
ಬೆಂಗಳೂರು:
ಅಮೆರಿಕದಲ್ಲಿ ಎರಡು ದಿನಗಳ ಹಿಂದೆ ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು ಇವರ ಸಂಬಂಧಿಕರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಮೃತ ದೇಹಗಳನ್ನು ಇಲ್ಲಿಗೆ ತರಿಸುವುದು ಸೇರಿದಂತೆ ಹಲವು ತಾಂತ್ರಿಕ ನೆರವು ಕೋರಿದರು.
ಅಗತ್ಯ ನೆರವು ಒದಗಿಸುವಂತೆ ಮುಖ್ಯಮಂತ್ರಿಗಳು ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಸೂಚಿಸಿದರು.
ಅಮೇರಿಕಾದಲ್ಲಿ ಎರಡು ದಿನಗಳ ಹಿಂದೆ ಅನುಮಾನಾಸ್ಪದವಾಗಿ ಮೃತಪಟ್ಟ ದಾವಣಗೆರೆ ಮೂಲದ ದಂಪತಿಗಳ ಸಂಬಂಧಿಕರು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ, ಮೃತದೇಹಗಳನ್ನು ರಾಜ್ಯಕ್ಕೆ ತರಿಸುವುದು ಸೇರಿದಂತೆ ಇನ್ನಿತರೆ ರಾಜತಾಂತ್ರಿಕ ನೆರವು ಕೋರಿದರು.
— CM of Karnataka (@CMofKarnataka) August 21, 2023
ಈ ವೇಳೆ ಮೃತರ ಕುಟುಂಬದವರಿಗೆ ಅಗತ್ಯ ನೆರವು ಒದಗಿಸುವಂತೆ ಸರ್ಕಾರದ ಅಪರ ಮುಖ್ಯ… pic.twitter.com/LAdmHIwz08
ದಾವಣಗೆರೆ ಜಿಲ್ಲೆಯ ಅನಿವಾಸಿ ಭಾರತೀಯ ಕುಟುಂಬದ ಮೂವರು ಅಮೆರಿಕದ ಮೇರಿಲ್ಯಾಂಡ್ ನ ಬಾಲ್ಟಿಮೋರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.