Home ಅಪರಾಧ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಭೀಕರ ಅಪಘಾತ: ತಂದೆ ಇಬ್ಬರು ಮಕ್ಕಳು ಸೇರಿ ನಾಲ್ವರ ದುರ್ಮರಣ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಭೀಕರ ಅಪಘಾತ: ತಂದೆ ಇಬ್ಬರು ಮಕ್ಕಳು ಸೇರಿ ನಾಲ್ವರ ದುರ್ಮರಣ

147
0
Father, two children, four killed on Bangalore-Mysore Expressway near Ramanagara

ಚನ್ನಪಟ್ಟಣ (ರಾಮನಗರ):

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಮೃತಪಟ್ಟವರು ಟಿ.ನರಸೀಪುರ ಮೂಲದವರು ಎಂದು ಹೇಳಲಾಗುತ್ತಿದೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಈ ದುರಂತ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಇನ್ನೊವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ.

Father, two children, four killed on Bangalore-Mysore Expressway near Ramanagara

ಡಿಕ್ಕಿ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇನ್ನೊವಾ ಕಾರಿನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ಸ್ಥಳಕ್ಕೆ ಚನ್ನಪಟ್ಟಣ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here