Neha Hiremath | ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಝ್ ಗೆ ಆರು ದಿನ ಸಿಐಡಿ ಕಸ್ಟಡಿ
ಹುಬ್ಬಳ್ಳಿ, ಎ.24: ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ(23) ಕೊಲೆ ಪ್ರಕರಣದ ಆರೋಪಿ ಫಯಾಝ್ ಗೆ ಆರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಒಂದನೇ ಹೆಚ್ಚುವರಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ. ಹುಬ್ಬಳ್ಳಿಯ ನ್ಯಾಯಾಲಯ ಆದೇಶ ಹೊರಡಿಸಿದೆ.
ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ನಲ್ಲಿ ನೇಹಾ ಹಿರೇಮಠ ಅವರನ್ನು ಎಪ್ರಿಲ್ 18ರಂದು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಫಯಾಝ್ ನನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
ರಾಜ್ಯ ಸರಕಾರ ಈ ಪ್ರಕರಣದ ವಿಚಾರಣೆಯನ್ನು ಇತ್ತೀಚೆಗೆ ಸಿಐಡಿಗೆ ಒಪ್ಪಿಸಿದೆ.
