ಬೆಂಗಳೂರು:
ಬೆಂಗಳೂರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬಳಿ ಅಗ್ನಿ ಅವಘಡ ಸಂಭವಿಸಿದೆ.
ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದಾರೆ.
ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗ್ಡೆ ಮಾತನಾಡಿ, ರೈಲು ಸಂಖ್ಯೆ 11301 ಉದ್ಯಾನ್ ಎಕ್ಸ್‌ಪ್ರೆಸ್ ಪ್ಲಾಟ್‌ಫಾರ್ಮ್ ಸಂಖ್ಯೆ 3 ರಲ್ಲಿ 05.45 ಗಂಟೆಗೆ ಕೆಎಸ್‌ಆರ್ ಬೆಂಗಳೂರಿಗೆ ಆಗಮಿಸಿತು. ಸುಮಾರು 07.10 ಗಂಟೆಗೆ ಬಿ 1 ಮತ್ತು ಬಿ 2 ಕೋಚ್‌ಗಳಲ್ಲಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಅಗ್ನಿಶಾಮಕ ದಳಕ್ಕೆ ಸಂದೇಶ ನೀಡಲಾಗಿದೆ. ಬೆಳಗ್ಗೆ 7.35ಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿತು. ಹೊಗೆಗೆ ಕಾರಣ ತನಿಖೆ ನಡೆಯುತ್ತಿದೆ. ಯಾವುದೇ ಪ್ರಯಾಣಿಕರಿಗೆ ಯಾವುದೇ ಗಾಯ/ಅನಾಹುತವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.