Home Uncategorized ಎಫ್ ಡಿ ಎ ಪ್ರಶ್ನಪತ್ರಿಕೆ ಸೋರಿಕೆ: 14 ಆರೋಪಿಗಳ ಬಂಧನ

ಎಫ್ ಡಿ ಎ ಪ್ರಶ್ನಪತ್ರಿಕೆ ಸೋರಿಕೆ: 14 ಆರೋಪಿಗಳ ಬಂಧನ

79
0

ಬೆಂಗಳೂರು:

ಕರ್ನಾಟಕ ಲೋಕಸೇವಾ ಆಯೋಗದಿಂದ ಇಂದು ನಿಗಧಿಯಾಗಿದ್ದಂತ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಪ್ರಕರಣದ ಕಿಂಗ್ ಪಿನ್ ಸೇರಿ 14 ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು, ಈ ವರೆಗೂ 14 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದೆ. ಆರೋಪಿಗಳಿಂದ ರೂ.35 ಲಕ್ಷ ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.

ರಾಜ್ಯದಾದ್ಯಂತ ಜನವರಿ 24 ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಸಂಗತಿಯನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದು, ಪ್ರಶ್ನೆಪತ್ರಿಕೆ ಹಂಚಲು ಬಳಕೆ ಮಾಡುತ್ತಿದ್ದ ಮೂರು ವಾಹನಗಳನ್ನೂ ಜಪ್ತಿ ಮಾಡಲಾಗಿದೆ. ಸೋರಿಕೆ ಎಲ್ಲಿಂದ ಆಯಿತು ಎಂಬುದು ಇನ್ನಷ್ಟೇ ತಿಳಿಯಬೇಕಿದೆ ಎಂದೂ ತಿಳಿಸಿದರು.

LEAVE A REPLY

Please enter your comment!
Please enter your name here