False case should not be filed against pro-Kannada activist Narayana Gowda: Dy CM Shivakumar told Police Commissioner | ಕನ್ನಡಪರ ಹೋರಾಟಗಾರ ಕರವೇ ನಾರಾಯಣಗೌಡ ವಿರುದ್ಧ ಸುಳ್ಳು ಕೇಸು ದಾಖಲಿಸಬಾರದು : ಪೊಲೀಸ್ ಆಯುಕ್ತರಿಗೆ ಹೇಳಿದ ಡಿಸಿಎಂ ಶಿವಕುಮಾರ್
ಬೆಂಗಳೂರು:
ಕನ್ನಡಪರ ಹೋರಾಟಗಾರ ಕರವೇ ನಾರಾಯಣಗೌಡ ವಿರುದ್ಧ ಸುಳ್ಳು ಕೇಸು ದಾಖಲಿಸಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಪೊಲೀಸ್ ಆಯುಕ್ತರಿಗೆ ಹೇಳಿದ್ದಾರೆ.

ನಾರಾಯಣ ಗೌಡರ ಭೇಟಿ ವಿಚಾರವಾಗಿ ಕೇಳಿದಾಗ, “ನಾರಾಯಣಗೌಡರು ಕನ್ನಡದಲ್ಲಿ ನಾಮಫಲಕ ಹಾಕಲು ಹೋರಾಟ ಮಾಡುತ್ತಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರು ಹೋರಾಟಗಾರರು, ಹೋರಾಟ ಮಾಡುವುದು ಸಹಜ. ಕರ್ನಾಟಕದಲ್ಲಿ ಕನ್ನಡದಲ್ಲಿ ನಾಮಫಲಕ ಹಾಕುವಂತೆ ಆದೇಶ ಇದೆ. ಯಾರೋ ಅವರ ವಿರುದ್ಧ ದೂರು ನೀಡಿದ್ದಾರೆ. ಈ ಬಗ್ಗೆ ನಾನು ಪೊಲೀಸ್ ಆಯುಕ್ತರ ಜೊತೆ ಮಾತನಾಡಿದ್ದೇನೆ. ಹೋರಾಟಗಾರರಿಗೆ ನಾವು ಎಷ್ಟು ಗೌರವ ನೀಡಬೇಕೋ ಅದನ್ನು ನೀಡಲೇಬೇಕು. ಅವರುಗಳ ಹೋರಾಟದಿಂದ ಕನ್ನಡ ಉಳಿಯುತ್ತಿದೆ. ಅವರಿಗೆ ರಾಜಕೀಯ ಬೇಡ. ಅವರ ವಿರುದ್ಧ ಸುಳ್ಳು ಕೇಸು ದಾಖಲಿಸಬಾರದು ಎಂದು ಆಯುಕ್ತರಿಗೆ ಹೇಳಿದ್ದೇನೆ” ಎಂದು ತಿಳಿಸಿದರು.
