Home ಬೆಂಗಳೂರು ನಗರ ಕೆಜಿಎಫ್ ಬಾಬು ವಿರುದ್ಧ ಎಫ್‌ಐಆರ್ ದಾಖಲು

ಕೆಜಿಎಫ್ ಬಾಬು ವಿರುದ್ಧ ಎಫ್‌ಐಆರ್ ದಾಖಲು

55
0
FIR lodged against KGF Babu

ಐಟಿ ದಾಳಿ ವೇಳೆ ಸಾವಿರಾರು ವೋಟರ್ ಐಡಿ ಪತ್ತೆ

ಬೆಂಗಳೂರು:

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಬೆನ್ನಲ್ಲೇ ಉದ್ಯಮಿ ಹಾಗೂ ಕಾಂಗ್ರೆಸ್‌ ನಾಯಕ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಐಟಿ ದಾಳಿ ವೇಳೆ ಕೆಜಿಎಫ್ ಬಾಬು ಮನೆಯಲ್ಲಿ ಸಾವಿರಕ್ಕೂ ಹೆಚ್ಚು ವೋಟರ್ ಐಡಿಗಳು ಪತ್ತೆಯಾಗಿದ್ದು, ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ ಕೆಜಿಎಫ್ ಬಾಬು ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿರುವ ಕೆಜಿಎಫ್ ಬಾಬು ಅವರ ನಿವಾಸದ ಮೇಲೆ ಬುಧವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಬಾಬು ಮನೆಯ ಮೊದಲ ಮಹಡಿಯ ಕೊಠಡಿಯಲ್ಲಿ 1925 ವೋಟರ್ ಐಡಿಗಳು ಪತ್ತೆಯಾಗಿದ್ದವು ಎಂದು ಹೇಳಲಾಗಿದೆ.

ಎಲ್ಲಾ ವೋಟರ್ ಐಡಿಗಳಿಗೆ ಎಚ್‌ಡಿಎಫ್‌ಸಿ ಬ್ಯಾಂಕ್‌ನ 5000 ರುಪಾಯಿ ಮೌಲ್ಯದ ಚೆಕ್‌ಗಳನ್ನು ಲಗತ್ತಿಸಲಾಗಿತ್ತು. ನೆಲ ಮಹಡಿಯಲ್ಲಿ 26 ಬ್ಯಾಗ್‌ಗಳಲ್ಲಿ ಸೀರೆಗಳನ್ನು ಸಂಗ್ರಹಿಸಿ ಇಡಲಾಗಿತ್ತು, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಮುದ್ರಣ ಪ್ರತಿಗಳು ಮತ್ತು 481 ದುಬಾರಿ ಬೆಲೆಯ ಸೂಟ್‌ಗಳು ಕೂಡ ಪತ್ತೆಯಾಗಿದ್ದವು.

LEAVE A REPLY

Please enter your comment!
Please enter your name here