Home ಸಿನಿಮಾ ಕುಂಬಳಕಾಯಿ ಒಡೆದ ಫ್ಯಾಂಟಸಿ: 24 ದಿನಗಳಲ್ಲಿ ಚಿತ್ರೀಕರಣ ಪೂರ್ಣ

ಕುಂಬಳಕಾಯಿ ಒಡೆದ ಫ್ಯಾಂಟಸಿ: 24 ದಿನಗಳಲ್ಲಿ ಚಿತ್ರೀಕರಣ ಪೂರ್ಣ

59
0

ಬೆಂಗಳೂರು:

ಇತ್ತೀಚೆಗಷ್ಟೇ ಚಿತ್ರೀಕರಣ ಶುರುಮಾಡಿದ್ದ ಫ್ಯಾಂಟಸಿ ತಂಡ ಇದೀಗ ಕುಂಬಳಕಾಯಿ ಒಡೆದು, ಚಿತ್ರೀಕರಣ ಮುಗಿಸಿಕೊಂಡ ಸಂಭ್ರಮದಲ್ಲಿದೆ. ಕೇವಲ 24 ದಿನದಲ್ಲಿ ಶೂಟಿಂಗ್​ ಕಂಪ್ಲೀಟ್​ ಮಾಡಿಕೊಂಡಿದೆ.

ಪವನ್​ ಡ್ರೀಮ್​ ಫಿಲಂಸ್​ ಲಾಂಛನದಲ್ಲಿ ಸಿದ್ಧವಾಗಿರುವ ‘ಫ್ಯಾಂಟಸಿ’ ಚಿತ್ರಕ್ಕೆ ಸ್ವತಃ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜತೆಗೆ ನಿರ್ಮಾಣವನ್ನೂ ಮಾಡಿದ್ದಾರೆ ಪವನ್ ಕುಮಾರ್ ಆರ್​. ನಿರ್ದೇಶಕರ ತಂದೆ ತಾಯಿ ಎಂ. ಮಹಾದೇವಿ, ಟಿ. ರಂಗಸ್ವಾಮಿ ಈ ಚಿತ್ರಕ್ಕೆ ಸಹ ನಿರ್ಮಾಪಕರಾಗಿದ್ದಾರೆ.

‘ನಿರ್ದೇಶಕ ಗುರು ದೇಶಪಾಂಡೆ ‘ಸಂಹಾರ’ ಸಿನಿಮಾ ಮೂಲಕ ಸಹಾಯಕ ನಿರ್ದೇಶಕರಾಗಿ ಚಂದನವನಕ್ಕೆ ಬಂದೆ. ಬಳಿಕ ‘ಅಮ್ಮ ಐ ಲವ್​ ಯೂ’, ‘ಆದ್ಯಾ’ ಸಿನಿಮಾಗಳಲ್ಲಿ ನಿರ್ದೇಶಕ ಕೆ.ಎಂ. ಚೈತನ್ಯ ಅವರೊಂದಿಗೆ ಕೆಲಸ ಮಾಡಿದ್ದೇನೆ. ನಾನು ಸಿನಿಮಾರಂಗಕ್ಕೆ ಬರುವುದಕ್ಕೆ ಚಿರು ಸರ್ಜಾ ಅವರೇ ಕಾರಣರಾದರೆ, ನಿರ್ದೇಶನದ ಪಾಠವನ್ನು ಚೈತನ್ಯ ಅವರಿಂದ ಕಲಿತಿದ್ದೇನೆ’ ಎಂದು ತಮ್ಮ ಹಿನ್ನೆಲೆ ಹೇಳಿಕೊಳ್ಳುವ ಪವನ್​, ಪ್ರಸ್ತುತ ಫ್ಯಾಂಟಸಿ ಸಿನಿಮಾ ಬಗ್ಗೆಯೂ ಮಾಹಿತಿ ಹಂಚಿಕೊಂಡರು.

‘ಇಂಜಿನಿಯರಿಂಗ್​ ಅರ್ಧಕ್ಕೆ ಬಿಟ್ಟು, ಸಿನಿಮಾ ಬೆನ್ನಹಿಂದೆ ಬಿದ್ದೆ. ಅಪ್ಪ ಅಮ್ಮನಿಂದಲೂ ಸಾಥ್​ ಸಿಕ್ಕಿತು. ಒಳ್ಳೇ ಕಥೆಯೂ ಸಿದ್ಧವಾಯ್ತು. ನಾನೇ ನಿರ್ಮಾಣ ಮಾಡುವ ಬಗ್ಗೆ ನಿರ್ಧರಿಸಿ ಕೆಲಸ ಆರಂಭಿಸಿದೆ. ಕಂಟೆಂಟ್ ಎಷ್ಟೇ ಗಟ್ಟಿಯಾಗಿದ್ದರೂ, ಅದನ್ನು ತೋರಿಸುವ ಛಾಯಾಗ್ರಾಹಕ ಅಷ್ಟೇ ಮುಖ್ಯ. ಆ ಸ್ಥಾನ ತುಂಬಲು ಪಿ.ಕೆ. ಎಚ್​ ದಾಸ್​ ಬಂದರು. ಶೇ. 100 ಕೇಳಿದರೆ, ಇನ್ನೂ ಹತ್ತು ಹೆಚ್ಚೇ ಕೊಟ್ಟಿದ್ದಾರೆ. ಗಣೇಶ್​ ನಾರಾಯಣ್​ ಸಂಗೀತ ನೀಡಿದ್ದಾರೆ. ಶಶಿರಾಮ್​ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ’ ಎಂದು ತಾಂತ್ರಿಕ ವರ್ಗವನ್ನೂ ಪರಿಚಯಿಸಿದರು.

ಚಿತ್ರದ ನಾಯಕಿ ಪ್ರಿಯಾಂಕಾ ಸಹ ಸಿನಿಮಾ ಬಗ್ಗೆ ತುಂಬ ಎಕ್ಸೈಟ್ ಆಗಿದ್ದಾರೆ. ‘ಬಿಗ್​ಬಾಸ್​ನಲ್ಲಿ ದಿನದೂಡಿದಂತೆ ಕೊರೋನಾದಲ್ಲಿಯೂ ಸಮಯ ಕಳೆದಿದ್ದೆವು. ಖುಷಿ ವಿಚಾರವನ್ನು ಕೇಳಿ ತುಂಬ ದಿನ ಆಗಿತ್ತು. ಆಗ ಸಿಕ್ಕ ಸಿಹಿ ಸುದ್ದಿ ಈ ಫ್ಯಾಂಟಸಿ ಸಿನಿಮಾ. ಇದು ನನ್ನ ಮೊದಲ ಸಿನಿಮಾ ಆದರೂ, ಧಾರಾವಾಹಿಯಂತೆ ಇಲ್ಲಿಯು ನೆಗೆಟಿವ್​ ಪಾತ್ರ ಮುಂದುವರಿದಿದೆ’ ಎಂದಿದ್ದಾರೆ. ಹರಿಣಿ, ಮೂರ್ತಿ, ಗೌರಿ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

LEAVE A REPLY

Please enter your comment!
Please enter your name here