸರಕಾರ ಸಹಕಾರ ನೀಡುವುದಾಗಿ ಹೇಳಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ನಿರಾಣಿ ಅವರು ಈ ಯೋಜನೆಯು ಶೀಘ್ರ ಕಾರ್ಯಗತಗೊಳ್ಳಲಿ ಎಂದು ಹಾರೈಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಸಕ್ರಿಯವಾಗಿದ್ದು, ಕರ್ನಾಟಕದಲ್ಲಿ ಇರುವಂತಹ ಹೂಡಿಕೆದಾರ ಸ್ನೇಹಿ ವಾತಾವರಣ ದೇಶದ ಯಾವುದೇ ರಾಜ್ಯದಲ್ಲೂ ಇಲ್ಲ ಎಂದು ಮನವರಿಕೆ ಮಾಡಿಕೊಟ್ಟರು.
Exide has announced an investment of INR 6000 crores in K’taka. This will significantly amplify our industrial growth. Shri. Subir Chakraborty, MD & CEO & Shri. Amitabh Singh, Executive VP, Exide met me along with Smt. Gunjan Krishna, Commissioner, industrial development, GOK. pic.twitter.com/YgKq8Hfwl8
— Dr. Murugesh R Nirani (@NiraniMurugesh) March 31, 2022
ಕಳೆದ ಮೂರು ತ್ರೈಮಾಸಿಕಗಳಲ್ಲಿ ವಿದೇಶಿ ನೇರ ಹೂಡಿಕೆ (ಎಫ್ಡಿಐ )ಆಕರ್ಷಿಸುವಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಸಚಿವರು ಸುಬೀರ್ ಚಕ್ರವರ್ತಿ ಅವರಿಗೆ ತಿಳಿಸಿದರು.