ಬೆಂಗಳೂರು:
ಚಲನಚಿತ್ರ ಕಲಾವಿದರು ,ರಂಗಭೂಮಿ ಕಲಾವಿದರಿಗೆ ಸರ್ಕಾರಿ ದರದಲ್ಲಿ ನಿವೇಶನ ಹಂಚಿಕೆ ಮಾಡವ ಸಂಬಂಧ ಯೋಜನೆ ರೂಪಿಸುವುದಾಗಿ ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ,ಗೋವಿಂದರಾಜನಗರ ವಾರ್ಡಿನ ಪಾಲಿಕೆಸೌಧದ ಅವರಣದಲ್ಲಿ ಇಂದು ವಿ.ಸೋಮಣ್ಣ ಪ್ರತಿಷ್ಟಾನ ವತಿಯಿಂದ ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಹಾಗೂ ಚಲನಚಿತ್ರ ಕಲಾವಿದರು ಮತ್ತು ರಂಗಭೂಮಿ ಕಲಾವಿದರುಗಳಿಗೆ ದಿನಸಿ ಸಾಮಾಗ್ರಿಗಳ ವಿತರಣೆ ಸಮಾರಂಭದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.
ಸಚಿವರು ಹಾಗೂ ಅತಿಥಿಗಳು ದೀಪಾ ಬೆಳಗಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿ ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ನಂತರ ಚಲನಚಿತ್ರ ಕಲಾವಿದರು ಮತ್ತು ರಂಗಭೂಮಿ ಕಲಾವಿದರಿಗೆ ದಿನಸಿ ಸಾಮಾಗ್ರಿಗಳ ಆಹಾರ ಕಿಟ್ ಗಳನ್ನು ವಿತರಿಸಲಾಯಿತು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ ಶಾಸಕ ಎಸ್.ಆರ್.ವಿಶ್ವನಾಥ್, ಯುವನಾಯಕ ಡಾ|.ಅರುಣ್ ಸೋಮಣ್ಣ, ಚಲನಚಿತ್ರ ನಟ ಗೋಲ್ಡನ್ ಸ್ಟಾರ್ ಗಣೇಶ್ ,ಅರಣ್ಯ ಅಭಿವೃದ್ದಿ ನಿಗಮ ಅಧ್ಯಕ್ಷರೂ ಆದ ಚಲನಚಿತ್ರ ನಟಿ ಶ್ರೀಮತಿ ತಾರ ಆನುರಾಧ, ಚಲನಚಿತ್ರ ನಟ ಶ್ರೀನಿವಾಸಮೂರ್ತಿ, ಚಿತ್ರ ಸಾಹಿತಿ ನಾಗೇಂದ್ರ ಪ್ರಸಾದ್, ಪಾಲಿಕೆ ಮಾಜಿ ಸದಸ್ಯರಾದ ಕೆ.ಉಮೇಶ್ ಶೆಟ್ಟಿ, ವಾಗೇಶ್, ದಾಸೇಗೌಡ, ಶ್ರೀಮತಿ ಶಕುಂತಲ ಡೊಡ್ಡ ಲಕ್ಕಪ್ಪ. ಸವಿತಾ ಕೃಷ್ಣ, ರೂಪಲಿಂಗೇಶ್ವರ್, ಗೋವಿಂದರಾಜನಗರ ಮಂಡಲ ಅಧ್ಯಕ್ಷ ವಿಶ್ವನಾಥಗೌಡ ಭಾಗವಹಿಸಿದ್ದರು.